AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲಿ ಮತ್ತೊಂದು ಬಹುಕೋಟಿ ವಂಚನೆ ಪ್ರಕರಣ: ದಾಳಿ ವೇಳೆ ಕಂಪನಿಯ ಸರ್ವರ್​​ ಡೌನ್​​ ಮಾಡಿ ಕಳ್ಳಾಟ?

ಬೆಳಗಾವಿಯ ಆದಿತ್ಯರಾಜ ಕ್ಯಾಪಿಟಲ್ ಕಂಪನಿ ಮೇಲೆ ಅಧಿಕಾರಿಗಳು ದಾಳಿ ನಡೆಸಿದ ಬೆನ್ನಲ್ಲೇ ಕಂಪನಿಯ ಸರ್ವರ್ ಡೌನ್ ಆಗಿದೆ. ನೂರಾರು ಕೋಟಿ ರೂ. ವಂಚನೆ ಶಂಕೆ ವ್ಯಕ್ತವಾಗಿದ್ದು, ತನಿಖೆ ಚುರುಕುಗೊಂಡಿದೆ. ಶಿವಂ ಅಸೋಸಿಯೇಟ್ಸ್ ಸಂಸ್ಥೆಯಿಂದ ಸುಮಾರು 4,500 ಕೋಟಿ ರೂ. ವಂಚನೆ ಪ್ರಕರಣ ಸಂಬಂಧ ತನಿಖೆ ನಡೆಯುತ್ತಿರುವ ನಡುವೆಯೇ ಅದೇ ಮಾದರಿಯ ಮತ್ತೊಂದು ಕೇಸ್​ ವರದಿಯಾಗಿರೋದು ಪೊಲೀಸರಿಗೂ ತಲೆನೋವಾಗಿ ಮಾರ್ಪಟ್ಟಿದೆ.

ಬೆಳಗಾವಿಯಲ್ಲಿ ಮತ್ತೊಂದು ಬಹುಕೋಟಿ ವಂಚನೆ ಪ್ರಕರಣ: ದಾಳಿ ವೇಳೆ ಕಂಪನಿಯ ಸರ್ವರ್​​ ಡೌನ್​​ ಮಾಡಿ ಕಳ್ಳಾಟ?
ಸಾಂದರ್ಭಿಕ ಚಿತ್ರImage Credit source: Getty Images
ಸಹದೇವ್​ ಮಾನೆ
| Edited By: |

Updated on: Jun 04, 2026 | 2:21 PM

Share

ಬೆಳಗಾವಿ, ಜೂನ್​ 04: ಶಿವಂ ಅಸೋಸಿಯೇಟ್ಸ್ ಸಂಸ್ಥೆಯಿಂದ ಸಾವಿರಾರು ಕೋಟಿ ಅಕ್ರಮ ಸಂಬಂಧ ತನಿಖೆ ನಡೆಯುತ್ತಿರುವ ನಡುವೆಯೇ ಬೆಳಗಾವಿಯಲ್ಲಿ ಮತ್ತೊಂದು ನೂರಾರು ಕೋಟಿ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಭಾಗ್ಯ ನಗರದಲ್ಲಿರುವ ಆದಿತ್ಯರಾಜ ಕ್ಯಾಪಿಟಲ್ ಪ್ರೈವೇಟ್​​ ಲಿಮಿಟೆಡ್​​ ಕಂಪನಿ ಮೇಲೆ ಎಸಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ರೇಡ್​​ ಕುರಿತು ಮಾಹಿತಿ ಸಿಗುತ್ತಿದ್ದಂತೆ ಆನ್ ಲೈನ್ ಮೂಲಕ ವ್ಯವಹಾರ ನಡೆಸುತ್ತಿದ್ದ ಕಂಪನಿಯ ವೆಬ್​​ಸೈಟ್​​ ಸ್ಥಗಿತವಾಗಿದೆ. ಹೀಗಾಗಿ ಕಂಪನಿ ಮಾಲಿಕ ಅಧಿಕಾರಿಗಳಿಗೇ ಚಳ್ಳೆಹಣ್ಣು ತಿನ್ನಿಸಲು ಮುಂದಾದರಾ ಎಂಬ ಅನುಮಾನವೂ ವ್ಯಕ್ತವಾಗಿದೆ.

