ಕೇರಳದ ನಾಸ್ತಿಕ ಸರ್ಕಾರಕ್ಕೆ ಶಬರಿಮಲೆ ದುಡ್ಡು ಬೇಕು, ಭಕ್ತರಿಗೆ ವ್ಯವಸ್ಥೆ ಮಾಡುತ್ತಿಲ್ಲ: ಚಿಕ್ಕೋಡಿಯಲ್ಲಿ ಪ್ರಮೋದ್ ಮುತಾಲಿಕ್ ಆಕ್ರೋಶ

ತೊಂದರೆ ಅನುಭವಿಸುತ್ತಿರುವ ಅಯ್ಯಪ್ಪ ಮಾಲಾಧಾರಿಗಳಿಗೆ ಕರ್ನಾಟಕ ಸರ್ಕಾರ ನೆರವಿಗೆ ನಿಲ್ಲಬೇಕಾಗಿದೆ. ಕರ್ನಾಟಕ ಸರ್ಕಾರ ಕೇರಳದ ಸರ್ಕಾರದೊಂದಿಗೆ ಮಾತನಾಡಿ ಮೂಲಭೂತ ವ್ಯವಸ್ಥೆ ಒದಗಿಸಿಕೊಡಬೇಕು ಎಂದು ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್ ಆಗ್ರಹಿಸಿದರು.

ಕೇರಳದ ನಾಸ್ತಿಕ ಸರ್ಕಾರಕ್ಕೆ ಶಬರಿಮಲೆ ದುಡ್ಡು ಬೇಕು, ಭಕ್ತರಿಗೆ ವ್ಯವಸ್ಥೆ ಮಾಡುತ್ತಿಲ್ಲ: ಚಿಕ್ಕೋಡಿಯಲ್ಲಿ ಪ್ರಮೋದ್ ಮುತಾಲಿಕ್ ಆಕ್ರೋಶ
ಪ್ರಮೋದ್ ಮುತಾಲಿಕ್
Follow us
| Updated By: ಗಣಪತಿ ಶರ್ಮ

Updated on: Dec 30, 2023 | 1:52 PM

ಚಿಕ್ಕೋಡಿ, ಡಿಸೆಂಬರ್ 30: ಮುಸ್ಲಿಂ, ಕ್ರೈಸ್ತ ಸಮುದಾಯಗಳಿಂದ ಕೇರಳದ ಶಬರಿಲೆ ಅಯ್ಯಪ್ಪಸ್ವಾಮಿ (Sabarimala Ayyappa Temple) ಮಾಲಾಧಾರಿಗಳ ಮೇಲೆ ಶೋಷಣೆಯಾಗ್ತಿದೆ ಎಂದು ಚಿಕ್ಕೋಡಿಯಲ್ಲಿ (Chikkodi) ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್ (Pramod Mutalik) ಶನಿವಾರ ಆರೋಪಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ದೇಶ ಆದ್ಮಾತಿಕ ದೇಶ. ಇಡೀ ದೇಶದಲ್ಲಿ ದೇವಸ್ಥಾನಗಳು, ದೇವರ ಕ್ಷೇತ್ರಗಳು ಬಹಳಷ್ಟಿವೆ. ವಿಷೇಶವಾಗಿ ದಕ್ಷಿಣ ಭಾರತದಲ್ಲಿ ತಿರುಪತಿ ತಿಮ್ಮಪ್ಪನಷ್ಟೇ ಪ್ರಖ್ಯಾತಿ ಪಡೆದಿರೋ ಅಯ್ಯಪ್ಪ ದೇವಸ್ಥಾನ ಇದೆ. ಆರು ರಾಜ್ಯಗಳಿಂದ ಐದು ಕೋಟಿ‌ ಜನರು ಅಲ್ಲಿ ಭೇಟಿ ನೀಡ್ತಾರೆ ಎಂದರು.

ಭಕ್ತರಿಗೆ ವ್ಯವಸ್ಥೆ ಮಾಡದ ಕೇರಳ ಸರ್ಕಾರ: ಮುತಾಲಿಕ್ ಕಿಡಿ

ಅಯ್ಯಪ್ಪ ದೇವಸ್ಥಾನದಲ್ಲಿ ಮೂರು ಸಾವಿರ ಕೋಟಿ ರೂಗಿಂತಲೂ ಆದಾಯ ಜಾಸ್ತಿ ಇದೆ. ಪಾರ್ಕಿಂಗ್ ಒಂದು ಕೋಟಿ ವಾಹನಗಳಾಗುತ್ತವೆ. ಒಂದು ವಾಹನಕ್ಕೆ ನಲವತ್ತು ರೂಪಾಯಿ ತೆಗೆದುಕೊಳ್ತಾರೆ. ಎಲ್ಲ ಮೂಲಗಳಿಂದ ಮೂರು ಸಾವಿರ ಕೋಟಿಗಿಂತಲೂ ಅಧಿಕವಾಗುತ್ತದೆ. ಕೇರಳದಲ್ಲಿರುವ ಸರ್ಕಾರ ನಾಸ್ತಿಕ ಸರ್ಕಾರ. ದೇವರನ್ನು ನಂಬದಂತಹ ಸರ್ಕಾರ. ಐದು ಕೋಟಿ ಭಕ್ತರಿಗೆ ಅನೂಕೂಲವಾಗುವಂತಹ ಸೌಕರ್ಯ ಒದಗಿಸಿ ಕೊಡ್ತಿಲ್ಲ. ಕೇರಳ ಸರ್ಕಾರ ದೇವಸ್ಥಾನದ ಆದಾಯವನ್ನು ತಮ್ಮ ಉಪಯೋಗಕ್ಕೆ ಬಳಸಿಕೊಳ್ಳುತ್ತಿದೆ. ದೇವಸ್ಥಾನ ಮಂಡಳಿಯನ್ನು ಆ ಸರ್ಕಾರ ಹೆದರಿಸುವ ಕೆಲಸ ಮಾಡ್ತಿದೆ ಎಂದು ಮುತಾಲಿಕ್ ಆರೋಪಿಸಿದ್ದಾರೆ.

ಇಷ್ಟೆಲ್ಲಾ ತೊಂದರೆ ಅನುಭವಿಸುತ್ತಿರುವ ಅಯ್ಯಪ್ಪ ಮಾಲಾಧಾರಿಗಳಿಗೆ ಕರ್ನಾಟಕ ಸರ್ಕಾರ ನೆರವಿಗೆ ನಿಲ್ಲಬೇಕಾಗಿದೆ. ಕರ್ನಾಟಕ ಸರ್ಕಾರ ಕೇರಳದ ಸರ್ಕಾರದೊಂದಿಗೆ ಮಾತನಾಡಿ ಮೂಲಭೂತ ವ್ಯವಸ್ಥೆ ಒದಗಿಸಿಕೊಡಬೇಕು ಎಂದು ಅವರು ಆಗ್ರಹಿಸಿದರು.

ಸಾವಿರಾರು ಕೋಟಿ ಆದಾಯದ ಸಂಪೂರ್ಣ ಹಣ ಭಕ್ತರ ಅನುಕೂಲಕ್ಕಾಗಿ ಉಪಯೋಗಿಸಬೇಕು. ಅನ್ನವಿತರಣೆ ಕಾರ್ಯಕ್ರಮ ಈ ಹಿಂದೆ ಇದ್ದಂತೆ ಜರುಗಬೇಕು. ಹಿಂದೂ ಸಂಘಟನೆಗಳು ಅನ್ನದಾನವನ್ನು ಉಚಿತವಾಗಿ ಮಾಡುತ್ತಿದ್ದರು. ಆದ್ರೆ ಕೆರಳ ಸರ್ಕಾರ ಬ್ಯಾನ್ ಮಾಡಿ, ಪೊಲೀಸ್ ವ್ಯವಸ್ಥೆಗೆ ನೀಡಿದೆ. ಇದರಿಂದಾಗಿ ಅನೇಕ ಭಕ್ತಾಧಿಗಳಿಗೆ ಅನ್ನ ಸಿಗ್ತಾ ಇಲ್ಲ. ಅಯ್ಯಪ್ಪ ದೇವಸ್ಥಾನದ ಮಂಡಳಿಗೆ ಎಲ್ಲರಿಗೂ ಅನ್ನದಾನದ ವ್ಯವಸ್ಥೆ ಸರಿಪಡಿಸುವಂತೆ ನಾವು ಮನವಿ ಮಾಡಿಕೊಳ್ಳುವವರಿದ್ದೇವೆ. ಭಕ್ತರಿಗೆ ನೀರಿನ ವ್ಯವಸ್ಥೆ ಹಾಗೂ ಸ್ನಾನ ಮಾಡುವ ವ್ಯವಸ್ಥೆ ಮಾಡಬೇಕಾಗಿದೆ. ಮೊದಲಿದ್ದ ಮಾದರಿಯಲ್ಲಿಯೇ ಪಾರ್ಕಿಂಗ್ ವ್ಯವಸ್ಥೆ ಮಾಡಬೇಕು ಎಂದು ಮುತಾಲಿಕ್ ಒತ್ತಾಯಿಸಿದರು.

ಇದನ್ನೂ ಓದಿ: Revenue for Sabarimala: ಶಬರಿಮಲೆಗೆ 310.40 ಕೋಟಿ ರೂ. ಆದಾಯ

ಕಾಂಗ್ರೆಸ್​​ನದ್ದು ಕನ್ನಡ ವಿರೋಧಿ ಸರ್ಕಾರ: ಮುತಾಲಿಕ್

ಕಾಂಗ್ರೆಸ್ ಸರ್ಕಾರ ಕನ್ನಡಪರ ಸಂಘಟನೆ ಕಾರ್ಯಕರ್ತರನ್ನು ಬಂಧಿಸಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಸರ್ಕಾರ ಕನ್ನಡ ವಿರೋಧಿ ಸರ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕನ್ನಡ ಬೋರ್ಡ್ ಹಾಕಿ ಅಂತ ಕನ್ನಡಿಗರು ಹೋರಾಟ ಮಾಡುವ ಅವಶ್ಯಕತೆ ಇಲ್ಲ. ಸರ್ಕಾರ ಕರ್ನಾಟಕದಲ್ಲಿ ಕನ್ನಡ ಕಡ್ಡಾಯವಾಗುವಂತೆ ನೋಡಿಕೊಳ್ಳಬೇಕು. ಕಾಂಗ್ರೆಸ್ ಸರ್ಕಾರ ಕನ್ನಡಿಗರಿಗೆ ದ್ರೋಹ ಮಾಡಿದೆ. ನಾನು ಕಾಂಗ್ರೆಸ್ ಸರ್ಕಾರವನ್ನು ಖಂಡಿಸುತ್ತೇನೆ. ಕನ್ನಡಪರ ಸಂಘಟನೆ ಕಾರ್ಯಕರ್ತರನ್ನು ಯಾವುದೇ ಷರತ್ತು ಇಲ್ಲದೇ ಬಿಡುಗಡೆ ಮಾಡಬೇಕು ಎಂದು ಮುತಾಲಿಕ್ ಆಗ್ರಹಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ತಾಜಾ ಸುದ್ದಿ
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು