ಚೆನ್ನಮ್ಮನ ಅರಮನೆ ನಿರ್ಮಾಣಕ್ಕೆ 115 ಕೋಟಿ ರೂ ಸಿಎಂ ಬೊಮ್ಮಾಯಿ ಘೋಷಣೆ

ರಾಜ್ಯ ಸರ್ಕಾರವು ಇದೇ ಮೊದಲ ಬಾರಿಗೆ ಕಿತ್ತೂರು ಉತ್ಸವವನ್ನು ರಾಜ್ಯಮಟ್ಟದ ಉತ್ಸವವಾಗಿ ಆಚರಿಸುತ್ತಿದ್ದು, ಮೂರು ದಿನಗಳ ಉತ್ಸವಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು.

ಚೆನ್ನಮ್ಮನ ಅರಮನೆ ನಿರ್ಮಾಣಕ್ಕೆ 115 ಕೋಟಿ ರೂ ಸಿಎಂ ಬೊಮ್ಮಾಯಿ ಘೋಷಣೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Follow us
TV9 Web
| Updated By: ವಿವೇಕ ಬಿರಾದಾರ

Updated on:Oct 24, 2022 | 9:05 PM

ಬೆಳಗಾವಿ: ಕಿತ್ತೂರು ಬಗ್ಗೆ ಎಷ್ಟು ಅಭಿಮಾನ ಪಡುತ್ತಿದ್ದೇವೆ ಅಷ್ಟೇ ಅಭಿವೃದ್ಧಿ ಅವಶ್ಯಕವಿದೆ. ಚೆನ್ನಮ್ಮನ ಅರಮನೆ ನಿರ್ಮಾಣಕ್ಕೆ ನಮ್ಮ ನಾಯಕ ಮಾಜಿ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ (BS Yadiyurappa) 50 ಕೋಟಿ ಕೊಟ್ಟಿದ್ದರು, ನಾವು ಈಗ ಅದನ್ನು 115 ಕೋಟಿ ರೂ ಕೊಟ್ಟಿದ್ದೇವೆ ಎಂದು ಚೆನ್ನಮ್ಮನ ಕಿತ್ತೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಹೇಳಿದ್ದಾರೆ. ಬೆಳಗಾವಿ (Belagavi) ಜಿಲ್ಲೆಯ ಚೆನ್ನಮ್ಮನ ಕಿತ್ತೂರಿನಲ್ಲಿ (Kittur Chennamma) ಅ. 23ರಿಂದ ಮೂರು ದಿನಗಳ ಕಾಲ ಕಿತ್ತೂರು ಉತ್ಸವ (Kittur Ustav) ನಡೆಯುತ್ತಿದ್ದು, ಇದೇ ಮೊದಲ ಬಾರಿಗೆ ರಾಜ್ಯ ಸರ್ಕಾರವು ಚೆನ್ನಮ್ಮನ ಕಿತ್ತೂರು ಉತ್ಸವವನ್ನು ರಾಜ್ಯಮಟ್ಟದ ಉತ್ಸವವಾಗಿ ಆಚರಿಸುತ್ತಿದೆ.  ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಈ ಭಾಗದ ನೀರಾವರಿ ಯೋಜನೆಗೆ ಶಾಸಕ ಮಹಾಂತೇಶ್ ದೊಡ್ಡಗೌಡರ 580 ಕೋಟಿ ರೂಪಾಯಿ ಪಡೆದಿದ್ದಾರೆ ಎಂದು ತಿಳಿಸಿದ್ದಾರೆ.

