AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರೆ ವ್ಹಾ..! ಗೃಹಲಕ್ಷ್ಮಿ ಹಣದಿಂದ ಮಗನಿಗೆ ಬೈಕ್ ಬುಕ್ ಮಾಡಿದ ತಾಯಿ

Gruhalakshmi scheme: ಸಿದ್ದರಾಮಯ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣವು ನಾನಾ ಮಹಿಳೆಯರಿಗೆ ಹಲವಾರು ರೀತಿಯಲ್ಲಿ ಉಪಯೋಗವಾಗುತ್ತಿದೆ. ಇತ್ತೀಚೆಗಷ್ಟೇ ಗೃಹಲಕ್ಷ್ಮೀ ಹಣದಿಂದ ಮಹಿಳೆಯೊಬ್ಬರು ಫ್ರಿಡ್ಜ್ ಖರೀದಿಸಿದ್ದರು. ಅದೇ ರೀತಿಯಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ಮತ್ತೊಬ್ಬ ಮಹಿಳೆ ಫ್ಯಾನ್ಸಿ ಸ್ಟೋರ್ ಆರಂಭಿಸಿದ್ದರು. ಇತ್ತೀಚೆಗೆ ಅಜ್ಜಿಯೊಬ್ಬರು ಗೃಹಲಕ್ಷ್ಮಿ ಹಣದಲ್ಲಿ ಇಡೀ ಊರಿಗೆ ಹೋಳಿಗೆ ಊಟ ಹಾಕಿಸಿದ್ದರು. ಅಲ್ಲದೇ ಇದೇ ಗೃಹಲಕ್ಷ್ಮಿ ಯೋಜನೆಯಡಿ ಬಂದ ಹಣದಿಂದ ಬೆಳಗಾವಿಯ ಮಹಿಳೆಯೊಬ್ಬರು ತಮ್ಮ ಪತಿಯ ಕಣ್ಣಿನ ಶಸ್ತ್ರಚಿಕಿತ್ಸೆಯನ್ನು ಮಾಡಿಸಿದ್ದರು. ಇದೀಗ ಇದೇ ಬೆಳಗಾವಿಯಲ್ಲಿ ಗೃಹ ಲಕ್ಷ್ಮಿ ಹಣದಿಂದ ಮಹಿಳೆಯೋಬ್ಬರು ತನ್ನ ಮಗನಿಗೆ ಬೈಕ್ ಬುಕ್ ಮಾಡಿದ್ದಾರೆ.

ವಾರೆ ವ್ಹಾ..! ಗೃಹಲಕ್ಷ್ಮಿ ಹಣದಿಂದ ಮಗನಿಗೆ ಬೈಕ್ ಬುಕ್ ಮಾಡಿದ ತಾಯಿ
ಗೃಹ ಲಕ್ಷ್ಮಿ ಯೋಜನೆ
Sahadev Mane
| Updated By: ರಮೇಶ್ ಬಿ. ಜವಳಗೇರಾ|

Updated on: Oct 10, 2024 | 10:46 PM

Share

ಬೆಂಗಳೂರು, (ಅಕ್ಟೋಬರ್ 10):  ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ ಗೃಹಲಕ್ಷಿಯಿಂದ ಮನೆಯ ಯಜಮಾನಿಗೆ ಪ್ರತಿ ತಿಂಗಳು 2,000 ರೂ. ಹಣವನ್ನು ನೀಡಲಾಗುತ್ತಿದೆ. ಇದರಿಂದ ಹಲವಾರು ಮಹಿಳೆಯರಿಗೆ ಅನುಕೂಲವಾಗಿರುವ ಬಗ್ಗೆ ಹಲವು ಉದಾಹರಣೆಗಳು ಇವೆ. ಬೆಳಗಾವಿಯ ಅನಿತಾ ಎಂಬ ಬಡ ಮಹಿಳೆಯೊಬ್ಬರಿಗೆ ಗೃಹಲಕ್ಷ್ಮಿ ಹಣ ನೆರವಾಗಿದ್ದು ಅವರು ಆ ಹಣದಿಂದ ತಮ್ಮ ಪತಿಯ ಕಣ್ಣಿನ ಆಪರೇಷನ್ ಮಾಡಿಸಿದ್ದರು.  ಇದೀಗ ಇದೇ ಬೆಳಗಾವಿಯಲ್ಲಿ ಮಹಿಳೆಯೊಬ್ಬರು ಈ ಗೃಹ ಲಕ್ಷ್ಮಿ ಹಣದಿಂದ ತನ್ನ ಪುತ್ರನಿಗೆ ಬೈಕ್​ ಬುಕ್ ಮಾಡಿದ್ದಾಳೆ. ಹೌದು… ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕೌಜಲಗಿ ಗ್ರಾಮದ ಬಾಗವ್ವಾ ಸಣ್ಣಕ್ಕಿ ಎಂಬ ಮಹಿಳೆ, ಪುತ್ರನಿಗೆ ಬೈಕ್ ಖರೀದಿಸಲು ಕೂಡಿಟ್ಟಿದ್ದ ಗೃಹ ಲಕ್ಷ್ಮಿ ಹಣವನ್ನ ಮುಂಗಡವಾಗಿ (ಡೌನ್​ ಪೇಮೆಂಟ್) ಕಟ್ಟಿದ್ದಾಳೆ.

