ಗೋವಾದಲ್ಲಿ ಕನ್ನಡಿಗನ ಮೇಲೆ ಹಲ್ಲೆ: ಕರ್ನಾಟಕದವರು, ಕನ್ನಡಿಗರೇ ಮತ್ತೆ ಟಾರ್ಗೆಟ್!

ಗೋವಾದಲ್ಲಿ ಕನ್ನಡಿಗರ ಮೇಲಿನ ದೌರ್ಜನ್ಯ ನಿಲ್ಲುತ್ತಿಲ್ಲ. ಇದೀಗ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ವಿಜಯಪುರ ಮೂಲದ ಲಾರಿ ಚಾಲಕನ ಮೇಲೆ ದುಷ್ಕರ್ಮಿಗಳ ಗ್ಯಾಂಗ್​ನಿಂದ ಹಲ್ಲೆ ಮಾಡಿರುವ ಘಟನೆ ಗೋವಾದ ಪ್ರೆಡ್ನೆ ಬಳಿಯ ರಸ್ತೆಯಲ್ಲಿ ನಡೆದಿದೆ. ದೂರು ನೀಡಿದರೂ ಕ್ರಮಕೈಗೊಂಡಿಲ್ಲವೆಂದು ಚಾಲಕ ಆರೋಪಿಸಿದ್ದಾರೆ.

ಗೋವಾದಲ್ಲಿ ಕನ್ನಡಿಗನ ಮೇಲೆ ಹಲ್ಲೆ: ಕರ್ನಾಟಕದವರು, ಕನ್ನಡಿಗರೇ ಮತ್ತೆ ಟಾರ್ಗೆಟ್!
ಲಾರಿ ಚಾಲಕನ ಮೇಲೆ ಹಲ್ಲೆ
Edited By:

Updated on: Jul 24, 2025 | 8:39 AM

ಬೆಳಗಾವಿ, ಜುಲೈ 24: ಗೋವಾದಲ್ಲಿ (goa) ಕನ್ನಡಿಗರ ಮೇಲೆ ಹಲ್ಲೆ ಪ್ರಕರಣಗಳು ಮುಂದುವರಿದಿದೆ. ಇದೀಗ ಕರ್ನಾಟಕದವರು (Karnataka) ಮತ್ತು ಕನ್ನಡಿಗರನ್ನು ಟಾರ್ಗೆಟ್ ಮಾಡಿ ಹಲ್ಲೆ ಮಾಡಿರುವ ಆರೋಪವೊಂದು ಕೇಳಿಬಂದಿದೆ. ಬದುಕು ಕಟ್ಟಿಕೊಳ್ಳಲು ಗೋವಾಕ್ಕೆ ಬಂದಿದ್ದ ಕನ್ನಡಿಗನ ಮೇಲೆ ದುಷ್ಕರ್ಮಿಗಳ ಗ್ಯಾಂಗ್​ನಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ. ವಿಜಯಪುರ ಜಿಲ್ಲೆಯ ಕಲಕೇರಿ ಗ್ರಾಮದ ನಿವಾಸಿ ಅನಿಲ್ ರಾಠೋಡ್​​ ಹಲ್ಲೆಗೊಳಗಾದ ವ್ಯಕ್ತಿ. ​

ನಡೆದದ್ದೇನು?

ಕನ್ನಡಿಗ ಲಾರಿ ಚಾಲಕ ಅನಿಲ್ ರಾಠೋಡ್​, ಮಹಾರಾಷ್ಟ್ರದಿಂದ ಗೋವಾಕ್ಕೆ ಕಲ್ಲು ಸಾಗಿಸುತ್ತಿದ್ದರು. ಈ ವೇಳೆ ಗೋವಾದ ಪ್ರೆಡ್ನೆ ಬಳಿಯ ರಸ್ತೆಯಲ್ಲಿ ಕಾರು, ಜೀಪ್​ನಲ್ಲಿ ಬಂದ ದುಷ್ಕರ್ಮಿಗಳ ಗ್ಯಾಂಗ್ ಲಾರಿ ಅಡ್ಡಗಟ್ಟಿ ಗೂಂಡಾಗಿರಿ ಮಾಡಿದ್ದಾರೆ. ಅಷ್ಟೇ ಅಲ್ಲದೆ ನಿಂದಿಸಿ ಹಲ್ಲೆ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಕನ್ನಡ ಮತ್ತು ಕರ್ನಾಟಕದ ಬಗ್ಗೆ ನಾಲಿಗೆ ಹರಿಬಿಟ್ಟಿದ್ದ ಹಿಂದಿವಾಲಾ ಅರೆಸ್ಟ್​!

