AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಂ ಮುಖ್ಯಶಿಕ್ಷಕನ ವರ್ಗಾವಣೆಗೆ ಶಾಲೆಯ ಕುಡಿಯುವ ನೀರಿನ ಟ್ಯಾಂಕಿಗೆ ವಿಷ: ಬಿಜೆಪಿ ನಾಯಕರಿಗ ಸಿಎಂ ತರಾಟೆ

ಬೆಳಗಾವಿಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಮುಖ್ಯ ಶಿಕ್ಷಕ ಮುಸ್ಲಿಂ ಎಂಬ ಕಾರಣಕ್ಕೆ ಆತನನ್ನು ಶಾಲೆಯಿಂದ ಎತ್ತಂಗಡಿ ಮಾಡಿಸಬೇಕೆಂದು ವಿದ್ಯಾರ್ಥಿಗಳನ್ನ ಬಲಿ ಪಡೆಯಲು ಮುಂದಾಗಿರುವ ಘಟನೆ ನಡೆದಿದೆ. ಹೌದು..ಮುಸ್ಲಿಂ ಸಮುದಾಯಕ್ಕೆ ಸೇರಿರುವ ಮುಖ್ಯ ಶಿಕ್ಷಕನ್ನು ವರ್ಗಾವಣೆ ಮಾಡಿಸಲು ಶಾಲೆಯ ಕುಡಿಯುವ ನೀರಿನ ಟ್ಯಾಂಕ್​​ ಗೆ ವಿಷ ಹಾಕಿದ್ದಾರೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಖಂಡಿಸಿದ್ದಾರೆ.

ಮುಸ್ಲಿಂ ಮುಖ್ಯಶಿಕ್ಷಕನ ವರ್ಗಾವಣೆಗೆ ಶಾಲೆಯ ಕುಡಿಯುವ ನೀರಿನ ಟ್ಯಾಂಕಿಗೆ ವಿಷ:  ಬಿಜೆಪಿ ನಾಯಕರಿಗ ಸಿಎಂ ತರಾಟೆ
Belagavi School Poisoning
ರಮೇಶ್ ಬಿ. ಜವಳಗೇರಾ
|

Updated on: Aug 03, 2025 | 3:04 PM

Share

ಬೆಂಗಳೂರು, (ಆಗಸ್ಟ್ 03): ಬೆಳಗಾವಿ (Belagavi) ಜಿಲ್ಲೆಯ ಸವದತ್ತಿಯ ಸರ್ಕಾರಿ ಶಾಲೆಯ ಕುಡಿಯುವ ನೀರಿನ ಟ್ಯಾಂಕ್​​ ಗೆ (School Drinking Water Tank) ವಿಷ ಬೆರೆಸಿದ ದುಷ್ಟರನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಮುಸ್ಲಿಂ ಸಮುದಾಯಕ್ಕೆ ಸೇರಿದ ಮುಖ್ಯ ಶಿಕ್ಷಕನನ್ನು ಬೇರೆಡೆಗೆ ವರ್ಗಾವಣೆ ಮಾಡಿಸಲು ಹೀನ ಕೃತ್ಯ ಎಸಗಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಸಂಬಂಧ ಸವದತ್ತಿ ತಾಲೂಕು ಶ್ರೀರಾಮ ಸೇನೆ ಅಧ್ಯಕ್ಷ ಸಾಗರ ಪಾಟೀಲ,ಕೃಷ್ಣ ಮಾದರ ಹಾಗೂ ನಾಗನಗೌಡ ಪಾಟೀಲನನ್ನು ಬಂಧಿಸಲಾಗಿದೆ. ಪ್ರಕರಣಕ್ಕೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಘಟನೆಯನ್ನು ಖಂಡಿಸಿದ್ದಾರೆ. ಅಲ್ಲದೇ ಬಿಜೆಪಿ ಹಾಗೂ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ವಿರುದ್ಧ ಕಿಡಿಕಾರಿದ್ದಾರೆ.

