Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ಗೋವಾದಿಂದ ಅಕ್ರಮವಾಗಿ ಸಾಗಿಸಲು ಯತ್ನ, 18 ವಿವಿಧ ನಮೂನೆ ಮದ್ಯ ಜಪ್ತಿ

ಬೆಳಗಾವಿ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ ನಾಲ್ಕುರ ಸುವರ್ಣ ವಿಧಾನಸೌಧದ ಮುಂಭಾಗದಲ್ಲಿ ಕೆಎ 25 ಎಎ 6469 ನಂಬರ್​ನ ವಾಹನ ತಡೆದು ಅಬಕಾರಿ ಇಲಾಖೆಯ ಅಧಿಕಾರಿಗಳು ತಪಾಸಣೆ ನಡೆಸಿದಾಗ 18 ವಿವಿಧ ನಮೂನೆಯ 208 ಮದ್ಯದ ರಟ್ಟಿನ ಬಾಕ್ಸ್​​ಗಳು ಪತ್ತೆಯಾಗಿವೆ.

ಬೆಳಗಾವಿ: ಗೋವಾದಿಂದ ಅಕ್ರಮವಾಗಿ ಸಾಗಿಸಲು ಯತ್ನ, 18 ವಿವಿಧ ನಮೂನೆ ಮದ್ಯ ಜಪ್ತಿ
ಮದ್ಯ ಜಪ್ತಿ
Follow us
Sahadev Mane
| Updated By: ವಿವೇಕ ಬಿರಾದಾರ

Updated on:Sep 03, 2023 | 7:47 AM

ಬೆಳಗಾವಿ: ಖತರ್ನಾಕ್ ಐಡಿಯಾ ಮೂಲಕ ಗೋವಾದಿಂದ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಆರೋಪಿಯನ್ನು ಅಬಕಾರಿ ಇಲಾಖೆಯ (Department of Excise) ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶ ವಾರಣಾಸಿ ಮೂಲದ ವೀರೇಂದ್ರ ಮಿಶ್ರಾ (34) ಬಂಧಿತ ಆರೋಪಿ. ಆರೋಪಿ ಲಾರಿಯನ್ನ ಮಾಡಿಫೈ ಮಾಡಿಸಿ ಗೋವಾದಿಂದ ಪ್ಲೈವುಡ್ ಸಾಗಿಸುತ್ತಿದ್ದನು. ಈ ಪ್ಲೈವುಡ್​​ಗಳ ಮಧ್ಯೆ 18 ವಿವಿಧ ನಮೂನೆ ಮದ್ಯದ 208 ರಟ್ಟಿನ ಬಾಕ್ಸ್​​ಗಳನ್ನು ಗೋವಾದಿಂದ (Goa) ಬೆಳಗಾವಿ (Belagavi) ಮಾರ್ಗವಾಗಿ ಹೊರ ರಾಜ್ಯಕ್ಕೆ ಸಾಗಿಸುತ್ತಿದ್ದನು. ಬೆಳಗಾವಿ ಗಡಿಯಲ್ಲಿ ಅಬಕಾರಿ ಅಧಿಕಾರಿಗಳ ಟೈಟ್ ತಪಾಸಣೆಯಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಲಕ್ಷಾಂತರ ಮೌಲ್ಯದ ಮದ್ಯ ಸಿಕ್ಕಿದೆ.

ಬೆಳಗಾವಿ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ ನಾಲ್ಕು, ಸುವರ್ಣ ವಿಧಾನಸೌಧದ ಮುಂಭಾಗದಲ್ಲಿ ಕೆಎ 25 ಎಎ 6469 ನಂಬರ್​ನ ವಾಹನ ತಡೆದು ತಪಾಸಣೆ ನಡೆಸಿದೆವು. ಈ ವೇಳೆ ಅಕ್ರಮವಾಗಿ ಗೋವಾದಿಂದ ಹೊರ ರಾಜ್ಯಕ್ಕೆ ಮದ್ಯ ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ತಪಾಸಣೆ ವೇಳೆ 28 ಲಕ್ಷ ರೂ. ಮೌಲ್ಯದ ಮದ್ಯ ಸಿಕ್ಕಿದೆ. ಸದ್ಯ ಮದ್ಯ ಮತ್ತು ವಾಹನವನ್ನು ಜಪ್ತಿ ಮಾಡಲಾಗಿದೆ. ಅಬಕಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಅಪರ ಅಬಕಾರಿ ಆಯುಕ್ತ ಡಾ.ವೈ ಮಂಜುನಾಥ್ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:46 am, Sun, 3 September 23

