ಬೆಳಗಾವಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ: ಸಂತ್ರಸ್ತೆಯ ಫೋಟೊ, ಸಂದರ್ಶನ ಪ್ರಸಾರ ಮಾಡದಂತೆ ಹೈಕೋರ್ಟ್ ನಿರ್ದೇಶನ

ಸಂತ್ರಸ್ತೆಗೆ ಸಾಂತ್ವನ ಹೇಳಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ಸಂದರ್ಭದಲ್ಲಿ ಮಾಧ್ಯಮ ವರದಿಗಳಲ್ಲಿ ಸಂತ್ರಸ್ತೆಯ ಮಸುಕಾದ ಛಾಯಾಚಿತ್ರಗಳನ್ನು ಪ್ರಕಟಿಸಿರುವುದನ್ನು ಪೀಠವು ವಿಚಾರಣೆ ವೇಳೆ ಉಲ್ಲೇಖಿಸಿದೆ.

ಬೆಳಗಾವಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ: ಸಂತ್ರಸ್ತೆಯ ಫೋಟೊ, ಸಂದರ್ಶನ ಪ್ರಸಾರ ಮಾಡದಂತೆ ಹೈಕೋರ್ಟ್ ನಿರ್ದೇಶನ
ಕರ್ನಾಟಕ ಹೈಕೋರ್ಟ್
Follow us
TV9 Web
| Updated By: Ganapathi Sharma

Updated on: Dec 13, 2023 | 7:04 AM

ಬೆಳಗಾವಿ, ಡಿಸೆಂಬರ್ 13: ಬೆಳಗಾವಿ (Belagavi) ತಾಲೂಕಿನಲ್ಲಿ ಮಹಿಳೆಯೊಬ್ಬರನ್ನು ವಿದ್ಯುತ್ ಕಂಬಕ್ಕೆ ಕಟ್ಟಿಹಾಕಿ ಅವರ ಮೇಲೆ ಹಲ್ಲೆ ನಡೆಸಿ, ಬೆತ್ತಲೆಯಾಗಿ ಮೆರವಣಿಗೆ ನಡೆಸಿದ ಘಟನೆ ಸಂಬಂಧ ಮಾಧ್ಯಮಗಳಲ್ಲಿ ಪ್ರಸಾರವಾದ ವಿಚಾರಗಳ ಬಗ್ಗೆ ಕರ್ನಾಟಕ ಹೈಕೋರ್ಟ್ (Karnataka High Court) ಕಳವಳ ವ್ಯಕ್ತಪಡಿಸಿದೆ. ಈ ವಿಚಾರವಾಗಿ ಸ್ವಯಂಪ್ರೇರಿತವಾಗಿ ವಿಚಾರಣೆ ನಡೆಸಿದ ಕೋರ್ಟ್, ಯಾವುದೇ ರಾಷ್ಟ್ರೀಯ ಅಥವಾ ಪ್ರಾದೇಶಿಕ ಚಾನೆಲ್‌ಗಳಲ್ಲಿ ಸಂತ್ರಸ್ತೆಯ ಸಂದರ್ಶನಗಳನ್ನು ಪ್ರಸಾರ ಮಾಡದಂತೆ ಸುದ್ದಿ ವಾಹಿನಿಗಳಿಗೆ ನಿರ್ದೇಶನ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ನೇತೃತ್ವದ ವಿಭಾಗೀಯ ಪೀಠವು ವಿಚಾರಣೆ ನಡೆಸಿತು.

ಸಂತ್ರಸ್ತೆಯ ಕುರಿತಾದ ಸುದ್ದಿ ಲೇಖನಗಳ ಶೀರ್ಷಿಕೆ ಮತ್ತು ವಿಷಯಗಳು ನಮ್ಮ ಆತ್ಮಸಾಕ್ಷಿಯನ್ನು ಆಘಾತಗೊಳಿಸುವುದಷ್ಟೇ ಅಲ್ಲದೆ, ದುಃಖ ಮತ್ತು ನೋವಿನಿಂದ ತಲೆ ತಗ್ಗಿಸುವಂತೆ ಮಾಡುತ್ತದೆ. ಒಂದು ಕಡೆ ಈ ದೇಶವು 76ನೇ ವರ್ಷದ ಸ್ವಾತಂತ್ರ್ಯವನ್ನು ‘ಆಜಾದಿ ಕಾ ಅಮೃತೋತ್ಸವ’ ಎಂದು ಆಚರಿಸುತ್ತಿದ್ದರೆ, ಮತ್ತೊಂದೆಡೆ ಪ್ರಗತಿಪರ ಮತ್ತು ಸಾಮಾಜಿಕ ನ್ಯಾಯದ ದೀಕ್ಷೆಯ ಪ್ರವರ್ತಕ ರಾಜ್ಯ ಎಂದು ಖ್ಯಾತಿವೆತ್ತ ಕರ್ನಾಟಕ ರಾಜ್ಯದಲ್ಲಿ ಇಂಥ ಘಟನೆಯ ಬಗ್ಗೆ ಕೇಳಬೇಕಾಗಿ ಬಂದಿದೆ ಎಂದು ಪೀಠ ಹೇಳಿದೆ.