ಮುಖ್ಯಾಂಶಗಳು

  • ಬೆಳಗಾವಿಯಲ್ಲಿ ಮತ್ತೊಂದು ನೂರಾರು ಕೋಟಿ ವಂಚನೆ ಪ್ರಕರಣ
  • ಆದಿತ್ಯರಾಜ ಕ್ಯಾಪಿಟಲ್ ಪ್ರೈ.​​ ಲಿಮಿಟೆಡ್​​ ಕಂಪನಿ ಮೇಲೆ ದಾಳಿ
  • ರೇಡಿ ಮಾಹಿತಿ ಸಿಗುತ್ತಿದ್ದಂತೆಯೇ ಕಂಪನಿಯ ಸರ್ವರ್​​ ಡೌನ್​!

ಆದಿತ್ಯರಾಜ ಕ್ಯಾಪಿಟಲ್ ಪ್ರೈವೇಟ್​​ ಲಿಮಿಟೆಡ್​​ ಕಂಪನಿಯನ್ನು ಮಹಾರಾಷ್ಟ್ರ ಮೂಲದ ಬಲರಾಮ್ ಮಾನೆ ಎಂಬಾತ ನಡೆಸುತ್ತಿದ್ದು, ಒಟ್ಟು 7 ಶಾಖೆಗಳನ್ನು ಇದು ಹೊಂದಿದೆ ಎನ್ನಲಾಗಿದೆ. ಕಳೆದ 8 ವರ್ಷಗಳಿಂದ ಬೆಳಗಾವಿಯಲ್ಲಿ ಕಂಪನಿ ಕಾರ್ಯನಿರ್ವಹಿಸುತ್ತಿದ್ದು, ಅಧಿಕಾರಿಗಳ ದಾಳಿಗೂ ಮುನ್ನ ಮೆಂಟೆನನ್ಸ್ ನೆಪ ಹೇಳಿ ಸರ್ವರ್ ಡೌನ್ ಮಾಡಿರುವ ಬಗ್ಗೆ ಆರೋಪ ಕೇಳಿಬಂದಿದೆ. ಉಪ ವಿಭಾಗಾಧಿಕಾರಿ ಶ್ರವಣ ಕುಮಾರ್ ನೇತೃತ್ವದಲ್ಲಿ ದಾಳಿ ವೇಳೆ ನೂರಾರು ಕೋಟಿ ಹಣ ವರ್ಗಾವಣೆ ಆಗಿರುವುದು ಬೆಳಕಿಗೆ ಬಂದಿದ್ದು, ಆನ್ ಲೈನ್ ಮೂಲಕ ಹಣ ವರ್ಗಾವಣೆ ಆಗಿರುವುದು ಪತ್ತೆಯಾಗಿದೆ. ಒಂದು ಲಕ್ಷಕ್ಕೆ ತಿಂಗಳಿಗೆ 3ಸಾವಿರ ಹಣ ಬಡ್ಡಿ ಕೊಡುವುದಾಗಿ ಆಮಿಷವೊಡ್ಡಿ ಸಾವಿರಾರು ಜನರಿಂದ ಹಣ ಠೇವಣಿ ಇರಿಸಿಕೊಂಡು ವಂಚನೆ ಆರೋಪ ಕೇಳಿಬಂದಿದೆ. ಹೀಗಾಗಿ ದಾಖಲೆ ಸೇರಿದಂತೆ ಹಣದ ಮೂಲದ ಪರಿಶೀಲನೆಗೆ ಅಧಿಕಾರಿಗಳು ಮುಂದಾಗಿದ್ದಾರೆ.