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರು ಮುಸ್ಲಿಂ ಸಮುದಾಯಕ್ಕೆ ಸೇರಿದವರು, ಅವರನ್ನು ತಮ್ಮ ಊರಿನಿಂದ ಬೇರೆಡೆಗೆ ವರ್ಗಾವಣೆ ಮಾಡಿಸಬೇಕೆಂಬ ದುರುದ್ದೇಶದಿಂದ ಶಾಲಾಮಕ್ಕಳ ಕುಡಿಯುವ ನೀರಿಗೆ ವಿಷ ಹಾಕಿದ ಶ್ರೀರಾಮ ಸೇನೆಯ ತಾಲೂಕು ಅಧ್ಯಕ್ಷ ಸಾಗರ ಪಾಟೀಲ ಸೇರಿದಂತೆ ಒಟ್ಟು ಮೂವರನ್ನು ಬಂಧಿಸಲಾಗಿದೆ. ಕಳೆದ 15 ದಿನಗಳ ಹಿಂದೆ ನಡೆದ ಈ ಘಟನೆಯಲ್ಲಿ ಹಲವು ಮಕ್ಕಳು ಅಸ್ವಸ್ಥಗೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ‌ ಸಂಭವಿಸಿರಲಿಲ್ಲ. ಧಾರ್ಮಿಕ ಮೂಲಭೂತವಾದ, ಕೋಮುವೈಷಮ್ಯ ಎನ್ನುವುದು ಎಂತಹ ಹೀನ ಕೃತ್ಯವನ್ನೂ ಮಾಡಿಸಬಲ್ಲುದು ಎಂಬುದಕ್ಕೆ ಪುಟ್ಟಮಕ್ಕಳ ಮಾರಣಹೋಮಕ್ಕೆ ಕಾರಣವಾಗಬಹುದಾಗಿದ್ದ ಈ ಘಟನೆಯೇ ಸಾಕ್ಷಿ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ
Image
ಮಕ್ಕಳನ್ನ ಕೊಲ್ಲಲು ಸರ್ಕಾರಿ ಶಾಲೆಯ ನೀರಿನ ಟ್ಯಾಂಕ್​​ಗೆ ವಿಷ!
Image
ಶಾಲೆಯ ನೀರಿನ‌ ಟ್ಯಾಂಕ್​ಗೆ ವಿಷ ಬೆರೆಸಿದ ಕೇಸ್​ ತನಿಖೆಗೆ 3 ತಂಡ ರಚನೆ
Image
ಶಾಲೆಯ ನೀರಿನ‌ ಟ್ಯಾಂಕ್​ಗೆ ವಿಷ ಬೆರೆಸಿದ ಕೇಸ್​: ಗಂಭೀರವಾಗಿ ಪರಿಗಣಿಸಿದ CM
Image
ಸರ್ಕಾರಿ ಶಾಲೆಯ ನೀರಿನ ಟ್ಯಾಂಕ್​​ ವಿಷ : ತಪ್ಪಿದ ಅನಾಹುತ!

ಇದನ್ನೂ ಓದಿ: ಸರ್ಕಾರಿ ಶಾಲೆಯ ನೀರಿನ ಟ್ಯಾಂಕ್​​ ವಿಷ ​ಬೆರೆಸಿದ ಕಿಡಿಗೇಡಿಗಳು: ತಪ್ಪಿದ ಭಾರಿ ಅನಾಹುತ

“ದಯೆಯೇ ಧರ್ಮದ ಮೂಲವಯ್ಯ” ಎಂದು ಸಾರಿದ ಶರಣರ ನಾಡಿನಲ್ಲಿ ಈ ಮಟ್ಟಿನ ಕೌರ್ಯ, ದ್ವೇಷ ಹುಟ್ಟಲು ಸಾಧ್ಯವೇ? ಎಂಬುದನ್ನು ಈ ಕ್ಷಣಕ್ಕೂ ನನ್ನಿಂದ ನಂಬಲಾಗುತ್ತಿಲ್ಲ. ಧರ್ಮದ ಹೆಸರಿನಲ್ಲಿ ಸಮಾಜದಲ್ಲಿ ದ್ವೇಷ ಬಿತ್ತಿ, ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಬಿಜೆಪಿ ನಾಯಕರು ಒಮ್ಮೆ ತಮ್ಮ‌ ಆತ್ಮವಿಮರ್ಷೆ ಮಾಡಿಕೊಳ್ಳಲಿ. ಈ ಘಟನೆಯ ಹೊಣೆಯನ್ನು ಪ್ರಮೋದ್ ಮುತಾಲಿಕ್ ಹೊರುವರೇ? ಬಿವೈ ವಿಜಯೇಂದ್ರ ಹೊರುವರೇ? ಆರ್ ಅಶೋಕ್ ಹೊರುವರೇ? ಇಂಥವರು ಮಾಡುವ ಸಮಾಜಘಾತುಕ ಕೃತ್ಯಗಳಿಗೆ ಸದಾ ಬೆಂಬಲವಾಗಿ ನಿಲ್ಲುವ ನಾಯಕರು ಈಗ ಮುಂದೆ ಬಂದು ತಮ್ಮ ಪಾಪಕ್ಕೆ ಪ್ರಾಯಶ್ಚಿತ್ತ ಮಾಡಿಕೊಳ್ಳಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎಲ್ಲ ಬಗೆಯ ಮತೀಯವಾದ, ಮೂಲಭೂತವಾದಿತನಗಳು ಮನುಷ್ಯ ಸಮಾಜಕ್ಕೆ ಅಪಾಯಕಾರಿ. ದ್ವೇಷ ಭಾಷಣಗಳು, ಕೋಮು ಗಲಭೆಗಳ ತಡೆಗಾಗಿಯೇ ನಾವು ವಿಶೇಷ ಟಾಸ್ಕ್ ಫೋರ್ಸ್ ರಚನೆ ಮಾಡಿದ್ದೇವೆ, ಅಂಥವರ ವಿರುದ್ಧ ಕಾನೂನಿನ ಪರಿಧಿಯೊಳಗೆ ಸಾಧ್ಯವಾದ ಎಲ್ಲಾ ಕ್ರಮವನ್ನು ವಹಿಸುತ್ತಿದ್ದೇವೆ. ನಮ್ಮ ಎಲ್ಲಾ ಪ್ರಯತ್ನಗಳು ಫಲ ಕೊಡಬೇಕಾದರೆ ಸಾರ್ವಜನಿಕರೂ ಇಂಥಾ ಶಕ್ತಿಗಳ ವಿರುದ್ಧ ಧ್ವನಿಯೆತ್ತಬೇಕು, ಪ್ರತಿರೋಧ ಒಡ್ಡಬೇಕು, ದೂರು ದಾಖಲಿಸಬೇಕು.

