AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Agnipath Scheme: ಇತಿಹಾಸದಲ್ಲೇ ಮೊದಲ ಬಾರಿಗೆ ಅಗ್ನಿವೀರ್​ ವಾಯುವಿಗೆ ಯುವತಿಯರು ನೇಮಕ

ಭಾರತೀಯ ವಾಯುಪಡೆಯ ಅಗ್ನಿವೀರ್ ​ವಾಯುವಿಗೆ ಇತಿಹಾಸದಲ್ಲೇ ಮೊದಲ ಬಾರಿಗೆ ಯುವತಿಯರು ನೇಮಕಗೊಂಡಿದ್ದಾರೆ. ಬೆಳಗಾವಿಯ ಏರ್ಮನ್ ಟ್ರೈನಿಂಗ್ ಸೆಂಟರ್​ನಲ್ಲಿ 153 ಜನ ಯುವತಿಯರ ಮೊದಲ ಬ್ಯಾಚ್ 6 ತಿಂಗಳುಗಳ ಕಾಲ ತರಬೇತಿ ಪಡೆದು ನಿರ್ಗಮನ ಪಥಸಂಚಲನ ನಡೆಸಿತು.

Agnipath Scheme: ಇತಿಹಾಸದಲ್ಲೇ ಮೊದಲ ಬಾರಿಗೆ ಅಗ್ನಿವೀರ್​ ವಾಯುವಿಗೆ ಯುವತಿಯರು ನೇಮಕ
ಸಾಂದರ್ಭಿ ಚಿತ್ರ
ಸಹದೇವ್​ ಮಾನೆ
| Edited By: ವಿವೇಕ ಬಿರಾದಾರ|

Updated on: Dec 02, 2023 | 2:33 PM

Share

ಬೆಳಗಾವಿ ಡಿ.02: ಇತಿಹಾಸದಲ್ಲೇ ಮೊದಲ ಬಾರಿಗೆ ಭಾರತೀಯ ವಾಯುಪಡೆಯ “ಅಗ್ನಿವೀರ ವಾಯು“ವಿಗೆ (Agniveer Vayu) ಯುವತಿಯರು ನೇಮಕವಾಗಿದ್ದಾರೆ. ಬೆಳಗಾವಿಯ (Belagavi) ಏರ್ಮನ್ ಟ್ರೈನಿಂಗ್ ಸೆಂಟರ್​ನಲ್ಲಿ ತರಬೇತಿ ಪಡೆದ 153 ಜನ ಯುವತಿಯರ ಮೊದಲ ಬ್ಯಾಚ್ ಇಂದು (ಡಿ.02) ನಿರ್ಗಮನ ಪಥಸಂಚಲನ ನಡೆಸಿತು. 2280 ಯುವಕರು, 153 ಜನ ಯುವತಿಯರು 22 ವಾರಗಳ ಕಾಲ ಕಠಿಣ ತರಬೇತಿ ಪಡೆದು, ನಿರ್ಗಮನ ಪಥಸಂಚಲನದ ಮೂಲಕ ವಾಯುಸೇನೆಗೆ ಸೇರ್ಪಡೆಯಾದರು.

ಆರು ತಿಂಗಳ ತರಬೇತಿಯಲ್ಲಿ ಅತ್ಯುತ್ತಮ ಪ್ರದರ್ಶನ ತೋರಿದವರಿಗೆ ಬಹುಮಾನ ವಿತರಿಸಲಾಯಿತು. ಏರ್ ಮಾರ್ಷಲ್ ರಾಧಾಕೃಷ್ಣನ್ ರದ್ದೀಶ್ ಅವರು ಅಗ್ನಿವೀರರ ಗೌರವ ಸ್ವೀಕರಿಸಿದರು. ಯಶಸ್ವಿ ತರಬೇತಿ ಮುಗಿಸಿ ಹೊರ ಬರುತ್ತಿದ್ದಂತೆ ಮಕ್ಕಳನ್ನು ಕಂಡ ಕುಟುಂಬಸ್ಥರು ತಬ್ಬಿಕೊಂಡು ಆನಂದಬಾಷ್ಪ ಸುರಿಸಿದರು. ತಂದೆ ತಾಯಿ ತಬ್ಬಿಕೊಂಡು ಅಗ್ನಿವೀರರು ಖುಷಿ ವ್ಯಕ್ತಪಡಿಸಿದರು.

