ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ 7 ವರ್ಷದ ಬಾಲಕ ಬಲಿ
ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ 7 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಖಾನಾಪುರ ತಾಲೂಕಿನ ಕಾಮಸಿಕೊಪ್ಪ ಗ್ರಾಮದಲ್ಲಿ ನಡೆದಿದೆ.
ಬೆಳಗಾವಿ: ಹೆಸ್ಕಾಂ (HESCOM) ಅಧಿಕಾರಿಗಳ ನಿರ್ಲಕ್ಷ್ಯಕ್ಕೆ 7 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಖಾನಾಪುರ ತಾಲೂಕಿನ ಕಾಮಸಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಬಸಪ್ಪ ಕೋಲ್ಕಾರ (7) ಮೃತ ಬಾಲಕ. ಹೆಸ್ಕಾಂ ವಿದ್ಯುತ್ ಕಂಬ ನೆಡುವ ಬದಲು ಮರದ ಕಂಬ ನೆಟ್ಟು, ವಿದ್ಯುತ್ ತಂತಿ ಎಳೆದಿದ್ದರು. ಇದರಿಂದ ವಿದ್ಯುತ್ ತಂತಿಒ ಜೋತು ಬಿದ್ದ ಪರಿಣಾಮ ತಂತಿ ತಗುಲಿ ಬಾಲಕ ಸಾವನ್ನಪ್ಪಿದ್ದಾನೆ. ಖಾನಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಕೆರೆಗೆ ಬಿದ್ದು ಯುವತಿ ಆಕಸ್ಮಿಕ ಸಾವು
ಮಡಿಕೇರಿ: ಕಾಲು ಜಾರಿ ಕೆರೆಗೆ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಪಾರಾಣೆ ಗ್ರಾ.ಪಂ. ವ್ಯಾಪ್ತಿಯ ಕಿರುಂದಾಡು ಗ್ರಾಮದಲ್ಲಿ ನಡೆದಿದೆ. ಪಾರಾಣೆ ಗ್ರಾ.ಪಂ. ಸದಸ್ಯೆ ಪುತ್ರಿ ಚಸ್ಮಿಕಾ(20) ಮೃತ ಯುವತಿ. ಮೂರ್ನಾಡು ಕಾಲೇಜಿನಲ್ಲಿ ಬಿ.ಕಾಂ ಓದುತ್ತಿದ್ದ ಚಸ್ಮಿಕಾ, ಗದ್ದೆಯಲ್ಲಿ ದನ ಕಟ್ಟಲು ಕೆರೆ ದಂಡೆ ಮೇಲೆ ಹೋಗುತ್ತಿದ್ದಾಗ ಕಾಲು ಜಾರಿ ಕೆರೆಗೆ ಬಿದ್ದು ಸಾವನ್ನಪ್ಪಿದ್ದಾಳೆ. ನಾಪೋಕ್ಲು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾಲಬಾಧೆಯಿಂದ ಮಹಿಳೆ ಆತ್ಮಹತ್ಯೆ
ಬೆಂಗಳೂರು: ಸಾಲಬಾಧೆಯಿಂದ ಬೇಸತ್ತು ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು ಗ್ರಾಮದಲ್ಲಿ ನಡೆದಿದೆ. ತರಕಾರಿ ವ್ಯಾಪಾರಿ ರತ್ನಮ್ಮ (56) ಮೃತ ದುರ್ದೈವಿ. ರತ್ನಮ್ಮ ಸಾಲ ನೀಡಿದ್ದವರ ಕಿರುಕುಳದಿಂದ ಬೇಸತ್ತು ತ್ಯಾಮಗೊಂಡ್ಲು ಬಳಿ ಸೊಂಡಲವಾಡಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತ್ಯಾಮಗೊಂಡ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:18 pm, Wed, 26 October 22