ಬೆಳಗಾವಿ: ವೃದ್ಧನಿಗೆ ಬೈಕ್ ಡಿಕ್ಕಿ, ರಸ್ತೆಗೆ ಬಿದ್ದ ಮಹಿಳೆ ಮೇಲೆ ಹರಿದ ಬಸ್!
ಬೆಳಗಾವಿ ಬಸ್ ನಿಲ್ದಾಣದ ಮುಂಭಾಗದಲ್ಲಿ ತಲೆ ಮೇಲೆ ದಿನಸಿ ಹೊತ್ತು ಹೊರಟ್ಟಿದ್ದ ವೃದ್ಧನಿಗೆ ಬೈಕ್ ಡಿಕ್ಕಿಯಾಗಿದೆ. ಘಟನೆಯಲ್ಲಿ ಬೈಕ್ ಹಿಂಬದಿ ಕುಳಿತಿದ್ದ ಮಹಿಳೆ ಸಾವನ್ನಪ್ಪಿದ್ದು, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನೊಂದೆಡೆ, ತುಮಕೂರು ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಪೊಲೀಸ್ ಕಾನ್ಸ್ಟೇಬಲ್ ಸೇರಿ ಇಬ್ಬರು ಸಾವನ್ನಪ್ಪಿದ್ದಾರೆ.
ಬೆಳಗಾವಿ, ನ.30: ವೃದ್ಧನಿಗೆ ಡಿಕ್ಕಿ (Accident) ಹೊಡೆದು ರಸ್ತೆಗೆ ಬಿದ್ದ ಬೈಕ್ ಸವಾರರ ಮೇಲೆ ಬಸ್ ಹರಿದು ಮಹಿಳೆ ಸವಾನ್ನಪ್ಪಿದ ಘಟನೆ ಬೆಳಗಾವಿ (Belagavi) ಬಸ್ ನಿಲ್ದಾಣದ ಮುಂಭಾಗದಲ್ಲಿ ನಡೆದಿದೆ. ಘಟನೆಯಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪರಾಗಿದ್ದಾರೆ.
ಧಾರವಾಡ ಮೂಲದ ವಿದ್ಯಾಶ್ರೀ(32) ಮೃತ ದುರ್ದೈವಿಯಾಗಿದ್ದಾರೆ. ಸಂಬಂಧಿಕರ ಮನೆಗೆ ಬೈಕ್ ಮೂಲಕ ಹೋಗುತ್ತಿದ್ದಾಗ ಬಸ್ ನಿಲ್ದಾಣ ಮುಂಭಾಗದಲ್ಲಿ ತಲೆ ಮೇಲೆ ದಿನಸಿ ಹೊತ್ತು ಹೋಗುತ್ತಿದ್ದ ವೃದ್ಧನಿಗೆ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ, ಬೈಕ್ನಲ್ಲಿದ್ದ ಇಬ್ಬರೂ ರಸ್ತೆ ಮೇಲೆ ಬಿದ್ದಿದ್ದು, ಈ ವೇಳೆ ಬಸ್ ಹರಿದು ಹೋಗಿದೆ.
ಇದನ್ನೂ ಓದಿ: ವಿಜಯಪುರ: ರಸ್ತೆ ಬದಿ ನಿಲ್ಲಿಸಿದ್ದ ಟ್ರ್ಯಾಕ್ಟರ್ಗೆ ಬೈಕ್ ಡಿಕ್ಕಿ, ಇಬ್ಬರು ಸ್ಥಳದಲ್ಲೇ ಸಾವು
ಪರಿಣಾಮ, ವಿದ್ಯಾಶ್ರೀ ಸ್ಥಳದಲ್ಲೇ ಸಾವನ್ನಪ್ಪಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಎರಡು ದಿನಳ ಹಿಂದೆ ನಡೆದ ಘಟನೆ ಇದಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸದ್ಯ, ಘಟನೆಯ ಭೀಕರ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಅಪಘಾತದಲ್ಲಿ ಕಾನ್ಸ್ಟೇಬಲ್ ಸೇರಿ ಇಬ್ಬರು ಸಾವು
ತುಮಕೂರು: ಬೈಕ್ನಿಂದ ಬಿದ್ದು ಪೊಲೀಸ್ ಕಾನ್ಸ್ಟೇಬಲ್ ಸೇರಿದಂತೆ ಇಬ್ಬರು ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಸಿದ್ದರಬೆಟ್ಟ ಬಳಿ ನಡೆದಿದೆ. ಕಾನ್ಸ್ಟೇಬಲ್ ಮಹೇಶ್ ಹಾಗೂ ಚಂದ್ರಯ್ಯ ಮೃತ ದುರ್ದೈವಿಗಳು.
ಮೃತ ಮಹೇಶ್ ಕೊಡಿಗೇನಹಳ್ಳಿ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಆಗಿದ್ದರು. ತಡರಾತ್ರಿ ಸಂಬಂಧಿಗಳ ಮದುವೆಗೆ ಬೈಕ್ನಲ್ಲಿ ಬಂದಿದ್ದ ಮೂವರು, ಮದುವೆ ಮುಗಿಸಿ ಬೈಕ್ನಲ್ಲಿ ವಾಪಸ್ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಬೈಕ್ನಲ್ಲಿದ್ದ ಮತ್ತೊಬ್ಬ ಭರತ್ನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:33 am, Thu, 30 November 23