AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲಿ ಇಂದು 11 ದಿನದ ಸಾರ್ವಜನಿಕ ಗಣೇಶ ವಿಸರ್ಜನೆ ಮೆರವಣಿಗೆ: ನಗರದಲ್ಲಿ ಪೊಲೀಸ್​ ಸರ್ಪಗಾವಲು

ಈ ಬಾರಿ ಬೆಳಗಾವಿ ನಗರದಲ್ಲಿ 937 ಸಾರ್ವಜನಿಕ ವಿಘ್ನನಿವಾರಕನ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿದೆ. ಮನೆ ಗಣಪ ಸೇರಿದಂತೆ ನಗರದಲ್ಲಿನ ಐದು ಸಾವಿರಕ್ಕೂ ಅಧಿಕ ಗಣಪತಿಗಳನ್ನು ಶುಕ್ರವಾರ ವಿಸರ್ಜಿಸಲಾಗುತ್ತದೆ.

ಬೆಳಗಾವಿಯಲ್ಲಿ ಇಂದು 11 ದಿನದ ಸಾರ್ವಜನಿಕ ಗಣೇಶ ವಿಸರ್ಜನೆ ಮೆರವಣಿಗೆ: ನಗರದಲ್ಲಿ ಪೊಲೀಸ್​ ಸರ್ಪಗಾವಲು
ಗಣೇಶ ಮೆರವಣಿಗೆ
Sahadev Mane
| Edited By: |

Updated on:Sep 28, 2023 | 11:04 AM

Share

ಬೆಳಗಾವಿ ಸೆ.28: ಕರ್ನಾಟಕದಲ್ಲಿ ಸಾರ್ವಜನಿಕ ಗಣೇಶೋತ್ಸವ (Ganesha Chaturthi) ಮೊಟ್ಟಮೊದಲಿಗೆ ಪ್ರಾರಂಭವಾಗಿದ್ದು ಬೆಳಗಾವಿಯಲ್ಲಿ. 1906ರಲ್ಲಿ ಬಾಲಗಂಗಾಧರ ತಿಲಕ್​ರು (Bal Gangadhar Tilak) ಮೊದಲ ಬಾರಿಗೆ ಸಾರ್ವಜನಿಕ ಗಣೇಶವನ್ನು ಪ್ರತಿಷ್ಠಾಪನೆ ಮಾಡಿದರು. ಬೆಳಗಾವಿಯಿಂದ (Belagavi) ಪ್ರಾರಂಭವಾದ ಸಾರ್ವಜನಿಕ ಗಣೇಶೋತ್ಸವ ನಾಡಿನ ಮೂಲೆ ಮೂಲೆಗು ಪಸರಿಸಿತು. ವಿನಾಯಕನನ್ನು ಪ್ರತಿಷ್ಠಾಪಿಸಿ ಇಂದಿಗೆ 11 ದಿನ ಕಳೆದವು. ಉತ್ತರ ಕರ್ನಾಟಕದ ಬಹುತೇಕ ಸಾರ್ವಜನಿಕ ಗಣೇಶ ಮೂರ್ತಿಗಳನ್ನು ಇಂದು ವಿಸರ್ಜಿಸಲಾಗುತ್ತದೆ. ಹಾಗೆ ಕುಂದಾನಗರಿ ಬೆಳಗಾವಿಯಲ್ಲಿ ಇಂದು 11 ದಿನದ ಸಾರ್ವಜನಿಕ ಹಾಗೂ ಮನೆಯಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣಪತಿ ಮೂರ್ತಿಗಳನ್ನು ವಿಸರ್ಜಿಸಲಾಗುತ್ತದೆ.

ಈ ಬಾರಿ ನಗರದಲ್ಲಿ 937 ಸಾರ್ವಜನಿಕ ವಿಘ್ನನಿವಾರಕನ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿದೆ. ಮನೆ ಗಣಪ ಸೇರಿ ಇಡೀ ನಗರದಲ್ಲಿ ಐದು ಸಾವಿರಕ್ಕೂ ಅಧಿಕ ಗಣಪತಿಗಳನ್ನು ಶುಕ್ರವಾರ ವಿಸರ್ಜಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಆಯುಕ್ತ ಸಿದ್ದರಾಮಪ್ಪ ನೇತೃತ್ವದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ಇದನ್ನೂ ಓದಿ: ನೀರಿನ ಬದಲು ಮಣ್ಣಿನಲ್ಲಿ ಹೂಳುವ ಮೂಲಕ ಗಣೇಶ ವಿಸರ್ಜನೆ; ವಿನೂತನ ವಿಧಾನ

ರಾಜ್ಯದ ವಿವಿಧ ಜಿಲ್ಲೆಗಳಿಂದ ಐದು ಜನ ಎಸ್‌ಪಿ, 20 ಜನ ಡಿಎಸ್‌ಪಿ, 72 ಜನ ಪಿಐ, 106 ಜನ ಪಿಎಸ್ಐ, 210 ಜನ ಎಎಸ್‌ಐ, 208 ಜನ ಪಿಸಿ, 405 ಜನ ಹೋಮ್ ಗಾರ್ಡ್, 10 ಮಂದಿ ಕೆಎಸ್‌ಆರ್‌ಪಿ ಪ್ರಹಾರ ದಳ ಆಗಮಿಸಿದ್ದಾರೆ. ಜತೆಗೆ ಸ್ಥಳೀಯ 3 ಜನ ಎಸ್‌ಪಿ ದರ್ಜೆಯ ಅಧಿಕಾರಿಗಳು,5 ಜನ ಡಿಎಸ್‌ಪಿ, 21 ಜನ ಪಿಐ, 36 ಜನ ‌ಪಿಎಸ್‌ಐ, 810 ಜನ ಪಿಸಿ, 8 ಜನ ಸಿಎಆರ್​ ಪ್ರಹಾರ ದಳವನ್ನು ನಿಯೋಜಿಸಲಾಗಿದೆ. ಅತೀ ಸೂಕ್ಷ್ಮ ಸ್ಥಳಗಳಲ್ಲಿ 487ಸಿಸಿಟಿವಿ ಕ್ಯಾಮರಾ ಅಳವಡಿಸಲಾಗಿದೆ. ಮಹಾನಗರ ಪಾಲಿಕೆ ಗಣಪತಿ ವಿಸರ್ಜನೆಗೆ ಆರು ಕಡೆಗಳಲ್ಲಿ ವ್ಯವಸ್ಥೆ ಮಾಡಿದೆ. ನಗರದಲ್ಲಿ ಅಕ್ಷರಶಃ ಪೊಲೀಸ್​ ಸರ್ಪಗಾವಲು ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:51 am, Thu, 28 September 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!