ಬೆಳಗಾವಿ: ಮಾಲೀಕನಿಗೆ ಗನ್​​ನಿಂದ ಹೊಡೆದು ಚಿನ್ನದಂಗಡಿ ದರೋಡೆ ಮಾಡಲು ಯತ್ನ

ಚಿನ್ನದ ಅಂಗಡಿ ಮಾಲೀಕನಿಗೆ ಗನ್​ ತೋರಿಸಿ ಆಭರಣ ದೋಚಲು ಯತ್ನಿಸಿರುವ ಘಟನೆ ಬೆಳಗಾವಿಯ ಶಾಹು ನಗರದಲ್ಲಿ ನಡೆದಿದೆ. ಆರೋಪಿಗಳು ಗನ್​ ತೋರಿಸುತ್ತಿದ್ದಂತೆ ಅಂಗಡಿ ಮಾಲೀಕ ಕಿರುಚಾಡಿದ್ದಾನೆ. ಈ ವೇಳೆ ಇಬ್ಬರು ದುಷ್ಕರ್ಮಿಗಳು ಸ್ಥಳದಿಂದ ಓಡಿ ಹೋಗಿದ್ದಾರೆ. ಆರೋಪಿಗಳ ಅಟ್ಟಹಾಸ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಬೆಳಗಾವಿ: ಮಾಲೀಕನಿಗೆ ಗನ್​​ನಿಂದ ಹೊಡೆದು ಚಿನ್ನದಂಗಡಿ ದರೋಡೆ ಮಾಡಲು ಯತ್ನ
ಸಾಂದರ್ಭಿಕ ಚಿತ್ರ
Follow us
Sahadev Mane
| Updated By: ವಿವೇಕ ಬಿರಾದಾರ

Updated on: Oct 16, 2023 | 1:55 PM

ಬೆಳಗಾವಿ ಅ.16: ಗನ್​​ನಿಂದ ಹೊಡೆದು ಚಿನ್ನದಂಗಡಿ (Gold Shop) ದರೋಡೆ ಮಾಡಲು ಯತ್ನಿಸಿರುವ ಘಟನೆ ಬೆಳಗಾವಿಯ (Belagavi) ಶಾಹು ನಗರದಲ್ಲಿ ನಡೆದಿದೆ. ಪ್ರಶಾಂತ್ ಹೊಂಡ್ರಾ ಎಂಬುವರು ಇಂದು (ಅ.16) ಬೆಳಿಗ್ಗೆ ತಮ್ಮ ಸಂತೋಷಿ ಜ್ಯುವೆಲರ್ಸ್​​ ಅಂಗಡಿ ಬಾಗಿಲು ತೆಗೆಯುತ್ತಿದ್ದರು. ಈ ವೇಳೆ ಹಿಂದಿನಿಂದ ಬಂದ ಆರೋಪಿಗಳು ಪ್ರಶಾಂತ್ ಅವರಿಗೆ ಗನ್ ತೋರಿಸಿ ನಂತರ ಗನ್​ನ ಹಿಂಬದಿಯಿಂದ ತಲೆಗೆ ಹೊಡೆದು ಹಲ್ಲೆ‌ ಮಾಡಿದ್ದಾರೆ. ಈ ವೇಳೆ ಗನ್​​ ಮ್ಯಾಗ್ಜಿನ್​​ನಿಂದ ಒಂದು ಗುಂಡು ಹೊರ ಬಿದ್ದಿದೆ.

ಅಂಗಡಿ ಮಾಲೀಕ ಕಿರುಚಾಡುತ್ತಿದ್ದಂತೆ ಇಬ್ಬರು ದುಷ್ಕರ್ಮಿಗಳು ಸ್ಥಳದಿಂದ ಓಡಿ ಹೋಗಿದ್ದಾರೆ. ಆರೋಪಿಗಳ ಅಟ್ಟಹಾಸ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇನ್ನು ತಲೆಗೆ ಬಲವಾಗಿ ಪೆಟ್ಟು ಬಿದ್ದಿದ್ದರಿಂದ ಪ್ರಶಾಂತ್‌ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಸಿಪಿ, ಇಬ್ಬರು ಎಸಿಪಿ ಸೇರಿದಂತೆ ಪೊಲೀಸರ ತಂಡ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದೆ. ಓರ್ವ ಆರೋಪಿ ಹೆಲ್ಮೆಟ್ ಹಾಕಿಕೊಂಡು ಮತ್ತೋರ್ವ ಆರೋಪಿ ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಅಂಗಡಿ ಪ್ರವೇಶಿಸಿದ್ದು ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಹಾವೇರಿ: ಮನೆ ದೋಚಲು ಬಂದು ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದ ಕಳ್ಳನಿಗೆ ಕಂಬಕ್ಕೆ ಕಟ್ಟಿ ಧರ್ಮದೇಟು

ಕುರಿ ಕಳ್ಳತನ ಮಾಡಿದ ಕಳ್ಳರನ್ನ ಹಿಡಿದ ಯುವಕರು

ಮಂಡ್ಯ: ಕೆ.ಆರ್.ಪೇಟೆ ತಾಲೂಕಿನ ಮತ್ತಿಕೆರೆ ಗ್ರಾಮದಲ್ಲಿ ಹಾಡುಹಗಲೇ ಕುರಿ ಕಳ್ಳತನ ಮಾಡಿದ್ದ, ಕಳ್ಳರನ್ನು ಹಿಡಿದ ಯುವಕರು ಗೂಸಕೊಟ್ಟು ಪೊಲೀಸರಿಗೆ ಒಪ್ಪಿಸಿದ್ದಾರೆ. ಗ್ರಾಮದ ಕೆರೆ ದಡದಲ್ಲಿ ಮೇಯುತ್ತಿದ್ದ  ಕುರಿಗಳನ್ನು ಬೈಕ್​​ನಲ್ಲಿ ಬಂದು ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದರು. ಇದನ್ನು ಕಂಡ ಯುವಕರು  ಬೈಕ್ ಅನ್ನ ಹಿಂಬಾಲಿಸಿ ಕಳ್ಳರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.  ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