ಬೆಳಗಾವಿ ಜಿಲ್ಲೆಯಲ್ಲಿ ಮತ್ತೊಂದು ಅಮಾನವೀಯ ಘಟನೆ: ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಹಲ್ಲೆ ಆರೋಪ

ಬೆಳಗಾವಿ ಜಿಲ್ಲೆಯ ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದಲ್ಲಿ ಓರ್ವ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಲಾಗಿತ್ತು. ಈ ಘಟನೆ ಮಾಸುವ ಮುನ್ನವೇ ಇದೇ ಜಿಲ್ಲೆಯ ಬೈಲಹೊಂಗಲ ತಾಲೂಕಿನ ತಿಗಡಿ ಗ್ರಾಮದಲ್ಲಿ ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ.

ಬೆಳಗಾವಿ ಜಿಲ್ಲೆಯಲ್ಲಿ ಮತ್ತೊಂದು ಅಮಾನವೀಯ ಘಟನೆ: ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಹಲ್ಲೆ ಆರೋಪ
ಸಾಂದರ್ಭಿಕ ಚಿತ್ರ
Follow us
Sahadev Mane
| Updated By: ವಿವೇಕ ಬಿರಾದಾರ

Updated on:Jan 03, 2024 | 10:35 AM

ಬೆಳಗಾವಿ, ಜನವರಿ 03: ಬೆಳಗಾವಿ (Belagavi) ಜಿಲ್ಲೆಯಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. ವಂಟಮೂರಿ ಗ್ರಾಮದಲ್ಲಿ ನಡೆದಿದ್ದ ಮಹಿಳೆ ಮೇಲಿನ ಹಲ್ಲೆ ಪ್ರಕರಣ ಮಾಸುವ ಮುನ್ನವೇ ಜಿಲ್ಲೆಯ ಬೈಲಹೊಂಗಲ (Bailhongal) ತಾಲೂಕಿನ ತಿಗಡಿ ಗ್ರಾಮದಲ್ಲಿ ಮಹಿಳೆಯನ್ನು (Woman) ಅರೆಬೆತ್ತಲೆಗೊಳಿಸಿ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಸದಸ್ಯರ ವಿರುದ್ಧ ಹಲ್ಲೆ ನಡೆಸಿರುವ ಆರೋಪವಿದೆ. ಪ್ರಕರಣ ಸಂಬಂಧ ಮಹಿಳೆ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ (SP) ಭೀಮಾಶಂಕರ್​​ ಅವರಿಗೆ ದೂರು ನೀಡಿದ್ದಾರೆ.

ಎಸ್​​ಪಿ ಸೂಚನೆ ಮೇರೆಗೆ ಜಿಲ್ಲಾ ಮಹಿಳಾ ಪೊಲೀಸ್​ ಠಾಣೆಯಲ್ಲಿ ಆರೋಪಿಗಳಾದ ಕಲ್ಲಪ್ಪ ಡೊಂಕನ್ನವರ್, ಅಡಿವೆಪ್ಪ ದಳವಾಯಿ, ಕಲ್ಪನಾ ಡೊಂಕನ್ನವರ್, ಸಾಧಿಕ್, ಇಸ್ಮಾಯಿಲ್ ಸೇರಿದಂತೆ 20 ಜನರ ವಿರುದ್ಧ ಐಪಿಸಿ ಸೆಕ್ಷನ್​​ 1860ರಡಿ 143, 147, 354(a), 354(b), 323, 324, 384, 201, 427, 342, 307, 504, 505, 149ರಡಿ ದೂರು ದಾಖಲಾಗಿದೆ.

ಇದನ್ನೂ ಓದಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತವರು ಕ್ಷೇತ್ರದಲ್ಲಿ ಅಂಗನವಾಡಿ ಸಹಾಯಕಿ ಮೂಗು ಕತ್ತರಿಸಿ ರಾಕ್ಷಸೀ ಕೃತ್ಯ

ಮಹಿಳೆಯ ಜಮೀನಿನಲ್ಲಿ ಪೈಪ್​​ಲೈನ್​​ವೊಂದು ಹಾದುಹೋಗಿತ್ತು. ​ಈ ಪೈಪ್​​ಲೈನ್​ನಿಂದ ಬೆಳೆಹಾನಿಯಾಗುತ್ತಿದೆ, ಹೀಗಾಗಿ ಇದನ್ನು ತೆರವುಗೊಳಿಸುವಂತೆ ಮಹಿಳೆ ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ ದೂರು ನೀಡಿದ್ದರು. ಹಲವು ಬಾರಿ ಮನವಿ ಮಾಡಿದ್ದರೂ ಗ್ರಾಮ ಪಂಚಾಯಿತಿಯವರು ಯಾವುದೇ ಕ್ರಮಕೈಗೊಂಡಿರಲಿಲ್ಲ.

ಈ ವಿಚಾರವಾಗಿ ಮಹಿಳೆ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಸದಸ್ಯರ ನಡುವೆ ವಾಗ್ವಾದ ನಡೆದಿತ್ತು. ಇದಾದ ಬಳಿಕ ಗ್ರಾಮ ಪಂಚಾಯಿತಿ ಸದಸ್ಯ ಮಹಿಳೆ ವಿರುದ್ಧ ಬೈಲಹೊಂಗಲ ಪೊಲೀಸ್​ ಠಾಣೆಯಲ್ಲಿ ಜಾತಿ ನಿಂದನೆ ದೂರು ದಾಖಲಸಿದ್ದನು. ನಂತರ ಮತ್ತೆ ಮಹಿಳೆ ಜೊತೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಸದಸ್ಯರು ಗಲಾಟೆ ಮಾಡಿದ್ದರು. ಈ ವೇಳೆ ತನ್ನನ್ನು ಅರೆಬೆತ್ತಲೆಗೊಳಿಸಿ ಹಲ್ಲೆ ಮಾಡಿದ್ದಾರೆಂದು ಮಹಿಳೆ ದೂರಿನಲ್ಲಿ ದಾಖಲಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:41 am, Wed, 3 January 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