ಅಯ್ಯೋ ವಿಧಿಯೇ! ಪೇಪರ್ ಹಾಕಲು ಹೋಗಿದ್ದ ಬಾಲಕನಿಗೆ ಕರೆಂಟ್ ತಗುಲಿ ಸಾವು

ಕರೆಂಟ್​ ಶಾಕ್​ ತಗುಲಿ ಸಾವನ್ನಪ್ಪಿದ ರಜತ್ ಕುಟುಂಬಸ್ಥರು, ಕಾರು ಮಾಲೀಕ ಯಲ್ಲಪ್ಪನ ಚೌಗಲೆ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದ್ದು, ಆತನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ಇನ್ನು ಬಾಲಕನನ್ನು ಕಳೆದುಕೊಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಅಯ್ಯೋ ವಿಧಿಯೇ! ಪೇಪರ್ ಹಾಕಲು ಹೋಗಿದ್ದ ಬಾಲಕನಿಗೆ ಕರೆಂಟ್ ತಗುಲಿ ಸಾವು
ಮಗನನ್ನು ಕಳೆದುಕೊಂಡು, ಮುಗಿಲು ಮುಟ್ಟಿದ ತಾಯಿಯ ಆಕ್ರಂಧನ
Follow us
Sahadev Mane
| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 15, 2023 | 2:34 PM

ಬೆಳಗಾವಿ, ಅ.15: ಸಾವು ಹೇಗೆ, ಯಾವಾಗ ಬರುತ್ತದೆ ಎಂದು ಅಂದಾಜಿಸಲು ಅಸಾಧ್ಯ. ಅದರಂತೆ ಬೆಳಗಾವಿ(Belagavi)ಯ ಭಾಗ್ಯ ನಗರದಲ್ಲಿ ಪೇಪರ್ ಹಾಕಲು ಹೋಗಿದ್ದ ಬಾಲಕನಿಗೆ ಕರೆಂಟ್ ತಗುಲಿ ಧಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಅನಗೋಳ ನಿವಾಸಿ ರಜತ್ ಗೌರವ್(14) ಮೃತ ಬಾಲಕ. ಇನ್ನು ರಜತ್​​ ಪೇಪರ್ ಹಾಕಿದ ಮೇಲೆ ಯಲ್ಲಪ್ಪ ಚೌಗಲೆ ಎಂಬುವವರು ಕಾರು ತೊಳೆಯಲು ಹೇಳಿದ್ದಾರೆ. ಹಣ ಕೊಡುವುದಾಗಿ ಹೇಳಿದಕ್ಕೆ ಬಾಲಕ ಕಾರು ತೊಳೆಯಲು ಮುಂದಾಗಿದ್ದ. ಈ ವೇಳೆ ಮೋಟರ್​ನ ವೈಯರ್ ತುಂಡಾಗಿದ್ದನ್ನು ಮುಟ್ಟಿದಾಗ ಶಾಕ್​ ಹೊಡೆದು ಸ್ಥಳದಲ್ಲೇ ಒದ್ದಾಡಿ ಗಂಭೀರವಾಗಿ ಗಾಯಗೊಂಡಿದ್ದ  ರಜತ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ.

ಕಾರು ಮಾಲೀಕ ಯಲ್ಲಪ್ಪ ಚೌಗಲೆ ನಿರ್ಲಕ್ಷ್ಯದಿಂದ ಬಾಲಕ ಸಾವು ಆರೋಪ

ಹೌದು, ರಜತ್ ಕುಟುಂಬಸ್ಥರು ಕಾರು ಮಾಲೀಕ ಯಲ್ಲಪ್ಪನ ಚೌಗಲೆ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದ್ದು, ಆತನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ಇನ್ನು ಬಾಲಕನನ್ನು ಕಳೆದುಕೊಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮೃತ ಬಾಲಕ ಪೇಪರ್​ ಹಾಕಿ ಸುಮ್ಮನೆ ಬಂದಿದ್ದರೆ, ಬದುಕುತ್ತಿದ್ದ. ಆದರೆ, ಕಾರು ಮಾಲೀಕ ಗಾಡಿ ತೊಳೆಯಲು ಹಣದ ಆಮಿಷವೊಡ್ಡಿ, ಇದೀಗ ರಜತ್ ಸಾವಿಗೆ ಕಾರಣವಾಗಿದ್ದಾನೆ ಎಂದು ಆರೋಪಿಸಿದ್ದಾರೆ.​

ಇದನ್ನೂ ಓದಿ:ಕಾರ್ಯಕ್ರಮಕ್ಕೆ ಲೈಟಿಂಗ್ಸ್ ಅಳವಡಿಕೆ ವೇಳೆ ವಿದ್ಯುತ್ ತಂತಿ ತಗುಲಿ ಆನೇಕಲ್​ನಲ್ಲಿ ನಾಲ್ವರ ಸಾವು

ರೈಲಿಗೆ ಸಿಲುಕಿ ಅಪರಿಚಿತ ಯುವಕ ಸಾವು

ಮಂಡ್ಯ: ತಾಲೂಕಿನ ಹನಕೆರೆ ಬಳಿಯ ರೈಲು ನಿಲ್ದಾಣದಲ್ಲಿ ಅಪರಿಚಿತ ಯುವಕನೊಬ್ಬ ಬೆಂಗಳೂರಿನಿಂದ ಮೈಸೂರಿಗೆ ತೆರಳುವ ಮಾರ್ಗದ ರೈಲಿಗೆ ಸಿಲುಕಿ ಸಾವನ್ನಪ್ಪಿದ ಘಟನೆ ನಡೆದಿದೆ.  ಘಟನಾ ಸ್ಥಳಕ್ಕೆ ರೈಲ್ವೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತ ದೇಹವನ್ನು ಮಿಮ್ಸ್ ಆಸ್ಪತ್ರೆಯ ಶವಗಾರಕ್ಕೆ  ರವಾನೆ ಮಾಡಲಾಗಿದೆ.

ಅಡುಗೆ ಎಣ್ಣೆ ತುಂಬಿದ ಲಾರಿ ಪಲ್ಟಿ

ವಿಜಯನಗರ: ಅಡುಗೆ ಎಣ್ಣೆ ತುಂಬಿದ ಲಾರಿಯೊಂದು ವಿಜಯನಗರದ ಕೂಡ್ಲಿಗಿಯ ಬಣವಿಕಲ್ಲು ಗ್ರಾಮದ ಬಳಿ NH 50 ರಲ್ಲಿ ಚಾಲಕ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ. ಅದೃಷ್ಟವಶಾತ್ ಲಾರಿ ಚಾಲಕ, ಕ್ಲಿನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ಲಾರಿ ಪಲ್ಟಿ ಆಗುತ್ತಿದ್ದಂತೆ ದಾವಿಸಿದ ಜನರು ಕೊಡ, ಕ್ಯಾನ್‌ಗಳಲ್ಲಿ ಅಡುಗೆ ಎಣ್ಣೆ ಒಯ್ದಿದ್ದಾರೆ. ಈ ಲಾರಿ ಕೂಡ್ಲಿಗಿ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿತ್ತು. ಈ ವೇಳೆ ದುರ್ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಕಾನಾಹೊಸಹಳ್ಳಿ ಪೊಲೀಸರು ಭೇಟಿ ನೀಡಿ , ಅಡುಗೆ ಎಣ್ಣೆ ತುಂಬಲು ಮುಂದಾಗಿದ್ದ ಜನರನ್ನು ಚದುರಿಸಲು ಹರಸಾಹಸ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