Lok Sabha Election 2024: ಬೆಳಗಾವಿ ಜಿಲ್ಲೆಯಲ್ಲಿ 1259 ಶತಾಯುಷಿ ಮತದಾರರು

ಬೆಳಗಾವಿ ಜಿಲ್ಲೆಯ 18 ವಿಧಾನಸಭಾ ಕ್ಷೇತ್ರಗಳ ಪೈಕಿ ಕುಡಚಿ ಕ್ಷೇತ್ರದಲ್ಲಿ 196 ಜನ ಶತಾಯುಷಿ ಮತದಾರರಿದ್ದರೇ, ಅಥಣಿ ವಿಧಾನಸಭಾ ಕ್ಷೇತ್ರದಲ್ಲಿ 12 ಜನ ಶತಾಯುಷಿ ಮತದಾರರಿದ್ದಾರೆ. ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ 648 ಶತಾಯುಷಿ ಮತದಾರರಿದ್ದರೆ, ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ 569 ಜನ ಶತಾಯುಷಿ ಮತದಾರರಿದ್ದಾರೆ.

Lok Sabha Election 2024: ಬೆಳಗಾವಿ ಜಿಲ್ಲೆಯಲ್ಲಿ 1259 ಶತಾಯುಷಿ ಮತದಾರರು
ಸಾಂದರ್ಭಿಕ ಚಿತ್ರ
Follow us
|

Updated on: Mar 23, 2024 | 10:15 PM

ಬೆಳಗಾವಿ, ಮಾರ್ಚ್​ 23: ರಾಜ್ಯದ ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ಬೆಳಗಾವಿ (Belagavi) ಜಿಲ್ಲೆಯಲ್ಲಿ ಅತಿ ಹೆಚ್ಚು ಶತಾಯುಷಿ (Centenarian) ಮತದಾರರಿದ್ದಾರೆ. ಚುನಾವಣಾ ಆಯೋಗದ ಪ್ರಕಾರ, ಜಿಲ್ಲೆಯಲ್ಲಿ 1,259 ಶತಾಯುಷಿ ಮತದಾರರಿದ್ದಾರೆ (Voters). ಬೆಳಗಾವಿ ಜಿಲ್ಲೆ 18 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದ್ದು, ಸುಮಾರು 40 ಲಕ್ಷ ಮತದಾರರಿದ್ದಾರೆ. ಇವರಲ್ಲಿ 1,259 ಶತಾಯುಷಿಗಳಿದ್ದಾರೆ. 100 ವರ್ಷ ಪೂರೈಸಿದ ಇಷ್ಟು ದೊಡ್ಡ ಸಂಖ್ಯೆಯ ಶತಾಯುಷಿಗಳಿಗೆ ಮತ್ತೆ ಉತ್ತಮ ಸಂಸದರನ್ನು ಆಯ್ಕೆ ಮಾಡುವ ಅವಕಾಶ ಒದಗಿ ಬಂದಿದೆ.

ಬೆಳಗಾವಿ ಜಿಲ್ಲೆಯ 18 ವಿಧಾನಸಭಾ ಕ್ಷೇತ್ರಗಳ ಪೈಕಿ ಕುಡಚಿ ಕ್ಷೇತ್ರದಲ್ಲಿ 196 ಜನ ಶತಾಯುಷಿ ಮತದಾರರಿದ್ದರೇ, ಅಥಣಿ ವಿಧಾನಸಭಾ ಕ್ಷೇತ್ರದಲ್ಲಿ 12 ಜನ ಶತಾಯುಷಿ ಮತದಾರರಿದ್ದಾರೆ. ಬೈಲಹೊಂಗಲದಲ್ಲಿ 110 ವರ್ಷ ಮೇಲ್ಪಟ್ಟ ಮಹಿಳೆಯೊಬ್ಬರು ಮತದಾನ ಮಾಡಲಿದ್ದಾರೆ.

ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ 648 ಶತಾಯುಷಿ ಮತದಾರರಿದ್ದರೆ, ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ 569 ಜನ ಶತಾಯುಷಿ ಮತದಾರರಿದ್ದಾರೆ. ಕಿತ್ತೂರು ಮತ್ತು ಖಾನಾಪುರ ವಿಧಾನಸಭಾ ಕ್ಷೇತ್ರಗಳು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವುದರಿಂದ ಇಲ್ಲಿರುವ 42 ಜನ ಶತಾಯುಷಿ ಮತದಾರರು ಬೆಳಗಾವಿ ವ್ಯಾಪ್ತಿಗೆ ಬರಲಿದ್ದಾರೆ.