ಇದನ್ನೂ ಓದಿ: ಬೆಳಗಾವಿಯಲ್ಲಿ 4,500 ಕೋಟಿ ರೂ. ವಂಚನೆ ಪ್ರಕರಣ, ಹೂಡಿಕೆಗಿಂತ ಹೆಚ್ಚಿನ ಲಾಭ ಪಡೆದವರಿಗೂ ಶುರುವಾಯ್ತು ನಡುಕ

ಈ ಹಿಂದೆ ಸದ್ದು ಮಾಡಿದ್ದ ಶಿವಂ ಅಸೋಸಿಯೇಟ್ಸ್ ಪ್ರಕರಣ

ಶಿವಂ ಅಸೋಸಿಯೇಟ್ಸ್ ಸಂಸ್ಥೆಯ ಮಾಲೀಕ ಶಿವಾನಂದ ನೀಲಣ್ಣವರ್​​ ಎಂಬಾತ ಯಾವುದೇ ನಿಯಮಗಳನ್ನು ಪಾಲಿಸದೆ, ಸಾರ್ವಜನಿಕರಿಗೆ ಹೆಚ್ಚಿನ ಬಡ್ಡಿಯ ಆಮಿಷವೊಡ್ಡಿ ಬರೋಬ್ಬರಿ 40 ರಿಂದ 45 ಸಾವಿರ ಜನರಿಂದ ಅಂದಾಜು 4,500 ಕೋಟಿ ರೂ ಹೂಡಿಕೆ ಮಾಡಿಸಿಕೊಂಡಿರುವುದು ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿತ್ತು. ಸದ್ಯ ಶಿವಾನಂದ ನೀಲಣ್ಣವರ್​​ ಮನೆ ಸೇರಿದಂತೆ ಕಚೇರಿ ಕೂಡ ಸೀಜ್​ ಮಾಡಲಾಗಿದ್ದು, ಆ ಸಂಬಂಧ ವಿಚಾರಣೆ ಮುಂದುವರಿದೆ. ಈ ನಡುವೆಯೇ ಈಗ ಮತ್ತೊಂದು ಅಂತಹುದ್ದೇ ಪ್ರಕರಣ ವರದಿಯಾಗಿರೋದು ಪೊಲೀಸರಿಗೂ ತಲೆನೋವಾಗಿ ಮಾರ್ಪಟ್ಟಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಸಹದೇವ್​ ಮಾನೆ
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More
‘ಪ್ರೇಮದ ಊರಲಿ’ ನಟಿಯರಿಗೆ ಕನ್ನಡದ ಬಗ್ಗೆ ಸಂಕಲ್ಪ ಮಾಡಿಸಿದ ರಂಗಾಯಣ ರಘು
‘ಪ್ರೇಮದ ಊರಲಿ’ ನಟಿಯರಿಗೆ ಕನ್ನಡದ ಬಗ್ಗೆ ಸಂಕಲ್ಪ ಮಾಡಿಸಿದ ರಂಗಾಯಣ ರಘು
ಕೊನೆಗೂ ತಾಲೂಕು, ಜಿಲ್ಲಾ ಪಂಚಾಯ್ತಿ ಚುನಾವಣೆಗೆ ಮುಹೂರ್ತ ಫಿಕ್ಸ್
ಕೊನೆಗೂ ತಾಲೂಕು, ಜಿಲ್ಲಾ ಪಂಚಾಯ್ತಿ ಚುನಾವಣೆಗೆ ಮುಹೂರ್ತ ಫಿಕ್ಸ್
