Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ನಗರದಲ್ಲಿ ನಿಷೇಧಾಜ್ಞೆ ಜಾರಿ; ನಿನ್ನೆಯ ಬಳಿಕ ಅಹಿತಕರ ಘಟನೆ ನಡೆದಿಲ್ಲ ಎಂದ ಆರಗ ಜ್ಞಾನೇಂದ್ರ

Belagavi News: ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಸಂಪರ್ಕದಲ್ಲಿದ್ದೇನೆ. ಬೆಳಗಾವಿಯಲ್ಲಿ ಶಾಂತಿ ಕಾಪಾಡುವ ದೃಷ್ಟಿಯಿಂದ ಕ್ರಮ ತೆಗೆದುಕೊಳ್ಳುತ್ತೇವೆ. ಪೊಲೀಸ್ ಇಲಾಖೆ ಬಹಳ ದಿಟ್ಟ ನಿಲುವು ತೆಗೆದುಕೊಂಡಿದೆ ಎಂದು ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಬೆಳಗಾವಿ ನಗರದಲ್ಲಿ ನಿಷೇಧಾಜ್ಞೆ ಜಾರಿ; ನಿನ್ನೆಯ ಬಳಿಕ ಅಹಿತಕರ ಘಟನೆ ನಡೆದಿಲ್ಲ ಎಂದ ಆರಗ ಜ್ಞಾನೇಂದ್ರ
ಆರಗ ಜ್ಞಾನೇಂದ್ರ (ಸಂಗ್ರಹ ಚಿತ್ರ)
Follow us
TV9 Web
| Updated By: ganapathi bhat

Updated on: Dec 19, 2021 | 4:43 PM

ಶಿವಮೊಗ್ಗ: ಬೆಳಗಾವಿಯಲ್ಲಿ ಎಂಇಎಸ್‌ ಪುಂಡರಿಂದ ಅಟ್ಟಹಾಸ ಘಟನೆಯ ಬಳಿಕ ನಿನ್ನೆಯಿಂದ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ. ನಿನ್ನೆಯಿಂದ ಯಾವುದೇ ಹೊಸ ಪ್ರಕರಣ ದಾಖಲು ಆಗಿಲ್ಲ. ಕನ್ನಡಿಗರು, ಮರಾಠಿಗರು ಸೌಹಾರ್ದತೆಯಿಂದ ಬಾಳುತ್ತಿದ್ದಾರೆ. ಇದನ್ನು ಸಹಿಸದೆ ಕೆಲವರಿಂದ ಗಲಭೆ ಹಬ್ಬಿಸುವ ಕೆಲಸ ನಡೆಯುತ್ತಿದೆ. ಶಾಂತಿ ಕದಡುವವರ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದೇವೆ. ಎಲ್ಲರನ್ನೂ ಬಂಧಿಸಿ ಕಾನೂನಿನಡಿ ಶಿಕ್ಷೆ ನೀಡಲಾಗುವುದು ಎಂದು ಶಿವಮೊಗ್ಗದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದಾರೆ.

ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಶಿವಾಜಿ ರಾಷ್ಟ್ರೀಯ ವ್ಯಕ್ತಿಗಳು. ಯಾವುದೇ ಜಾತಿಗೆ ಮತ್ತು ಭಾಷೆಗೆ ಸಂಬಂಧಪಟ್ಟವರಲ್ಲ. ಇವರ ವ್ಯಕ್ತಿತ್ವವನ್ನು ಎಲ್ಲಾ ಭಾಷಿಕರು ಗೌರವಿಸುತ್ತಾರೆ. ಇಂತಹವರ ಹೆಸರಿನಲ್ಲಿ ಏನೋ ಏನೋ ಮಾಡುತ್ತಿದ್ದಾರೆ. ಪ್ರತಿಮೆಗಳನ್ನು ಧ್ವಂಸಗೊಳಿಸುತ್ತಿದ್ದಾರೆ, ಇದನ್ನು ಸಹಿಸಲ್ಲ. ಯಾವುದೇ ಕಾರಣಕ್ಕೂ ಸರ್ಕಾರ, ಇಲಾಖೆ ಸಹಿಸುವುದಿಲ್ಲ. ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಸಂಪರ್ಕದಲ್ಲಿದ್ದೇನೆ. ಬೆಳಗಾವಿಯಲ್ಲಿ ಶಾಂತಿ ಕಾಪಾಡುವ ದೃಷ್ಟಿಯಿಂದ ಕ್ರಮ ತೆಗೆದುಕೊಳ್ಳುತ್ತೇವೆ. ಪೊಲೀಸ್ ಇಲಾಖೆ ಬಹಳ ದಿಟ್ಟ ನಿಲುವು ತೆಗೆದುಕೊಂಡಿದೆ ಎಂದು ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಬೆಳಗಾವಿ: ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಬೆಳಗಾವಿ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸ್ ಕಮಿಷನರ್​ ಆದೇಶ ಹೊರಡಿಸಿದ್ದಾರೆ. ಬೆಳಗಾವಿ ಪೊಲೀಸ್ ಆಯುಕ್ತ ಕೆ.ತ್ಯಾಗರಾಜನ್​ರಿಂದ ಆದೇಶ ನೀಡಲಾಗಿದೆ. ಕನ್ನಡ ಪರ ಹೋರಾಟಗಾರರಿಗೆ ಬೆಳಗಾವಿ ಪೊಲೀಸರ ನಿರ್ಧಾರದಿಂದ ಸಮಸ್ಯೆ ಆಗಿದೆ. ಕರವೇ ಸೇರಿದಂತೆ ವಿವಿಧ ಸಂಘಟನೆಗಳ ನಾಯಕರು ಬೆಳಗಾವಿ ಕಡೆಗೆ ಬರುತ್ತಿದ್ದಾರೆ. ರಾಜ್ಯದ ಮೂಲೆ ಮೂಲೆಯಿಂದ ಆಗಮಿಸ್ತಿರುವ ಹೋರಾಟಗಾರರು ಬೆಳಗಾವಿಗೆ ಆಗಮಿಸಿ ಸುವರ್ಣಸೌಧ ಮುತ್ತಿಗೆ ಹಾಕಲು ನಿರ್ಧರಿಸಿದ್ದರು. ಪುಂಡಾಟ ಮೆರೆದ ಎಂಇಎಸ್​ ಪುಂಡರ ವಿರುದ್ಧ ಕ್ರಮಕ್ಕೆ ಒತ್ತಾಯ ಮಾಡಿದ್ದರು. ಎಂಇಎಸ್​ ನಿಷೇಧಕ್ಕೆ ಒತ್ತಾಯಿಸಿ ಮುತ್ತಿಗೆ ಹಾಕಲು ನಿರ್ಧರಿಸಿದ್ದರು. ಆದರೆ, ಕನ್ನಡಪರ ಹೋರಾಟಕ್ಕೆ ಹಾಗೂ ಪರಿಸ್ಥಿತಿ ತಿಳಿಗೊಳುವ ಕಾರಣದಿಂದ ಪೊಲೀಸರು ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಸೋಮವಾರ ಬೆಳಗ್ಗೆ 6ರಿಂದ ಬೆಳಗಾವಿ ನಗರದಲ್ಲಿ ನಿಷೇಧಾಜ್ಞೆ ಜಾರಿ ಆಗಲಿದೆ.

ಎಂಇಎಸ್ ಪುಂಡರ ಅಟ್ಟಹಾಸ ಖಂಡಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ಬೆಳಗಾವಿಯಲ್ಲಿ ಎಂಇಎಸ್‌ ಪುಂಡರಿಂದ ಅಟ್ಟಹಾಸ ಹಿನ್ನೆಲೆ ಹಲವು ಕನ್ನಡಪರ ಸಂಘಟನೆಗಳಿಂದ ಬೆಳಗಾವಿ ಚಲೋ ನಡೆಯುತ್ತಿದೆ. ನೆಲಮಂಗಲ ಟೋಲ್ ತಲುಪಿದ ಹೋರಾಟಗಾರರು ಪ್ರತಿಭಟನೆ ಮುಂದುವರಿಸಿದ್ದಾರೆ. ಕರವೇ ಮುಖಂಡ ಪ್ರವೀಣ್ ಶೆಟ್ಟಿ ನೇತೃತ್ವದಲ್ಲಿ ಹೋರಾಟ ನಡೆಯುತ್ತಿದೆ. ಇತ್ತ ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆ ಖಂಡಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದಲ್ಲಿ ಕುರುಬ ಸಂಘದ ವತಿಯಿಂದ ರಾಲಿ ನಡೆಯುತ್ತಿದೆ. ಕನಕಗುರುಪೀಠದ ಶಾಖಾ ಮಠದ ಸಿದ್ದರಾಮನಂದಶ್ರೀ ಭಾಗಿ ಆಗಿದ್ದಾರೆ. ಕನಕಭವನದಿಂದ ತಾಲೂಕು ಕಚೇರಿವರೆಗೂ ಬೃಹತ್ ರಾಲಿ ನಡೆಸಿದ್ದಾರೆ. ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸರ್ಕಾರಕ್ಕೆ ಒತ್ತಾಯ ಮಾಡಲಾಗಿದೆ.