ಏನಿದು ಅಗ್ನಿವೀರ್​

ಭಾರತೀಯ ಸೇನೆಯ 3 ವಿಭಾಗಗಳಲ್ಲಿ (ಭೂಸೇನೆ, ನೌಕಾಪಡೆ ಮತ್ತು ವಾಯುಪಡೆ)ಯಲ್ಲಿ ಸೇವೆ ಸಲ್ಲಿಸುವ ನವ ಯುವಕ-ಯುವತಿಯರಿಗೆ ಅವಕಾಶವನ್ನು ನೀಡುವ ಹಾಗೂ ಮಿಲಿಟರಿಯ ಹೊಸ ನೇಮಕಾತಿ ಮಾದರಿಯೇ ಈ ‘ಅಗ್ನಿಪಥ್’ ಯೋಜನೆ. ಈ ಅಗ್ನಿಪಥ್ ನೇಮಕಾತಿ ಯೋಜನೆಯನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು 2022ರ ಜೂನ್ 14 ರಂದು ಉದ್ಘಾಟನೆ ಮಾಡಿದ್ದರು. ಈ ಅಗ್ನಿಪಥ್​ ಯೋಜೆನೆಯಲ್ಲಿ ನೇಮಕಗೊಂಡವರೇ ಅಗ್ನಿವೀರರು.

ಇದನ್ನೂ ಓದಿ: Agnipath Scheme: ಜಮ್ಮು ಕಾಶ್ಮೀರದಿಂದ ಅಗ್ನಿವೀರ್​​ಗಳ ಮೊದಲ ಬ್ಯಾಚ್ ಭಾರತೀಯ ಸೇನೆಗೆ ತರಬೇತಿಗೆ ಸೇರ್ಪಡೆ

ಅಗ್ನಿಪಥ್ ಪ್ರವೇಶವನ್ನು ಆರಂಭದಲ್ಲಿ 4 ವರ್ಷಗಳ ಅವಧಿಗೆ ನಿಗದಿಪಡಿಸಲಾಗುತ್ತದೆ. ಈ 4 ವರ್ಷಗಳಲ್ಲಿ, ನೇಮಕಗೊಂಡವರಿಗೆ ಅಗತ್ಯವಿರುವ ಕೌಶಲ್ಯಗಳಲ್ಲಿ ಸಶಸ್ತ್ರ ಪಡೆಗಳಿಂದ ತರಬೇತಿ ನೀಡಲಾಗುತ್ತದೆ. ಈ ಯೋಜನೆಯಡಿ ನೇಮಕಗೊಂಡವರನ್ನು ಅಗ್ನಿವೀರ್ ಎಂದು ಕರೆಯಲಾಗುತ್ತದೆ.

ಈ ಯೋಜನೆಯ ಅಡಿಯಲ್ಲಿ ಪ್ರತಿ ವರ್ಷ ಒಟ್ಟು 46 ಸಾವಿರ ಸೈನಿಕರನ್ನು ನೇಮಿಸಿಕೊಳ್ಳಲಾಗುತ್ತದೆ. ಇವರಲ್ಲಿ ಶೇ. 25ರಷ್ಟು ಖಾಯಂ ಆಯೋಗಕ್ಕಾಗಿ 15 ವರ್ಷಗಳ ಹೆಚ್ಚುವರಿ ಅವಧಿಗೆ ಉಳಿಸಿಕೊಳ್ಳಲಾಗುವುದು. ಉಳಿದವರಿಗೆ ನಿವೃತ್ತಿಗೆ ಅವಕಾಶ ನೀಡಿ ಅವರಿಗೆ ಸೇವಾ ನಿಧಿಯನ್ನು ನೀಡಲಾಗುತ್ತದೆ. ಅದರ ಮೊತ್ತ 11.71 ಲಕ್ಷ ರೂ.ಗಳಾಗಿರುತ್ತವೆ. ಈ ಮೊತ್ತವು ತೆರಿಗೆ ಮುಕ್ತವಾಗಿರುತ್ತದೆ. ಸಶಸ್ತ್ರ ಪಡೆಗಳಲ್ಲಿ ನಿಯಮಿತ ಕೇಡರ್ ಆಗಿ ನೋಂದಣಿಗೆ ಆಯ್ಕೆಯಾದ ವ್ಯಕ್ತಿಗಳು ಕನಿಷ್ಠ 15 ವರ್ಷಗಳ ಅವಧಿಗೆ ಸೇವೆ ಸಲ್ಲಿಸಬೇಕಾಗುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಸಹದೇವ್​ ಮಾನೆ
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು