ಬೇರೆ ತಾಲೂಕಿನಿಂದ ಬಂದು ನಟಿಸುತ್ತಿದ್ದಾರೆ: ರಮೇಶ್ ಜಾರಕಿಹೊಳಿ ವಿರುದ್ಧ ಲಕ್ಷ್ಮಣ್ ಸವದಿ ಪರೋಕ್ಷ ವಾಗ್ದಾಳಿ

ಇತ್ತೀಚೆಗೆ ಅಥಣಿಗೆ ಆಗಮಿಸಿದ್ದ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರು ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದರು. ಸರ್ಕಾರಿ ಅಧಿಕಾರಿಗಳ ವಿರುದ್ಧವೂ ಅಸಮಾಧಾನ ಹೊರಹಾಕಿದ್ದರು. ಇದನ್ನೇ ಮುಂದಿಟ್ಟುಕೊಂಡು ಜಾರಕಿಹೊಳಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ ಸವದಿ, ಬೇರೆ ತಾಲೂಕಿನಿಂದ ಬಂದು ನಟಿಸುತ್ತಿರುವುದನ್ನು ಕಂಡಿದ್ದೇನೆ ಎಂದಿದ್ದಾರೆ.

ಬೇರೆ ತಾಲೂಕಿನಿಂದ ಬಂದು ನಟಿಸುತ್ತಿದ್ದಾರೆ: ರಮೇಶ್ ಜಾರಕಿಹೊಳಿ ವಿರುದ್ಧ ಲಕ್ಷ್ಮಣ್ ಸವದಿ ಪರೋಕ್ಷ ವಾಗ್ದಾಳಿ
ಲಕ್ಷ್ಮಣ ಸವದಿ ಮತ್ತು ರಮೇಶ್ ಜಾರಕಿಹೊಳಿ
Follow us
ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ
| Updated By: Rakesh Nayak Manchi

Updated on: Sep 17, 2023 | 8:40 AM

ಚಿಕ್ಕೋಡಿ, ಸೆ.17: ಅಥಣಿಗೆ ಆಗಮಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಶಪಥ ಮಾಡಿದ್ದ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ (Ramesh Jarkiholi) ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ ಶಾಸಕ ಲಕ್ಷ್ಮಣ್ ಸವದಿ (Laxman Savadi), ಬೇರೆ ತಾಲೂಕಿನಿಂದ ಇಲ್ಲಿಗೆ ಬಂದು ನಟನೆ‌ ಮಾಡುವುದು ಕಂಡಿದ್ದೇನೆ. ಯಾವುದೇ ಚಿಲ್ಲರೆ ಮಾತುಗಳ ಬಗ್ಗೆ ಬೆಲೆ ಕೊಡಲ್ಲ, ಗಮನನೂ ಹರಿಸಲ್ಲ ಎಂದಿದ್ದಾರೆ.

ಅಥಣಿ ಕ್ಷೇತ್ರಕ್ಕೆ ಬಂದು ಅಥಣಿಯಿಂದಲೇ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಆರಂಭಿಸುತ್ತೇನೆ ಎಂದು ಗುಡುಗಿದ್ದ ಗೋಕಾಕ್ ಸಾಹುಕಾರ್ ವಿರುದ್ಧ ಪರೋಕ್ಷ ಕಿಡಿಕಾರಿದ ಲಕ್ಷ್ಮಣ್ ಸವದಿ, ಇಂತಹ ಪ್ರತಿಭಟನೆಗಳನ್ನು‌ ಬಹಳ ನಾನು ನೋಡಿದ್ದೇನೆ. ಯಾವ ಅಧಿಕಾರಿಯೂ ಯಾರ ಗೊಂಬೆನೂ ಅಲ್ಲ. ಅಂಬೇಡ್ಕರ್‌ ಅವರು ಕೊಟ್ಟ ಸಂವಿಧಾನದಡಿ ಕೆಲಸ ಮಾಡಬೇಕಾಗುತ್ತದೆ ಎಂದರು.

ಇದನ್ನೂ ಓದಿ: ರಾಜ್ಯಕ್ಕೆ ಬರ, ಕೆಲವರಿಗೆ ಅದೇ ವರ; ರೈತರ ಆತ್ಮಹತ್ಯೆಗಳ ಬಗ್ಗೆ ಸರ್ಕಾರದ ವಿರುದ್ಧ ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ

ಇತ್ತೀಚೆಗೆ ಅಥಣಿಗೆ ಆಗಮಿಸಿ ಲಕ್ಷ್ಮಣ್ ಸವದಿ ವಿರುದ್ಧ ರಮೇಶ್ ಜಾರಕಿಹೊಳಿ‌ ಪರೋಕ್ಷ ವಾಗ್ದಾಳಿ ನಡೆಸಿದ್ದರು. ಸರ್ಕಾರಿ ಅಧಿಕಾರಿಗಳ ವಿರುದ್ಧವೂ ಅಸಮಾಧಾನ ಹೊರಹಾಕಿದ್ದರು. ಅಥಣಿಯಿಂದಲೇ ರಾಜ್ಯ ಸರ್ಕಾರ ವಿರುದ್ಧ ಹೋರಾಟ ಶುರು ಮಾಡುವುದಾಗಿಯೂ ಶಪಥ ಮಾಡಿದ್ದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