ಹೆಚ್​ಡಿ ರೇವಣ್ಣ, ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ಕನ್ನಡಿಗರಿಗೆ ಏನೇ ಆದರೂ ಎಲ್ಲರೂ ಒಗ್ಗೂಡಿ ಹೋರಾಡಬೇಕು. ರಾಜ್ಯದ ಹಿತಕ್ಕೆ ಧಕ್ಕೆ ಆದಾಗ ಎಲ್ಲಾ ಪಕ್ಷಗಳು ಒಂದಾಗಬೇಕು. ಬೇರೆ ರಾಜ್ಯಗಳಲ್ಲಿರುವ ಕನ್ನಡಿಗರಿಗೆ ಕೇಂದ್ರ ರಕ್ಷಣೆ ಕೊಡಬೇಕು ಎಂದು ಹಾಸನದಲ್ಲಿ ಮಾಜಿ ಸಚಿವ ಹೆಚ್​.ಡಿ.ರೇವಣ್ಣ ಹೇಳಿಕೆ ನೀಡಿದ್ದಾರೆ. ಬೆಳಗಾವಿಯಲ್ಲಿ ಎಂಇಎಸ್​ ಪುಂಡರ ಅಟ್ಟಹಾಸ ಪ್ರಕರಣಕ್ಕೆ ಸಂಬಂಧಿಸಿ ಸತೀಶ್​ ಜಾರಕಿಹೊಳಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಬೆಂಗಳೂರಲ್ಲಿ ಶಿವಾಜಿ ಮೂರ್ತಿಗೆ ಮಸಿ ಬಳಿಯಲಾಗಿದೆ. ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಭಗ್ನ ಆಗಿದೆ. ಇಂತಹ ಘಟನೆಗಳು ಆಗಬಾರದು. ಘಟನೆಗಳನ್ನು ನಾನು ಖಂಡಿಸುತ್ತೇನೆ. ಘಟನೆಯಲ್ಲಿ ಭಾಗಿ ಆಗಿದ್ದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಯಾರೋ ಎಲ್ಲೋ ಕುಳಿತು ಇಂತಹ ಕೆಲಸವನ್ನ ಮಾಡ್ತಾರೆ ಎಂದು ಆರೋಪಿಗಳನ್ನು ಬಂಧಿಸುವಂತೆ ಶಾಸಕ ಸತೀಶ್​ ಜಾರಕಿಹೊಳಿ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಬೆಳಗಾವಿ ವಿವಾದ: ಉದ್ಧವ್ ಠಾಕ್ರೆ ಹೇಳಿಕೆಗೆ ಎಚ್​ಡಿಕೆ ಖಂಡನೆ, ಎಂಇಎಸ್ ನಿಷೇಧವಿಲ್ಲ ಎಂದ ಸೋಮಣ್ಣ

ಇದನ್ನೂ ಓದಿ: ‘ಸಿನಿಮಾ ನಟರು ಟ್ವೀಟ್​ ಮಾಡಿದ್ರೆ ಸಾಲದು’; ಬೆಳಗಾವಿ ಹೋರಾಟದ ಬಗ್ಗೆ ಇಂದ್ರಜಿತ್​ ಲಂಕೇಶ್​ ಹೇಳಿಕೆ

Daily Devotional: ಪೂಜೆ ಸಮಯದಲ್ಲಿ ಅಗರಬತ್ತಿ ಬಳಕೆಯ ಮಹತ್ವ ತಿಳಿಯಿರಿ
Daily Devotional: ಪೂಜೆ ಸಮಯದಲ್ಲಿ ಅಗರಬತ್ತಿ ಬಳಕೆಯ ಮಹತ್ವ ತಿಳಿಯಿರಿ
ಸುನಿತಾ ವಿಲಿಯಮ್ಸ್, ವಿಲ್ಮೋರ್ ಲ್ಯಾಂಡಿಂಗ್: ಅದ್ಭುತ ವಿಡಿಯೋ ಇಲ್ಲಿದೆ ನೋಡಿ
ಸುನಿತಾ ವಿಲಿಯಮ್ಸ್, ವಿಲ್ಮೋರ್ ಲ್ಯಾಂಡಿಂಗ್: ಅದ್ಭುತ ವಿಡಿಯೋ ಇಲ್ಲಿದೆ ನೋಡಿ
Daily Horoscope: ಮಿಥುನ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದೆ
Daily Horoscope: ಮಿಥುನ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದೆ
ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