ಇದನ್ನೂ ಓದಿ
ಕನ್ನಡ ಮಾತನಾಡಲ್ಲ ಅಂತ ದರ್ಪ ತೋರಿದ್ದ SBI ಬ್ಯಾಂಕ್​ ಮ್ಯಾನೇಜರ್ ಎತ್ತಂಗಡಿ
ಕನ್ನಡಿಗರಿಗೆ ಅಪಮಾನ ಕೇಸ್​​: ಮ್ಯಾನೇಜರ್ ಬಂಧನ, Gs​ ಸೂಟ್​ ಹೋಟೆಲ್​ ಸೀಜ್
ಡಿಸ್​ಪ್ಲೇ ಬೋರ್ಡಲ್ಲಿ ಕನ್ನಡಿಗರನ್ನು ಅವಹೇಳನ ಮಾಡುವ ಪದ ಬಳಕೆ
ಕನ್ನಡಿಗರಿಗೆ ಅವಮಾನ, ಪ್ರಕರಣ ರದ್ದಿಗೆ ಸೋನು ನಿಗಂ ಮನವಿ

ಹಲ್ಲೆ ಮಾಡುತ್ತಿರುವುದನ್ನು ಲಾರಿ ಚಾಲಕ ಅನಿಲ್ ರಾಠೋಡ್​ ತಮ್ಮ ಮೊಬೈಲ್​ನಲ್ಲಿ ಚಿತ್ರೀಕರಿಸಿದ್ದಾರೆ. ಬಳಿಕ ಪೆಡ್ನೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಯಾವುದೇ ರೀತಿ ಕ್ರಮಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅನಿಲ್ ಮನವಿ

ಗೋವಾದಲ್ಲಿ ಕನ್ನಡಿಗರ ಮೇಲೆ ನಿರಂತರ ಹಲ್ಲೆ, ದೌರ್ಜನ್ಯ ನಡೆಯುತ್ತಿದೆ. ಹೀಗಾಗಿ ಗೋವಾ ಸಿಎಂ ಜೊತೆ ಮಾತಾಡಿ ಕನ್ನಡಿಗರನ್ನು ರಕ್ಷಿಸುವಂತೆ ಸಿಎಂ ಸಿದ್ದರಾಮಯ್ಯ ಅನಿಲ್ ಮನವಿ ಮಾಡಿದ್ದಾರೆ. ಸದ್ಯ ಗೋವಾ ರಾಜ್ಯದ ಮಾಪ್ಸಾ ಟ್ರಕ್ ಮಾಲೀಕರ ಸಂಘದ ಮುಖಂಡರಾದ ಸಮೀರ್ ಶೆಟ್ಟರ್ ಮತ್ತು ಸುರೇಶ್ ಪಟ್ಟಿಗೇರಿ ಘಟನೆಯನ್ನು ಖಂಡಿಸಿದ್ದಾರೆ.

ಇದನ್ನೂ ಓದಿ: ಎಂದಿಗೂ ಕನ್ನಡ ಮಾತನಾಡಲ್ಲ ಅಂತ ದರ್ಪ ತೋರಿದ್ದ SBI ಬ್ಯಾಂಕ್​ ಮ್ಯಾನೇಜರ್​: ಸಿಎಂ ಖಂಡನೆ ಬೆನ್ನಲ್ಲೇ ಎತ್ತಂಗಡಿ

ಇನ್ನು ಇತ್ತೀಚೆಗೆ ಕನ್ನಡ ಮಾತನಾಡಿ ಎಂದಿದ್ದಕ್ಕೆ ಕೆಎಸ್‌ಆರ್‌ಟಿಸಿ ನಿರ್ವಾಹಕನ ಮೇಲೆ ಮರಾಠಿಗರಿಂದ ಹಲ್ಲೆ ಮಾಡಲಾಗಿತ್ತು. ಬೆಳಗಾವಿಯಿಂದ ಬಾಳೇಕುಂದ್ರಿಗೆ ಚಲಿಸುತ್ತಿದ್ದ ಬಸ್ಸಿನಲ್ಲಿ ನಡೆದಿದ್ದ ಘಟನೆ ರಾಜ್ಯಾದ್ಯಂತ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಹಲ್ಲೆ ಖಂಡಿಸಿ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕೂಡ ಕರೆ ನೀಡಿದ್ದು, ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:37 am, Thu, 24 July 25