AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ನಿರ್ವಾಹಕನ ಮೇಲೆ ಹಲ್ಲೆ ಕೇಸ್​, ನಾಲಿಗೆ ಹರಿಬಿಟ್ಟ ಎಂ​ಇಎಸ್​ ಮುಖಂಡನ ವಿರುದ್ಧ ಎಫ್​ಐಆರ್​

ಬೆಳಗಾವಿಯಲ್ಲಿ ಕೆಎಸ್​ಆರ್​ಟಿಸಿ ನಿರ್ವಾಹಕನ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕನ್ನಡಿಗರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಎಂಇಎಸ್ ಮುಖಂಡ ಶುಭಂ ಶಳಕೆ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ಘಟನೆಯಿಂದಾಗಿ ಕರ್ನಾಟಕ-ಮಹಾರಾಷ್ಟ್ರ ಗಡಿ ಬಸ್ ಸಂಚಾರ ಸ್ಥಗಿತಗೊಂಡಿದ್ದು, ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದಾರೆ.

ಬೆಳಗಾವಿ: ನಿರ್ವಾಹಕನ ಮೇಲೆ ಹಲ್ಲೆ ಕೇಸ್​, ನಾಲಿಗೆ ಹರಿಬಿಟ್ಟ ಎಂ​ಇಎಸ್​ ಮುಖಂಡನ ವಿರುದ್ಧ ಎಫ್​ಐಆರ್​
ಎಂಇಎಸ್​ ಮುಖಂಡ ಶುಭಂ
Sahadev Mane
| Edited By: |

Updated on:Feb 24, 2025 | 8:50 AM

Share

ಬೆಳಗಾವಿ, ಫೆಬ್ರವರಿ 24: ಕೆಎಸ್​ಆರ್​ಟಿಸಿ ಬಸ್ ನಿರ್ವಾಹಕನ (KSRTC Bus Conductor) ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕನ್ನಡಿಗರ ವಿರುದ್ಧ ನಾಲಿಗೆ ಹರಿಬಿಟ್ಟದ್ದ ಎಂ​ಇಎಸ್​ ಮುಖಂಡನ ಶುಭಂ‌ ಶಳಕೆ ವಿರುದ್ಧ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಎನ್​ಎಸ್​ ಕಾಯ್ದೆ 192, 352, 353 ಸೆಕ್ಷನ್ ಅಡಿ ಎಫ್​ಐಆರ್​ ದಾಖಲಾಗಿದೆ.

ಎಂಇಎಸ್ ಮುಖಂಡ ವಿಡಿಯೋದಲ್ಲಿ ನೀಡಿದ್ದ ಹೇಳಿಕೆ

ಎಂಇಎಸ್ ಮುಖಂಡ ಶುಭಂ ಶಳಕೆ, “ಕನ್ನಡ ಪರ ಹೋರಾಟಗಾರರು ನಾಲಾಯಕರು. ನಿರ್ವಾಹಕ ಬಾಲಕಿ ಜೊತೆಗೆ ಅಸಭ್ಯವಾಗಿ ವರ್ತಿಸಿದ್ದಾನೆ. ಅದಕ್ಕೆ ಪೊಲೀಸರು ಪೋಕ್ಸೋ ಕೇಸ್ ಹಾಕಿದ್ದಾರೆ. ಇಂತಹ ನೀಚ, ನಾಲಾಯಕ ನಿರ್ವಾಹಕ ಪರ ನಿಂತು ಕನ್ನಡ ಪರ ಸಂಘಟನೆಗಳು ಸಹ ನಾಲಾಯಕರು” ಅಂತ ಎಂದು ಬೆಳಗಾವಿ ನೆಲದಲ್ಲೇ ನಿಂತುಕೊಂಡೇ ನಾಲಿಗೆ ಹರಿ ಬಿಟ್ಟಿದ್ದನು.