ನನಗೆ ಈಗಲೂ ನಂಬಿಕೆಯಿದೆ, ಕೋಮುವಾದಿಗಳ ಸಂಖ್ಯೆಗಿಂತ ಕೂಡಿ ಬಾಳಬೇಕೆಂದು ಬಯಸುವ ಜನರ ಸಂಖ್ಯೆ ನೂರು ಪಟ್ಟು ಹೆಚ್ಚಿದೆ. ಮಕ್ಕಳ ಹತ್ಯಾಕಾಂಡ ನಡೆಸುವ ದುಷ್ಟ ಹುನ್ನಾರವನ್ನು ಭೇದಿಸಿದ ಪೊಲೀಸ್ ಸಿಬ್ಬಂದಿಗಳಿಗೆ ಅಭಿನಂದನೆಗಳು. ಇಂಥ ಹೀನಕೃತ್ಯ ಎಸಗಿದ ದುರುಳರಿಗೆ ನ್ಯಾಯ ವ್ಯವಸ್ಥೆ ತಕ್ಕಶಿಕ್ಷೆ ನೀಡಲಿದೆ ಎಂಬ ಪೂರ್ಣ ವಿಶ್ವಾಸವಿದೆ ಎಂದರು.

ಈ ಬಗ್ಗೆ ಕಮಿಷನರ್ ಹೇಳಿದ್ದೇನು?

ಇನ್ನು ಈ ಪ್ರಕರಣ ಸಂಬಂಧ ಮಾತನಾಡಿರುವ ಬೆಳಗಾವಿ ಕಮಿಷನರ್ ಭೀಮಶಂಕರ್ ಗುಳೇದ್,  ಮುಖ್ಯಶಿಕ್ಷಕನನ್ನು ಶಾಲೆಯಿಂದ ಓಡಿಸಲು ಆರೋಪಿಗಳು  ಈ ಕೃತ್ಯ ಎಸಗಿದ್ದಾರೆ. ವಿಷ ಮಿಶ್ರಿತ ನೀರು ಸೇವಿಸಿ ಮಕ್ಕಳು ಮೃತಪಟ್ಟಿರ ಅದಕ್ಕೆ ಮುಖ್ಯ ಶಿಕ್ಷಕ ಹೊಣೆಯಾಗಿ ಬೇರೆ ಕಡೆ ವರ್ಗಾವಣೆ ಆಗುತ್ತಾರೆ ಎಂದು ಬಂಧಿತರು ಸಂಚು ರೂಪಿಸಿದ್ದರು ಎಂದು ಮಾಹಿತಿ ನೀಡಿದ್ದಾರೆ.

ಘಟನೆ ಹಿನ್ನೆಲೆ

ಬಂಧಿತ ಆರೋಪಿ ಸಾಗರ ಪಾಟೀಲ, ವಿಷ ಬೆರೆಸಲು ಕೃಷ್ಣ ಮಾದರಗೆ ಹೇಳಿದ್ದ.ಕೃಷ್ನ ಅನ್ಯಜಾತಿ  ಹುಡುಗಿಯನ್ನು ಪ್ರೀತಿಸುತ್ತಿರುವ ಸಂಗತಿ ತಿಳಿದಿದ್ದ ಆರೋಪಿಗಳು ನಾವು ಹೇಳುವ ಕೆಲಸ ಮಾಡದಿದ್ದರೆ ನಿನ್ನ ಪ್ರೀತಿಯ ವಿಷಯ ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕಿದ್ದರು. ಇದರಿಂದ ಹೆದರಿ ನೀರಿನಲ್ಲಿ ವಿಷ ಬೆರೆಸಲು ಕೃಷ್ಣ ಒಪ್ಪಿಕೊಂಡಿದ್ದ. ಶಾಲೆಯ ಅಮಾಯಕ ಬಾಲಕನಿಗೆ ಚಾಕೋಲೆಟ್, ಕುರ್​ಕುರೆ ಮತ್ತು 500 ರೂ. ನೀಡಿ ಕೃತ್ಯಕ್ಕೆ ಪ್ರಚೋದನೆ ನೀಡಿದ್ದರು. ಆಮಿಷಕ್ಕೆ ಒಳಗಾಗಿದ್ದ ಬಾಲಕ ಶಾಲಾ ಆವರದಣದಲ್ಲಿದ್ದ ನೀರಿನ ಟ್ಯಾಂಕ್​ನಲ್ಲಿ ವಿಷ ಬೆರೆಸಿ ಬಾಟಲಿ ಅಲ್ಲೇ ಎಸೆದಿದ್ದ.