Belagavi News: ಎರಡು ಲಾರಿ-ಕಾರು ಮಧ್ಯೆ ಅಪಘಾತ; ಇಬ್ಬರ ಸಾವು, ಕಾಡಸಿದ್ದೇಶ್ವರ ಸ್ವಾಮೀಜಿ ಸೇರಿ ಇಬ್ಬರಿಗೆ ಗಾಯ

ಬೆಳಗಾವಿ ತಾಲೂಕಿನ ಕಾಕತಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಲಾರಿ, ಕಾರು ಮಧ್ಯೆ ಭೀಕರ ಅಪಘಾತ‌ವಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಶಿವಾಪೂರ ಗ್ರಾಮದ ಮುಪ್ಪಿನ ಕಾಡಸಿದ್ದೇಶ್ವರ ಸ್ವಾಮೀಜಿ ಸೇರಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ.

Belagavi News: ಎರಡು ಲಾರಿ-ಕಾರು ಮಧ್ಯೆ ಅಪಘಾತ; ಇಬ್ಬರ ಸಾವು, ಕಾಡಸಿದ್ದೇಶ್ವರ ಸ್ವಾಮೀಜಿ ಸೇರಿ ಇಬ್ಬರಿಗೆ ಗಾಯ
ಬೆಳಗಾವಿಯಲ್ಲಿ ಭೀಕರ ಕಾರು ಅಪಘಾತ
Follow us
ಕಿರಣ್ ಹನುಮಂತ್​ ಮಾದಾರ್
|

Updated on: Jun 17, 2023 | 12:49 PM

ಬೆಳಗಾವಿ: ತಾಲೂಕಿನ ಕಾಕತಿ ಬಳಿಯ ರಾಷ್ಟ್ರೀಯ ಹೆದ್ದಾರಿ(National Highway) ನಾಲ್ಕರಲ್ಲಿ ಎರಡು ಲಾರಿ, ಕಾರು ಮಧ್ಯೆ ಭೀಕರ ಅಪಘಾತ‌ (Accident)ವಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಶಿವಾಪೂರ ಗ್ರಾಮದ ಮುಪ್ಪಿನ ಕಾಡಸಿದ್ದೇಶ್ವರ ಸ್ವಾಮೀಜಿ ಸೇರಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಸ್ಥಳಕ್ಕಾಗಮಿಸಿದ ಕಾಕತಿ ಪೊಲೀಸರು ಗಾಯಾಳುಗಳನ್ನ ಖಾಸಗಿ ಆಸ್ಪತ್ರೆಗೆ ಶಿಫ್ಟ್​ ಮಾಡಿದ್ದಾರೆ.

5 ಸಾವಿರ ಸಾಲ ಕೇಳಿದ್ದಕ್ಕೆ ಮಚ್ಚಿನಿಂದ ಹಲ್ಲೆ; ಆಸ್ಪತ್ರೆಗೆ ದಾಖಲು

ತುಮಕೂರು: 5 ಸಾವಿರ ಸಾಲ ಕೇಳಿದ್ದಕ್ಕೆ ಮಚ್ಚಿನಿಂದ ಹಲ್ಲೆ ಮಾಡಿದ ಘಟನೆ ಜಿಲ್ಲೆಯ ಕುಣಿಗಲ್ ತಾಲೂಕಿನ ಲಾಳಪುರ ಕಾಲೋನಿಯಲ್ಲಿ ನಡೆದಿದೆ. ಮಹೇಶ ಹಾಗೂ ಆತನ ಸಹಚರರು ಸೇರಿಕೊಂಡು ಸಚಿನ್ ಎಂಬುವವನಿಗೆ ಹಲ್ಲೆ ಮಾಡಿದ್ದಾರೆ. ಹೌದು ಮನೆಯಲ್ಲಿ ಮಲಗಿರುವಾಗ 4 ಜನರಿಂದ ಹಲ್ಲೆ ಮಾಡಿದ್ದು, ಸಚಿನ್​ ತಲೆಗೆ ಗಂಭೀರ ಗಾಯವಾಗಿದೆ. ಕೂಡಲೇ ಆತನನ್ನ ಕುಣಿಗಲ್ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಕುಣಿಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ, ಪಾದಾಚಾರಿ ಸ್ಥಳದಲ್ಲೇ ಸಾವು: ಸ್ಥಳೀಯರಿಂದ ಹೆದ್ದಾರಿ ತಡೆದು ಪ್ರತಿಭಟನೆ

ಗೋಡೆ ಕುಸಿದು ಬಿದ್ದು ಕಾರ್ಮಿಕ ಸಾವು

ಕೋಲಾರ ಜಿಲ್ಲೆಯ ಕೆಜಿಎಫ್ ನಗರದ ಅಂಡರ್​​​ಸನ್ ಪೇಟೆಯಲ್ಲಿ ಗೋಡೆ ಕುಸಿದು ಬಿದ್ದು, ಕಾರ್ಮಿಕ ಅಮರನಾಥ್​​(32) ಸಾವನ್ನಪ್ಪಿದ್ದಾನೆ. ಅಂಡರ್​​ಸನ್ ಪೇಟೆ ರಸ್ತೆ ಅಗಲೀಕರಣಕ್ಕೆ ಅಡ್ಡಲಾಗಿದ್ದ ಮಸೀದಿಯನ್ನ ತೆರವುಗೊಳಿಸುವಾಗ ಈ ದುರಂತ ನಡೆದಿದೆ. ಸ್ಥಳಕ್ಕೆ ಅಂಡರ್​​ಸನ್‌ ಪೇಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಪಘಾತಕ್ಕೊಳಗಾಗಿದ್ದ ವೃದ್ಧೆ ಚಿಕಿತ್ಸೆ ಫಲಿಸದೇ ಸಾವು

ಬೆಂಗಳೂರು: ಮೇ. 26ರಂದು ಕೆಂಗೇರಿಯ ವಿದ್ಯಾಪೀಠ ರಸ್ತೆಯಲ್ಲಿ ಭೀಕರ ಅಪಘಾತವೊಂದು ನಡೆದಿತ್ತು. ಹೌದು ರಸ್ತೆ ದಾಟುವಾಗ ಲಾರಿಯೊಂದು 70 ವರ್ಷದ ವೃದ್ದೆ ಲಕ್ಷ್ಮಮ್ಮ ಎನ್ನುವವರ ಮೇಲೆ ಹರಿದಿತ್ತು. ಬಳಿಕ ಗಂಭೀರವಾಗಿ ಗಾಯಗೊಂಡ ಲಕ್ಷ್ಮಮ್ಮರನ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಪಡೆಯುತ್ತಿದ್ದ ಲಕ್ಷ್ಮಮ್ಮ ಇಂದು(ಜೂ.17) ಸಾವನ್ನಪ್ಪಿದ್ದಾರೆ. ಈ ಕುರಿತು ಕೆಂಗೇರಿ ಸಂಚಾರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