ಅನಧಿಕೃತ ಪ್ರಾರ್ಥನಾ ಮಂದಿರಗಳ ತೆರವು; 80 ವರ್ಷಕ್ಕೂ ಹಿಂದಿನ ಆಂಜನೇಯ ದೇವಸ್ಥಾನದ ಮೇಲೂ ಕಣ್ಣು

ಎಂಟು ವರ್ಷದ ಹಿಂದೆ ಹೋರಾಡಿ ದೇವಸ್ಥಾನ ತೆರವಾಗದಂತೆ ನೋಡಿಕೊಂಡಿದ್ದ ಸ್ಥಳೀಯರು, ಈಗ ಮತ್ತೆ ದೇವಸ್ಥಾನ ತೆರವುಗೊಳ್ಳುವ ಭೀತಿ ಎದುರಿಸುವಂತಾಗಿದೆ.

ಅನಧಿಕೃತ ಪ್ರಾರ್ಥನಾ ಮಂದಿರಗಳ ತೆರವು; 80 ವರ್ಷಕ್ಕೂ ಹಿಂದಿನ ಆಂಜನೇಯ ದೇವಸ್ಥಾನದ ಮೇಲೂ ಕಣ್ಣು
ಆಂಜನೇಯ ದೇವಸ್ಥಾನ
Follow us
TV9 Web
| Updated By: preethi shettigar

Updated on:Sep 14, 2021 | 11:05 AM

ಬೆಳಗಾವಿ: ಅನಧಿಕೃತ ಪ್ರಾರ್ಥನಾ ಮಂದಿರಗಳನ್ನು ತೆರವುಗೊಳಿಸುವ ವಿಚಾರವಾಗಿ ರಾಜ್ಯದಲ್ಲಿ ಸದ್ಯ ಚರ್ಚೆ ಮತ್ತು ಗೊಂದಲ ಸೃಷ್ಟಿಯಾಗಿದೆ. ಅದರಂತೆ ಹಳೆ ಬೆಳಗಾವಿ ಹೊರ ವಲಯದಲ್ಲಿರುವ ಎಂಬತ್ತು ವರ್ಷಕ್ಕೂ ಹಿಂದಿನ ಆಂಜನೇಯ ದೇವಸ್ಥಾನವನ್ನು ಸುಪ್ರೀಂಕೋರ್ಟ್ ತೆರವುಗೊಳಿಸಲು ತಿಳಿಸಿದೆ. ಈ ಹಿಂದೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆಡಳಿತದ ಸಂದರ್ಭದಲ್ಲಿ ದೇವಸ್ಥಾನ ತೆರವು ಮಾಡಲು ಆದೇಶ ನೀಡಲಾಗಿತ್ತು. ಆದರೆ ಆದೇಶವಿದ್ದರೂ ಹೋರಾಟ ಮಾಡಿ ಸ್ಥಳೀಯರು ಮತ್ತು ಹಿಂದೂಪರ ಕಾರ್ಯಕರ್ತರು ಉಳಿಸಿಕೊಂಡಿದ್ದರು. ಎಂಟು ವರ್ಷದ ಹಿಂದೆ ಹೋರಾಡಿ ದೇವಸ್ಥಾನ ತೆರವಾಗದಂತೆ ನೋಡಿಕೊಂಡಿದ್ದ ಸ್ಥಳೀಯರು, ಈಗ ಮತ್ತೆ ದೇವಸ್ಥಾನ ತೆರವುಗೊಳ್ಳುವ ಭೀತಿ ಎದುರಿಸುವಂತಾಗಿದೆ. ಧಾರವಾಡ: ಹುಬ್ಬಳ್ಳಿಯ ಉಣಕಲ್ ಕ್ರಾಸ್ ಬಳಿಯಿರುವ ರಾಮಲಿಂಗೇಶ್ವರ ದೇವಾಲಯದ ಭಕ್ತರಲ್ಲಿ ಆತಂಕ ಅನಧಿಕೃತ ಪ್ರಾರ್ಥನಾ ಮಂದಿರಗಳನ್ನು ತೆರವುಗೊಳಿಸುವ ಸುಪ್ರೀಂಕೋರ್ಟ್ ಆದೇಶ ಹಿನ್ನೆಲೆ, ಅವಳಿ ನಗರದ ಭಕ್ತರಲ್ಲಿ ಆತಂಕ ಶುರುವಾಗಿದೆ. ಧಾರವಾಡ ಜಿಲ್ಲೆಯಲ್ಲಿ 324 ಮಂದಿರ ಮಸೀದಿ ತೆರವುಗೊಳಿಸಲು ಆದೇಶ ನೀಡಲಾಗಿದೆ. ಈಗಾಗಲೇ 43 ಧಾರ್ಮಿಕ ಕಟ್ಟಡಗಳನ್ನು ಜಿಲ್ಲಾಡಳಿತ ತೆರವುಗೊಳಿಸಿದೆ. ಆದರೆ ಈಗ 281 ಅನಧಿಕೃತವಾಗಿರುವ ಪ್ರಾರ್ಥನಾ ಮಂದಿರ ತೆರವುಗೊಳಿಸುವುದೇ ದೊಡ್ಡ ಸವಾಲಾಗಿದೆ.

