ಬೆಳಗಾವಿ ವ್ಯಾಕ್ಸಿನ್ ಡಿಪೋದಲ್ಲಿ ಅಕ್ರಮ ಕಾಮಗಾರಿ ಆರೋಪ; ಸ್ಮಾರ್ಟ್ ಸಿಟಿ ಎಂಡಿ ವಿರುದ್ಧ ಕೇಸ್ ದಾಖಲಿಸಿದ ಡಿಎಚ್‌ಒ

|

Updated on: Jun 20, 2023 | 12:24 PM

ನಗರದ ವ್ಯಾಕ್ಸಿನ್ ಡಿಪೋದಲ್ಲಿ ಅಕ್ರಮ ಕಾಮಗಾರಿ ಆರೋಪ ಕೇಳಿಬಂದಿದ್ದು, ಸ್ಮಾರ್ಟ್ ಸಿಟಿ ಎಂಡಿ ವಿರುದ್ಧ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಡಿಎಚ್‌ಒ ಡಾ.ಮಹೇಶ್ ಕೋಣಿ ಕೇಸ್ ದಾಖಲಿಸಿದ್ದಾರೆ.

ಬೆಳಗಾವಿ ವ್ಯಾಕ್ಸಿನ್ ಡಿಪೋದಲ್ಲಿ ಅಕ್ರಮ ಕಾಮಗಾರಿ ಆರೋಪ; ಸ್ಮಾರ್ಟ್ ಸಿಟಿ ಎಂಡಿ ವಿರುದ್ಧ ಕೇಸ್ ದಾಖಲಿಸಿದ ಡಿಎಚ್‌ಒ
ಡಿಎಚ್‌ಒ ಡಾ.ಮಹೇಶ್ ಕೋಣಿ
Follow us on

ಬೆಳಗಾವಿ: ನಗರದ ವ್ಯಾಕ್ಸಿನ್ ಡಿಪೋದಲ್ಲಿ ಅಕ್ರಮ ಕಾಮಗಾರಿ ಆರೋಪ ಕೇಳಿಬಂದಿದ್ದು, ಸ್ಮಾರ್ಟ್ ಸಿಟಿ ಎಂಡಿ ವಿರುದ್ಧ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಡಿಎಚ್‌ಒ(DHO) ಡಾ.ಮಹೇಶ್ ಕೋಣಿ ಕೇಸ್ ದಾಖಲಿಸಿದ್ದಾರೆ. ಪರವಾನಿಗೆ ಇಲ್ಲದೇ ತಮ್ಮ ಕಚೇರಿ ಆವರಣದಲ್ಲಿನ ಜಾಗದಲ್ಲಿ ಅಕ್ರಮ ಕಾಮಗಾರಿ ಮಾಡಿದ್ದಾರೆ. ಮಣ್ಣು ಜೊತೆಗೆ ಮರಕಡಿದು ಅಕ್ರಮವಾಗಿ ಸಾಗಿಸಿದ್ದಾರೆಂದು ಸ್ಮಾರ್ಟ ಸಿಟಿ ಎಂಡಿ ವಿರುದ್ಧ ಸೆಕ್ಷೆನ್ 420, 427, 447ಐಪಿಸಿ ಅಡಿ ಪ್ರಕರಣ ದಾಖಲು ಮಾಡಲಾಗಿದ್ದು, ಈ ಹಿನ್ನಲೆ ಕಾಮಗಾರಿಯನ್ನ ಅರ್ಧಕ್ಕೆ ಸ್ಥಗಿತ ಮಾಡಲಾಗಿದೆ.

2016ರಿಂದ ಸ್ಮಾರ್ಟ್ ಸಿಟಿ ಕಾಮಗಾರಿ ಮಾಡುತ್ತಿದ್ದ ಅಧಿಕಾರಿಗಳು

ಇನ್ನು ಇಲ್ಲಿ ಅಮೂಲ್ಯವಾದ ಮರ, ಪ್ರಾಣಿ ಪಕ್ಷಿಗಳಿರುವುದರಿಂದ ಕಾಮಗಾರಿ ಬೇಡ ಎಂದು ಪರಿಸರವಾದಿಗಳು ವಿರೋಧ ವ್ಯಕ್ತಪಡಿಸಿದ್ದರು. ಇದಕ್ಕೆ ಸಂಬಂಧಪಟ್ಟ ಇಲಾಖೆ ಅನುಮತಿ ಪಡೆಯದೇ ಸ್ಮಾರ್ಟ್ ಕಾಮಗಾರಿ ನಡೆಸಿತಾ? ವಿರೋಧದ ನಡುವೆ ಕಾಮಗಾರಿ ನಡೆಸುವ ಹಿಂದಿನ ಉದ್ದೇಶವೇನು ಎಂದು ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಸ್ಮಾರ್ಟ್ ಸಿಟಿ ಕಾಮಗಾರಿ ವಿರುದ್ಧ ಮೊದಲ ಕೇಸ್ ದಾಖಲು ಆಗಿದೆ. ಈ ಹಿಂದೆ ಸಚಿವ ಸತೀಶ್ ಜಾರಕಿಹೊಳಿಯವರು ಸ್ಮಾರ್ಟ್ ಸಿಟಿ ಕಾಮಗಾರಿ ಕಳಪೆ ಆಗಿದ್ದು, ಆ ಕುರಿತು ಭ್ರಷ್ಟಾಚಾರ ಆರೋಪದ ಮೇಲೆ ತನಿಖೆ ಮಾಡಿಸುವುದಾಗಿ ಹೇಳಿದ್ದರು.

ಇದನ್ನೂ ಓದಿ:ಬೆಂಗಳೂರಿನಲ್ಲಿ ಮುಂದುವರೆಯಲಿದೆ ಜಿಸಿಬಿ ಘರ್ಜನೆ, ಪಾಲಿಕೆ ಟಾರ್ಗೆಟ್ ನಲ್ಲಿವೆ 600 ಅಕ್ರಮ ಸ್ಥಳಗಳು

ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮವಾಗಿ ನಿವೇಶನ ಹಂಚಿಕೆ ಆರೋಪ; ಅಧಿಕಾರಿಗಳಿಗೆ ಬಂಧನ ಭೀತಿ

ಬೆಳಗಾವಿ: ಜಿಲ್ಲೆಯಲ್ಲಿ ಇಂತಹ ಅಕ್ರಮ ಕಾಮಗಾರಿಗಳು ಇದೇ ಮೊದಲಲ್ಲ, ಇದೆ ಜೂನ್​ ತಿಂಗಳು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮವಾಗಿ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ. ಅಧಿಕಾರಿ ಕಳ್ಳಾಟದ ಕುರಿತು ರಾಜು ಟೋಪಣ್ಣವರ್ ಎಂಬುವವರು ಲೋಕಾಯುಕ್ತದಲ್ಲಿ ದೂರು ಸಲ್ಲಿಸಿದ್ದರು. ಈ ಕುರಿತು ಬುಡಾ ಆಯುಕ್ತ ಪ್ರೀತಮ್ ನಸಲಾಪುರೆ ವಿರುದ್ಧ ಕೇಸ್ ದಾಖಲಿಸಲು ನಾಲ್ಕನೇ ಹೆಚ್ಚುವರಿ ಮತ್ತು ಸೆಷನ್ಸ್ ಕೋರ್ಟ್ ಆದೇಶ ಹೊರಡಿಸಿತ್ತು.

ದೂರು ಸಲ್ಲಿಸಿದರೂ ಲೋಕಾಯುಕ್ತ ಕೇಸ್ ದಾಖಲಿಸಿಕೊಂಡಿರಲಿಲ್ಲ

ಇನ್ನು ಈ ಕುರಿತು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದರೂ ಕೇಸ್ ದಾಖಲಿಸಿಕೊಂಡಿರಲಿಲ್ಲ. ಈ ಹಿನ್ನೆಲೆ ರಾಜು ಟೋಪಣ್ಣವರ್ ನ್ಯಾಯಾಲಯದ ಮೆಟ್ಟಿಲೇರಿದ್ದರು. ಈ ಕುರಿತು ಅಧಿಕಾರಿ ವಿರುದ್ಧ 120ಬಿ, 405, 406, 420, 425, 463, 464, 465, 466, 468, 477a ಸೆಕ್ಷನ್ ಅಡಿಯಲ್ಲಿ ಕೇಸ್ ದಾಖಲಿಸಿ ವಿಚಾರಣೆ ನಡೆಸಿ, ವರದಿ ನೀಡುವಂತೆ ಆದೇಶಿಸಲಾಗಿತ್ತು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:24 pm, Tue, 20 June 23