ವಿದ್ಯಾರ್ಥಿಗಳ ಕಳಪೆ ಪ್ರದರ್ಶನ, ತಮಗೆ ತಾವೇ ಶಿಕ್ಷೆ ಕೊಟ್ಟುಕೊಂಡ ಶಿಕ್ಷಕರು
ವಿದ್ಯಾರ್ಥಿಗಳ ಕಳಪೆ ಪ್ರದರ್ಶನ, ತಮಗೆ ತಾವೇ ಶಿಕ್ಷೆ ಕೊಟ್ಟುಕೊಂಡ ಶಿಕ್ಷಕರು
ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್
ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್
ಕಾರಿಗೆ ಸಿಲುಕಿ ಮಹಿಳೆ ಮೃತಪಟ್ಟರೂ ಪಶ್ಚಾತಾಪವಿಲ್ಲದೆ ದರ್ಪ ತೋರಿದ ಯುವಕ
ಕಾರಿಗೆ ಸಿಲುಕಿ ಮಹಿಳೆ ಮೃತಪಟ್ಟರೂ ಪಶ್ಚಾತಾಪವಿಲ್ಲದೆ ದರ್ಪ ತೋರಿದ ಯುವಕ
ಯಡಿಯೂರಪ್ಪ ಕುಟುಂಬ ಮುಕ್ತ ಬಿಜೆಪಿಗಾಗಿ ನಾವು ಹೋರಾಡುತ್ತಿದ್ದೇವೆ: ಯತ್ನಾಳ್
ಯಡಿಯೂರಪ್ಪ ಕುಟುಂಬ ಮುಕ್ತ ಬಿಜೆಪಿಗಾಗಿ ನಾವು ಹೋರಾಡುತ್ತಿದ್ದೇವೆ: ಯತ್ನಾಳ್
ಸವದತ್ತಿ ಯಲ್ಲಮ್ಮ ದೇವಸ್ಥಾನ ಹುಂಡಿಯಲ್ಲಿ 3.68 ಕೋಟಿ ರೂ. ಕಾಣಿಕೆ ಸಂಗ್ರಹ
ಸವದತ್ತಿ ಯಲ್ಲಮ್ಮ ದೇವಸ್ಥಾನ ಹುಂಡಿಯಲ್ಲಿ 3.68 ಕೋಟಿ ರೂ. ಕಾಣಿಕೆ ಸಂಗ್ರಹ
ವಿಜಯೇಂದ್ರ ಫೋರ್ಜರಿ ಮಾಡಿದ್ದು ಸತ್ಯ ಅಂತ ಈಗಲೂ ಹೇಳುತ್ತೇನೆ: ಯತ್ನಾಳ್
ವಿಜಯೇಂದ್ರ ಫೋರ್ಜರಿ ಮಾಡಿದ್ದು ಸತ್ಯ ಅಂತ ಈಗಲೂ ಹೇಳುತ್ತೇನೆ: ಯತ್ನಾಳ್
‘ಅಪ್ಪು’ ಅದ್ದೂರಿ ಮರು ಬಿಡುಗಡೆ; ಫ್ಯಾನ್ಸ್ ಸಂಭ್ರಮ ಕಣ್ತುಂಬಿಕೊಂಡ ಯುವ
‘ಅಪ್ಪು’ ಅದ್ದೂರಿ ಮರು ಬಿಡುಗಡೆ; ಫ್ಯಾನ್ಸ್ ಸಂಭ್ರಮ ಕಣ್ತುಂಬಿಕೊಂಡ ಯುವ
ಮಗಳಿಗೆ ಹೊಟ್ಟೆನೋವಿನ ಸಮಸ್ಯೆ ಇತ್ತೆಂದ ತಂದೆ ಶಿವಕುಮಾರ್
ಮಗಳಿಗೆ ಹೊಟ್ಟೆನೋವಿನ ಸಮಸ್ಯೆ ಇತ್ತೆಂದ ತಂದೆ ಶಿವಕುಮಾರ್
ಅಮೆರಿಕದ ಏರ್​ಪೋರ್ಟ್​ನಲ್ಲಿ ವಿಮಾನದಲ್ಲಿ ಕಾಣಿಸಿಕೊಂಡ ಬೆಂಕಿ
ಅಮೆರಿಕದ ಏರ್​ಪೋರ್ಟ್​ನಲ್ಲಿ ವಿಮಾನದಲ್ಲಿ ಕಾಣಿಸಿಕೊಂಡ ಬೆಂಕಿ
‘ಅಪ್ಪು’ ಸಿನಿಮಾಗೆ ದರ್ಶನ್ ಅಭಿಮಾನಿ ಬೆಂಬಲ; ವಿಶೇಷ ಕಲಾಕೃತಿ ತಂದ ಫ್ಯಾನ್
‘ಅಪ್ಪು’ ಸಿನಿಮಾಗೆ ದರ್ಶನ್ ಅಭಿಮಾನಿ ಬೆಂಬಲ; ವಿಶೇಷ ಕಲಾಕೃತಿ ತಂದ ಫ್ಯಾನ್