ಹುಬ್ಬಳ್ಳಿಯ ಉಣಕಲ್ ಕ್ರಾಸ್ ಬಳಿಯಿರುವ ರಾಮಲಿಂಗೇಶ್ವರ ದೇವಾಲಯದ ಭಕ್ತರಲ್ಲಿ ಆತಂಕ ಶುರುವಾಗಿದೆ. ಇದು ಪುರಾತನ ಕಾಲದ ಸ್ವಯಂಭು ಲಿಂಗವಾಗಿದ್ದು, ಬಿಆರ್​ಟಿಸಿ ಮೇಲ್ಸೇತುವೆ ಕಾಮಗಾರಿ ಸಮಯದಲ್ಲು ತೆರವುಗೊಳ್ಳದ ಗುಡಿ, ಸುಪ್ರೀಂಕೋರ್ಟ್ ಆದೇಶ ಹಿನ್ನೆಲೆಯಲ್ಲಿ ತೆರವಿನ ಬಗ್ಗೆ ಆಡಳಿತ ಮಂಡಳಿಯಿಂದ ಚರ್ಚೆಯಾಗುತ್ತಿದೆ.

ಅಶ್ವತ್ಥಾಮ ದೇವಸ್ಥಾನಕ್ಕೂ ತೆರವು ಆತಂಕ ಶುರು ಹತ್ತು ವರ್ಷಗಳ ಹಿಂದೆ ರಸ್ತೆ ಅಗಲೀಕರಣ ವೇಳೆ ಬೆಳಗಾವಿ ಹೃದಯ ಭಾಗದಲ್ಲಿರುವ ಪಾಂಗಳುಗಲ್ಲಿಯ ಅಶ್ವತ್ಥಾಮ ದೇವಸ್ಥಾನ ತೆರುವಿಗೆ ಜಿಲ್ಲಾಡಳಿತ ಮುಂದಾಗಿದ್ದಾಗ ಸ್ಥಳೀಯರು ಹೋರಾಟ ಮಾಡಿ ದೇವಸ್ಥಾನ ಉಳಿಸಿಕೊಂಡಿದ್ದರು. ಇದೀಗ ಮತ್ತೆ ತೆರವುಗೊಳ್ಳುವ ಭೀತಿಯಲ್ಲಿ ಅಶ್ವತ್ಥಾಮ ದೇವಸ್ಥಾನ ಭಕ್ತರು ಕಾಲ ಕಳೆಯುವಂತಾಗಿದೆ. 150ಕ್ಕೂ ಅಧಿಕ ಇತಿಹಾಸ ಹೊಂದಿರುವ ದೇವಸ್ಥಾನ ಇದಾಗಿದೆ.

ದಾವಣಗೆರೆ: 23 ಅನಧಿಕೃತ ಧಾರ್ಮಿಕ ಕಟ್ಟಡ ಗುರುತಿಸಿದ ಜಿಲ್ಲಾಡಳಿತ ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆ ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವು ಕಾರ್ಯಾಚರಣೆ ಶುರುವಾಗಿದೆ. ಅದರಂತೆ ದಾವಣಗೆರೆ ಜಿಲ್ಲಾಡಳಿತ ಈಗಾಗಲೇ 23 ಅನಧಿಕೃತ ಧಾರ್ಮಿಕ ಕಟ್ಟಡ ಗುರುತಿಸಿದೆ. ಈ ಹಿಂದೆ 13 ಕಟ್ಟಡಗಳ ತೆರವು ಕಾರ್ಯಾಚರಣೆ ನಡೆದಿತ್ತು. ಸದ್ಯ ಉಳಿದ ಹತ್ತು ಕಟ್ಟಡಗಳ ತೆರವಿಗೆ ಮಾಹಿತಿ ಸಂಗ್ರಹಿಸಲಾಗಿದೆ. ಜಿಲ್ಲಾಡಳಿದಿಂದ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಸೂಚನೆ ನೀಡಲಾಗಿದ್ದು, ಈ ಹತ್ತು ಧಾರ್ಮಿಕ ಕಟ್ಟಡಗಳ ವಿಚಾರವಾಗಿ ಕೆಲ ಪ್ರಕರಣಗಳಲ್ಲಿ ಸ್ಥಳೀಯರು ಕೋರ್ಟ್ ಮೊರೆ ಹೋಗಿರುವ ಸಾಧ್ಯತೆ ಇದೆ.

ಇದನ್ನೂ ಓದಿ: ತೆರವುಗೊಳಿಸಬೇಕಾದ ಅನಧಿಕೃತ ದೇಗುಲಗಳ ಪಟ್ಟಿಗೆ ಸೇರಿರುವ ಮೈಸೂರಿನ ಪ್ರಮುಖ ಧಾರ್ಮಿಕ ಕೇಂದ್ರಗಳು ಇವು

ಚಾಮರಾಜನಗರದ 36 ದೇಗುಲ ಪೈಕಿ 1 ಉಳಿಸಿಕೊಂಡ ಜಿಲ್ಲಾಡಳಿತ; ಮೈಸೂರು, ಬೆಂಗಳೂರಿನಲ್ಲಿ ವಿವಾದ ಹೆಚ್ಚಿಸುತ್ತಿದೆ ತೆರವು ಕಾರ್ಯ

Published On - 10:35 am, Tue, 14 September 21

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್