ಬೆಳಗಾವಿಯಲ್ಲಿ ಹಳೆ ವಿದ್ಯಾರ್ಥಿಗೆ ಸರ್ಕಾರಿ ಶಾಲೆ ದೈಹಿಕ ಶಿಕ್ಷಕನಿಂದ ಲೈಂಗಿಕ ಕಿರುಕುಳ ಆರೋಪ!

ಯುವತಿಯ ಮದುವೆ ಬೇರೆಯವರ ಜೊತೆ ನಿಶ್ಚಯ ಆಗುತ್ತಿದ್ದಂತೆ ಯುವತಿ ಜೊತೆಗಿನ ಅಶ್ಲೀಲ ಫೋಟೋಗಳನ್ನ ವಾಟ್ಸಾಪ್ ಮೂಲಕ ವೈರಲ್ ಮಾಡಿದ್ದಾನೆ ಎಂಬ ಆರೋಪವಿದೆ.

ಬೆಳಗಾವಿಯಲ್ಲಿ ಹಳೆ ವಿದ್ಯಾರ್ಥಿಗೆ ಸರ್ಕಾರಿ ಶಾಲೆ ದೈಹಿಕ ಶಿಕ್ಷಕನಿಂದ ಲೈಂಗಿಕ ಕಿರುಕುಳ ಆರೋಪ!
ಸಾಂದರ್ಭಿಕ ಚಿತ್ರ
Follow us
TV9 Web
| Updated By: sandhya thejappa

Updated on:Jun 09, 2022 | 9:17 AM

ಬೆಳಗಾವಿ: ಜಿಲ್ಲೆಯಲ್ಲಿ ಸರ್ಕಾರಿ ಶಾಲೆಯೊಂದರ ದೈಹಿಕ ಶಿಕ್ಷಕ ಹಳೆ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ (Sexual Harassment) ನೀಡುತ್ತಿರುವ ಆರೋಪ ಕೇಳಿಬಂದಿದೆ. ಶಾಲೆಯಲ್ಲಿ ಓದುವಾಗಲೇ ಶಿಕ್ಷಕ (Teacher) ವಿದ್ಯಾರ್ಥಿಯನ್ನು ಪುಸಲಾಯಿಸಿ, ಯುವತಿ ಕಾಲೇಜಿಗೆ ಸೇರಿದ ಬಳಿಕೆ ಆಕೆಯನ್ನು ದೈಹಿಕವಾಗಿ ಬಳಸಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ. ಯುವತಿಯ ಮದುವೆ ಬೇರೆಯವರ ಜೊತೆ ನಿಶ್ಚಯ ಆಗುತ್ತಿದ್ದಂತೆ ಯುವತಿ ಜೊತೆಗಿನ ಅಶ್ಲೀಲ ಫೋಟೋಗಳನ್ನ ವಾಟ್ಸಾಪ್ ಮೂಲಕ ವೈರಲ್ ಮಾಡಿದ್ದಾನೆ ಎಂಬ ಆರೋಪವಿದೆ. ಯುವತಿ ನೀಡಿದ ದೂರಿನ ಮೇರೆಗೆ ದೈಹಿಕ ಶಿಕ್ಷಕನ ವಿರುದ್ಧ ಸವದತ್ತಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿದೆ.

ಯುವತಿ ಮದುವೆ ನಿಲ್ಲಿಸುವ ದುರುದ್ದೇಶದಿಂದ ವಾಟ್ಸಪ್ ಸ್ಟೇಟಸ್ ಇಟ್ಟುಕೊಂಡಿರುವ ಆರೋಪ ಕೇಳಿಬಂದಿದ್ದು, ಫೋಟೋಗಳು ವೈರಲ್ ಆಗುತ್ತಿದ್ದಂತೆ ದೈಹಿಕ ಶಿಕ್ಷಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಯುವತಿ ಸವದತ್ತಿ ಠಾಣಾ ವ್ಯಾಪ್ತಿಯ ಶಾಲೆಯಲ್ಲಿ 10ನೇ ತರಗತಿವರೆಗೆ ವ್ಯಾಸಂಗ ಮಾಡಿದ್ದಳು. ಬಳಿಕ ಬೇರೆಡೆ ಕಾಲೇಜು ಸೇರಿದ್ದಳು. ಯುವತಿ ಶಾಲೆಯಲ್ಲಿ ಇದ್ದಾಗ ಲೈಂಗಿಕ ಕಿರುಕುಳ ನೀಡುತ್ತಿದ್ದನಂತೆ.

ಇನ್ನು ಕಳೆದ ಮೂರು ದಿನಗಳ ಹಿಂದೆ ಯುವತಿಯ ಕುಟುಂಬಸ್ಥರು, ಗ್ರಾಮಸ್ಥರು ದೈಹಿಕ ಶಿಕ್ಷಕನಿಗೆ ಚಪ್ಪಲಿ ಏಟು ನೀಡಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ನಡೆದ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ
Image
ಆಗಸ್ಟ್‌ ಮೊದಲ ವಾರದಲ್ಲಿ ರಾಜ್ಯದ ಮೊದಲ ‘ಭಾರತ್‌ ಗೌರವ್‌ ರೈಲು ಯಾತ್ರೆ ಪ್ರಾರಂಭ
Image
Mumbai: ಮುಂಬೈನಲ್ಲಿ ಅಪಾರ್ಟ್​ಮೆಂಟ್ ಕಟ್ಟಡ ಕುಸಿತ; ಓರ್ವ ಸಾವು, 16 ಜನರಿಗೆ ಗಾಯ
Image
ಮೈಸೂರಿನಲ್ಲಿ ಮರ್ಯಾದೆ ಹತ್ಯೆ ಪ್ರಕರಣ; ನನ್ನ ಸಾವಿಗೆ ತಂದೆ-ತಾಯಿಯೇ ಕಾರಣ ಎಂದಿದ್ದ ಯುವತಿ
Image
ಹೊಸ ಹಾಡಿನಲ್ಲಿ ನಟ ಗೋವಿಂದ ಬಿಂದಾಸ್​ ಡ್ಯಾನ್ಸ್​; ಇದು ‘ಪುಷ್ಪ’ಗಿಂತ ಭಯಂಕರವಾಗಿದೆ ಎಂದ ಫ್ಯಾನ್ಸ್​

ಇದನ್ನೂ ಓದಿ: ಆಗಸ್ಟ್‌ ಮೊದಲ ವಾರದಲ್ಲಿ ರಾಜ್ಯದ ಮೊದಲ ‘ಭಾರತ್‌ ಗೌರವ್‌ ರೈಲು ಯಾತ್ರೆ ಪ್ರಾರಂಭ

ವ್ಯಕ್ತಿಯ ಮೇಲೆ ಮಾರಕಾಸ್ತ್ರಗಳಿಂದ ಅಟ್ಯಾಕ್! ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಕೋಳಿ ಸರ್ಕಲ್ ಬಳಿ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆದಿದ್ದು, ಕಳೆದ 3 ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಹಿರೋಜ್ ಮಾವರಕರ್ ಎಂಬ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಗಾಯಗೊಂಡ ಹಿರೋಜ್ ಮಾವರ್ಕರ್ ಗೋಕಾಕ್ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಲ್ಲೆ ಮಾಡುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಗೋಕಾಕ್ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:11 am, Thu, 9 June 22

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