ಸಂತ್ರಸ್ತೆಗೆ ಸಾಂತ್ವನ ಹೇಳಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ಸಂದರ್ಭದಲ್ಲಿ ಮಾಧ್ಯಮ ವರದಿಗಳಲ್ಲಿ ಸಂತ್ರಸ್ತೆಯ ಮಸುಕಾದ ಛಾಯಾಚಿತ್ರಗಳನ್ನು ಪ್ರಕಟಿಸಿರುವುದನ್ನು ಪೀಠವು ಉಲ್ಲೇಖಿಸಿದೆ.

ಕೆಲವು ವಿದ್ಯುನ್ಮಾನ ಮಾಧ್ಯಮಗಳು ಅಥವಾ ಅದರ ಪ್ರತಿನಿಧಿಗಳು ಸಂತ್ರಸ್ತೆಯ ಪ್ರತಿಕ್ರಿಯೆ ಮತ್ತು ನಿರೂಪಣೆಯನ್ನು ಛಾಯಾಚಿತ್ರ ಮತ್ತು ವೀಡಿಯೊಗ್ರಾಫ್ ಮಾಡುತ್ತಿರುವುದನ್ನು ಫೋಟೋದಲ್ಲಿ ಗಮನಿಸಬಹುದಾಗಿದೆ ಎಂದು ಪೀಠ ಹೇಳಿದೆ.

ಯಾವುದೇ ಮಾಧ್ಯಮ ಸಂಸ್ಥೆ ಅಥವಾ ಅದರ ಪ್ರತಿನಿಧಿಗಳು ಸಚಿವರ ಭೇಟಿಯ ಸಮಯದಲ್ಲಿ ಸಂತ್ರಸ್ತೆಯ ಸಂದರ್ಶನವನ್ನು ಅಥವಾ ಸಂತ್ರಸ್ತೆಯ ಯಾವುದೇ ಹೇಳಿಕೆಯನ್ನು ವೀಡಿಯೊಗ್ರಾಫ್ ಮಾಡಿದ್ದರೆ, ಅಂತಹ ಸಂದರ್ಶನ ಅಥವಾ ಸಂವಾದವನ್ನು ಯಾವುದೇ ರಾಷ್ಟ್ರೀಯ ಅಥವಾ ಪ್ರಾದೇಶಿಕ ಚಾನೆಲ್‌ಗಳಲ್ಲಿ ಪ್ರಸಾರ ಮಾಡದಂತೆ ನ್ಯಾಯಾಲಯವು ಈ ಮೂಲಕ ನಿರ್ದೇಶಿಸುತ್ತದೆ. ಅಂತಹ ಸಂದರ್ಶನವನ್ನು ಈಗಾಗಲೇ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ಪ್ರದರ್ಶಿಸಿದ್ದರೆ ಅಥವಾ ಪ್ರಸಾರ ಮಾಡಿದ್ದರೆ, ಅದನ್ನು ಮುಂದುವರಿಸಬಾರದು. ಇನ್ನು ಮುಂದೆ ಪ್ರದರ್ಶನ ಅಥವಾ ಪ್ರಸಾರ ಮಾಡಬಾರದು ಎಂದು ಪೀಠ ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ: ಓಡಿ ಹೋಗಿದ್ದ ಯುವಕ, ಯುವತಿ ಪ್ರತ್ಯಕ್ಷ

ಈ ಮಧ್ಯೆ, ಘಟನೆಯ ಕುರಿತ ಸ್ಥಿತಿಗತಿ ವರದಿಯನ್ನು ಡಿಸೆಂಬರ್ 14ರಂದು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಅಡ್ವೊಕೇಟ್ ಜನರಲ್‌ಗೆ ಹೈಕೋರ್ಟ್​ ಸೂಚಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್