ಚಿಕ್ಕೋಡಿ ಕ್ಷೇತ್ರದಲ್ಲಿ 85 ವರ್ಷ ಮೇಲ್ಪಟ್ಟ ಮತದಾರರಲ್ಲಿ ಪುರುಷರಿಗಿಂತ ಮಹಿಳೆಯರೇ ಹೆಚ್ಚಿದ್ದಾರೆ. ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 17,41,758 ಮತದಾರರಿದ್ದಾರೆ. ಇದರಲ್ಲಿ 8,75,953 ಪುರುಷರು, 8,65,731 ಮಹಿಳೆಯರು ಮತ್ತು 74 ತೃತೀಯ ಲಿಂಗಿ ಮತದಾರರು ಇದ್ದಾರೆ. ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19,04,099 ಮತದಾರರಿದ್ದು, 9,48,282 ಪುರುಷರು, 95,57,25 ಮಹಿಳೆಯರು ಹಾಗೂ 92 ತೃತೀಯ ಲಿಂಗಿ ಮತದಾರರು ಇದ್ದಾರೆ. ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಮಹಿಳಾ ಮತದಾರರೇ ಹೆಚ್ಚು ಎಂಬುದು ಗಮನಾರ್ಹ.

ಇದನ್ನೂ ಓದಿ: ಬೆಂಗಳೂರಿನಲ್ಲಿದ್ದಾರೆ 97 ಲಕ್ಷ ಮತದಾರರು: ಮತದಾರರ ಕರಡು ಪಟ್ಟಿ ಪ್ರಕಟ, ಆಕ್ಷೇಪಣೆ ಸಲ್ಲಿಸಲು ಡಿ. 9ರ ವರೆಗೆ ಅವಕಾಶ

ಬೆಳಗಾವಿ ಜಿಲ್ಲೆಯಲ್ಲಿ 90ರಿಂದ 99 ವರ್ಷದೊಳಗಿನ 17,119 ಮತದಾರರಿದ್ದು, 80-89 ವರ್ಷದೊಳಗಿನ 80,259 ಹಾಗೂ 70-79 ವರ್ಷದೊಳಗಿನ 2,31,628 ಮತದಾರರಿದ್ದಾರೆ. ಇನ್ನು 1,07,041 ಯುವ ಮತದಾರರು ಪ್ರಥಮ ಬಾರಿಗೆ ಮತದಾನ ಮಾಡಲಿದ್ದಾರೆ. ಈ ಹೊಸ ಮತದಾರರಲ್ಲಿ 58,783 ಪುರುಷರು ಮತ್ತು 48,242 ಮಹಿಳೆಯರಿದ್ದಾರೆ.

ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಮಾತನಾಡಿ, 80 ವರ್ಷ ಮೇಲ್ಪಟ್ಟ ಮತದಾರರಿಗೆ ಮನೆಯಲ್ಲಿಯೇ ಮತದಾನ ಮಾಡಲು ಅಂಚೆ ಮತಪತ್ರ ಸೌಲಭ್ಯ ಕಲ್ಪಿಸಲಾಗುವುದು. ಪಟ್ಟಿಯಲ್ಲಿ ಇಲ್ಲದ ಮತದಾರರು ಅರ್ಜಿ ಸಲ್ಲಿಸಲು ಏಪ್ರಿಲ್ 9 ರವರೆಗೆ ಅವಕಾಶವಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ತಾಜಾ ಸುದ್ದಿ
ಐಟಿಸಿ ಮೌರ್ಯ ಹೋಟೆಲ್​​ನಲ್ಲಿ ​​ಕೇಕ್​​ ಕತ್ತರಿಸಿದ ರಾಹುಲ್ ದ್ರಾವಿಡ್
ಐಟಿಸಿ ಮೌರ್ಯ ಹೋಟೆಲ್​​ನಲ್ಲಿ ​​ಕೇಕ್​​ ಕತ್ತರಿಸಿದ ರಾಹುಲ್ ದ್ರಾವಿಡ್
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