ಮತ್ತೋರ್ವ ಆರೋಪಿಯ ಬಂಧನ

ನಿರ್ವಾಹಕನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿ ಮೋಹನ್ ಹಂಚಿನಮನಿ ಎಂಬಾತನನ್ನು ಮಾರಿಹಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರ ಸಂಖ್ಯೆ ಐದಕ್ಕೇರಿದ್ದು ನಾಪತ್ತೆಯಾದ ಇನ್ನೂ ಕೆಲವು ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ಕಾರ್ಯ ಮುಂದುವರೆದಿದೆ.

ಬಸ್​ ಸಂಚಾರ ಸ್ಥಗಿತ

ಶಿವಸೇನೆ ಕಾರ್ಯಕರ್ತರ ಪುಂಡಾಟಿಕೆಯಿಂದ ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಬಿಗುವಿಣ ವಾತಾವರಣ ನಿರ್ಮಾಣವಾಗಿದೆ. ಹೀಗಾಗಿ, ಬಸ್ ಸಂಚಾರಕ್ಕೆ ತೊಂದರೆಯಾಗಿದೆ. ಮಹಾರಾಷ್ಟ್ರ-ಕರ್ನಾಟಕ ಬಸ್ ಸಂಚಾರ ಸ್ಥಗಿತಗೊಂಡಿದೆ. ಬೆಳಗಾವಿಯಿಂದ ಮಹರಾಷ್ಟ್ರಕ್ಕೆ ಸಂಪರ್ಕ ಕಲ್ಪಿಸುತ್ತಿದ್ದ ವಾಯುವ್ಯ ಸಾರಿಗೆಯ ಸುಮಾರು 150ಕ್ಕೂ ಅಧಿಕ ಬಸ್​ಗಳು ಗಡಿವರೆಗೂ ಮಾತ್ರ ಸಂಚರಿಸುತ್ತಿವೆ. ಬಸ್​ಗಳು ಇಲ್ಲದ ಕಾರಣ ಬೆಳಗಾವಿ, ಕೊಲ್ಲಾಪುರ, ಪುಣೆಯಲ್ಲಿ ಕರ್ನಾಟಕದ ಪ್ರಯಾಣಿಕರು ಪರದಾಡುವಂತಾಗಿದೆ. ಬಸ್ ಇಲ್ಲದೇ ಪ್ರಯಾಣಿಕರು ಪರದಾಡುತ್ತಿರುವ ಹಿನ್ನೆಲೆಯಲ್ಲಿ ಸಂಸದ ಗೋವಿಂದ್ ಕಾರಜೋಳ ಕೂಡ ಸರ್ಕಾರ ಇದನ್ನು ಬಗೆ ಹರಿಸಿ, ಬಸ್ ಸಂಚಾರ ಆರಂಭಿಸಿ ಒತ್ತಾಯಿಸಿದ್ದರು.

ಇದನ್ನೂ ಓದಿ: ಕನ್ನಡಿಗ ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣ: ಬೆಳಗಾವಿ ಗಡಿಯಲ್ಲಿ ನಿಜಕ್ಕೂ ನಡೆದಿದ್ದೇನು? ಇಲ್ಲಿದೆ ಸಂಪೂರ್ಣ ವಿವರ

ಬೆಳಗಾವಿಗೆ ಸಚಿವ ರಾಮಲಿಂಗ ರೆಡ್ಡಿ ಭೇಟಿ

ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಸೋಮಾವಾರ (ಫೆ.24) ಬೆಳಗಾವಿ ಭೇಟಿ ನೀಡಲಿದ್ದಾರೆ. ಬೆಳಗಾವಿ ಘಟಕ್ಕಕ್ಕೆ ಭೇಟಿ ನೀಡಿ ಘಟನೆ ಕುರಿತು ಮಾಹಿತಿ ಪಡೆದು ಬಸ್ ಆರಂಭದ ಕುರಿತು ಕೂಡ ಅಧಿಕಾರಿಗಳ ಜೊತೆಗೆ ಸಭೆ ನಡೆಸಲಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:48 am, Mon, 24 February 25

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