ಗೃಹಲಕ್ಷ್ಮಿ ಯೋಜನೆಯಿಂದ ಬಂದಿದ್ದ ಹಣವನ್ನು ಕೂಡಿಟ್ಟಿದ್ದ ಬಾಗವ್ವ, ಇದೀಗ ತನ್ನ ಮಗ ರಮೇಶ ನೀಲಪ್ಪನಿಗೆ ದ್ವಿಚಕ್ರ ವಾಹನ ಖರೀದಿಸಲು ನೀಡಿದ್ದಾಳೆ. ದ್ವಿಚಕ್ರ ವಾಹನ ಕೊಳ್ಳಲು ಮುಂದಾಗಿರುವ ಮಗನಿಗೆ ತಾಯಿ ಗೃಹಲಕ್ಷ್ಮಿ ಹಣ ನೀಡಿರುವುದಕ್ಕೆ ಫುಲ್ ಖುಷಿಯಾಗಿದ್ದಾನೆ.

ಇದನ್ನೂ ಓದಿ: ಕಣ್ಣಿನ ಆಪರೇಷನ್​ಗೆ ವರದಾನವಾದ ಗೃಹಲಕ್ಷ್ಮಿ ಹಣ

ಇನ್ನು ಈ ವಿಚಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಗಮನಕ್ಕೆ ಬಂದಿದ್ದು, ಕೂಡಲೇ ಬಾಗವ್ವ ಸಣ್ಣಕ್ಕಿ ಅವರಿಗೆ ಪತ್ರ ಬರೆದು ಮಹಿಳೆಯ ಕಾರ್ಯಕ್ಕೆ ಶ್ಲಾಘಿಸಿದ್ದಾರೆ. ಅಲ್ಲದೇ ತಮ್ಮ ತಾಯಿಯ ಗೃಹ ಲಕ್ಷ್ಮಿ ಹಣದಿಂದಲೇ ಹೊಸ ಬೈಕ್​ ಕೊಳ್ಳುತ್ತಿರುವ ರಮೇಶನಿಗೆ ಶುಭಾಶಯ ಕೋರಿದ್ದಾರೆ.

ಲಕ್ಷ್ಮೀ ಹೆಬ್ಬಾಳ್ಕರ್​ ಬರೆದ ಪತ್ರದಲ್ಲೇನಿದೆ?

ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಗೃಹಲಕ್ಷ್ಮಿ ಹಣವನ್ನು ಕೂಡಿಟ್ಟು ತಮ್ಮ ಮಗನಾದ ರಮೇಶ್​ ನೀಲಪ್ಪ ಸಣ್ಣಕ್ಕಿ ಅವರಿಗೆ ಬೈಕ್​ ವಾಹನ ಖರೀದಿಸಲು ಮುಂಗಾಡ ಹಣವನ್ನು ತಾವು(ಬಾಗವ್ವ) ನೀಡಿರುವು ವಿಷಯ ಕೇಳಿ ಇಲಾಖೆಯ ಮಂತ್ರಿಯಾದ ನನಗೆ ಅತೀವ ಖುಷಿ ತಂದಿದೆ.

ಗೃಹಲಕ್ಷ್ಮಿ ಯೋಜನಯಿಂದ ರಾಜ್ಯದ ಮಹಿಳೆಯರು ಸಾವಲಂಬಿ ಜೀವನ ನಡೆಸುವುದರ ಜೊತೆಯಲ್ಲಿ ಮನೆಯ ಪುರಷರಿಗೆ ಆರ್ಥಿಕವಾಗಿ ಸಹಾಯ ಮಾಡುತ್ತಿರುವುದು ನಿಜಕ್ಕೂ ಮಹುಳೆಯರ ಪಾಲಿಗೆ ಹೆಮ್ಮೆಯ ವಿಚಾರವಾಗಿದೆ. ವಿಜಯದಶಮಿ ಹಬ್ಬದ ಶುಭ ಸಂದರ್ಭದಲ್ಲಿ ತಮ್ಮ ಈ ಕಾರ್ಯವು ನಿಜಕ್ಕೂ ಶ್ಲಾಘನೀಯ. ಈ ಯೋಜನೆ ರೂವಾರಿಗಳಾದ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮೇಲೆ ತಮ್ಮ ಪ್ರೀತಿ ವಿಶ್ವಾಸ ಹೀಗೆ ಮುಂದುವರೆಲೆಂದು ಬಯಸುತ್ತಾ, ತಮಗೆ ಈ ಮೂಲಕ ಹೊಸ ವಾಹನ ಖರೀಸುತ್ತಿರುವ ಶುಭ ಸಂದರ್ಭದಲ್ಲಿ ಅಭಿನಂದನೆಯನ್ನು ಸಲ್ಲಿಸುತ್ತೇನೆ ಎಂದು ಬಾಗವ್ವಗೆ ಪತ್ರ ಬರೆದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್