ಜಿಬಿಎ ವ್ಯಾಪ್ತಿಯಲ್ಲಿ ಐದು ನಗರ ಪೊಲೀಸ್ ಕಮಿಷನರೇಟ್‌ಗಳಿಗೆ ಸಂಪುಟ ಅನುಮೋದನೆ
ಜಿಬಿಎ ವ್ಯಾಪ್ತಿಯಲ್ಲಿ ಐದು ನಗರ ಪೊಲೀಸ್ ಕಮಿಷನರೇಟ್‌ಗಳಿಗೆ ಸಂಪುಟ ಅನುಮೋದನೆ
ದಸರಾ, ದೀಪಾವಳಿ ಹೊತ್ತಲ್ಲೇ ಬೆಲೆ ಏರಿಕೆ ಶಾಕ್: ಹಾಲಿನ ದರ 8 ರೂ. ಹೆಚ್ಚಳ
ದಸರಾ, ದೀಪಾವಳಿ ಹೊತ್ತಲ್ಲೇ ಬೆಲೆ ಏರಿಕೆ ಶಾಕ್: ಹಾಲಿನ ದರ 8 ರೂ. ಹೆಚ್ಚಳ
ಕೆಪಿಎಸ್​ಸಿ ಅಕ್ರಮ: ಮಾಜಿ ಅಧ್ಯಕ್ಷ ಶಿವಶಂಕರಪ್ಪ,ಸದಸ್ಯೆ ಗೀತಾ ಇಡಿ ವಶಕ್ಕೆ
ಕೆಪಿಎಸ್​ಸಿ ಅಕ್ರಮ: ಮಾಜಿ ಅಧ್ಯಕ್ಷ ಶಿವಶಂಕರಪ್ಪ,ಸದಸ್ಯೆ ಗೀತಾ ಇಡಿ ವಶಕ್ಕೆ
ಬಿಗ್​​ಬಾಸ್ ಕನ್ನಡ: ‘ಅಯ್ಯೋ ಉರಿ’ ಕಣ್ಣೀರು ಹಾಕಿದ ಕಿರಣ್ ಶಾಸ್ತ್ರಿ
ಬಿಗ್​​ಬಾಸ್ ಕನ್ನಡ: ‘ಅಯ್ಯೋ ಉರಿ’ ಕಣ್ಣೀರು ಹಾಕಿದ ಕಿರಣ್ ಶಾಸ್ತ್ರಿ
ನಮ್ಮ್ ಸಿಎಂ ಫೋನ್‌ಗೆ ಸಿಗಲ್ಲ ಎಂದ ಲಕ್ಷ್ಮಿ ಹೆಬ್ಬಾಳ್ಕರ್
ನಮ್ಮ್ ಸಿಎಂ ಫೋನ್‌ಗೆ ಸಿಗಲ್ಲ ಎಂದ ಲಕ್ಷ್ಮಿ ಹೆಬ್ಬಾಳ್ಕರ್
ದಾವಣಗೆರೆ: ಭತ್ತದ ವ್ಯಾಪಾರಿಯಿಂದ 4 ಕೋಟಿ ವಂಚನೆ ಆರೋಪ
ದಾವಣಗೆರೆ: ಭತ್ತದ ವ್ಯಾಪಾರಿಯಿಂದ 4 ಕೋಟಿ ವಂಚನೆ ಆರೋಪ
ಪ್ರತಿಭಟನೆ ವೇಳೆ ಬ್ಯಾರಿಕೇಡ್ ಹತ್ತಿ ಧ್ವಜ ಬೀಸಿದ ರಾಹುಲ್ ಗಾಂಧಿ!
ಪ್ರತಿಭಟನೆ ವೇಳೆ ಬ್ಯಾರಿಕೇಡ್ ಹತ್ತಿ ಧ್ವಜ ಬೀಸಿದ ರಾಹುಲ್ ಗಾಂಧಿ!
ಕೈದಿ ಬಿಡುಗಡೆಗೆ ಪತ್ನಿ ಮೇಲೆ ಆಸೆ: ಅಪರಾಧಿ ಪತ್ನಿಗೆ ಡಿಐಜಿ ವಿಡಿಯೋ ಕಾಲ್!
ಕೈದಿ ಬಿಡುಗಡೆಗೆ ಪತ್ನಿ ಮೇಲೆ ಆಸೆ: ಅಪರಾಧಿ ಪತ್ನಿಗೆ ಡಿಐಜಿ ವಿಡಿಯೋ ಕಾಲ್!