ಪ್ರಧಾನಿಯವರ ಜಲಜೀವನ್ ಮಿಷನ್ ಅಡಿಯಲ್ಲಿ ಎಲ್ಲ ಊರಿಗೆ ಕುಡಿಯುವ ನೀರು ಪೂರೈಕೆಯಾಗುತ್ತದೆ. ಕಿತ್ತೂರು, ಬೈಲಹೊಂಗಲ, ಖಾನಾಪುರ, ಸವದತ್ತಿ ಸೇರಿ 980 ಕೋಟಿ ರೂ. ನೀಡಿದ್ದೇವೆ. ಅರಮನೆಯ ಪಕ್ಕದಲ್ಲೇ ಕೋಟೆ ನಿರ್ಮಾಣಕ್ಕೆ, ಭೂಸ್ವಾಧೀನ ಮಾಡಿಕೊಳ್ಳಲು ಎಷ್ಟು ಖರ್ಚು ಬರುತ್ತೊ ಅದನ್ನು ಕೊಟ್ಟು ಸ್ವಾಧೀನ ಮಾಡಿಕೊಳ್ಳುತ್ತೇವೆ. ಮೂಲ ಚನ್ನಮ್ಮ ಕೋಟೆ ಅಭಿವೃದ್ಧಿಗೆ, ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ 27 ಕೋಟಿ ರೂ. ನೀಡಿದ್ದೇವೆ ಎಂದು ತಿಳಿಸಿದರು.

ಕಿತ್ತೂರು ಬಳಿಯ ಕೆಐಎಡಿಬಿ ಯೋಜನೆಯಗೆ ಒಂದು ಸಾವಿರ ಕೋಟಿ ಅನುದಾನ ಘೋಷಣೆ ಮಾಡಿದ್ದೇವೆ. ಅಲ್ಲಿ ಕನಿಷ್ಟ 50 ಸಾವಿರ ಯುವಕರಿಗೆ ಕೆಲಸ ಸಿಗಬೇಕೆಂಬ ಅಭಿಲಾಷೆ ನಮ್ಮದಾಗಿದೆ. ಧಾರವಾಡ – ಕಿತ್ತೂರು – ಬೆಳಗಾವಿ ರೈಲು ಕಾಮಗಾರಿಗೆ ಕೇಂದ್ರ ಒಪ್ಪಿಗೆ ಕೊಟ್ಟಿದೆ. ಭೂಸ್ವಾಧೀನ ಮಾಡಿ ಆದಷ್ಟು ಬೇಗ ಕೆಲಸ ಪ್ರಾರಂಭ ಮಾಡುತ್ತೇವೆ ಎಂದು ಭರವಸೆ ನೀಡಿದರು.

ಕಿತ್ತೂರು ಕರ್ನಾಟಕದ ಸಮಗ್ರ ಅಭಿವೃದ್ಧಿ ಸಂಕಲ್ಪವನ್ನು ನಮ್ಮ ಸರ್ಕಾರ ಮಾಡಿದೆ. ನಿಮ್ಮೆಲ್ಲರ ಆಶೀರ್ವಾದ, ಚನ್ನಮ್ಮ ಆಶೀರ್ವಾದದಿಂದ ಎರಡು ನೀರಾವರಿ ಯೋಜನೆಗೆ ಅನುಮತಿ ಪಡೆಯಬೇಕಿದೆ. ಕೃಷ್ಣ ಮೇಲ್ದಂಡೆ ಸ್ಟೇಜ್ 3 ಯೋಜನೆಗೆ ಕೋರ್ಟ್​​ನಲ್ಲಿದ್ದು ಒಳ್ಳೆ ಸುದ್ದಿ ಬಂದರೆ ಯೋಜನೆ ಪ್ರಾರಂಭ ಮಾಡುತ್ತೇವೆ. ಆಲಮಟ್ಟಿ ಆಣೆಕಟ್ಟುನ್ನು ಎತ್ತರ ಮಾಡುತ್ತೇವೆ. ಕಳಸಾ ಬಂಡೂರಿ ಯೋಜನೆ ಅಂತಿಮ ಹಂತದಲ್ಲಿದೆ. ಅದಕ್ಕೂ ಒಪ್ಪಿಗೆ ಪಡೆದು ಆದಷ್ಟು ಬೇಗ ಕೆಲಸ ಮುಗಿಸುತ್ತೇವೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:28 pm, Mon, 24 October 22

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