ಬಸ್ ಡ್ರೈವ್ ಮಾಡುವಾಗಲೇ ಹೃದಯಾಘಾತ: 40 ಪ್ರಯಾಣಿಕರ ಜೀವ ಉಳಿಸಿ ಪ್ರಾಣತೆತ್ತ ಚಾಲಕ
ಬಸ್ ಚಲಾಯಿಸುವಾಗಲೇ ಚಾಲಕ ಹೃದಯಘಾತದಿಂದ ಸಾವನ್ನಪ್ಪಿದ್ದಾರೆ. ಆದರೆ, ತಾನು ಸಾಯುವ ಮುನ್ನ 40 ಪ್ರಯಾಣಿಕರ ಜೀವ ಉಳಿಸಿದ್ದಾರೆ. ಹೌದು...ಬಸ್ ಚಲಿಸುವಾಗ ಎದೆ ನೋವು ಕಾಣಿಸಿಕೊಂಡಿದ್ದು, ಕೂಡಲೇ ಚಾಲಕ ಬಸ್ ಅನ್ನು ರಸ್ತೆ ಪಕ್ಕಕ್ಕೆ ನಿಲ್ಲಿಸಿ ಬಳಿಕ ಕೊನೆಯುಸಿರೆಳೆದಿದ್ದಾನೆ.
ಬೆಳಗಾವಿ, (ನವೆಂಬರ್ 07): ವಾಯುವ್ಯ ಕರ್ನಾಟಕ ರಸ್ತೆ ಸಾರಿ ಬಸ್ ಸವದತ್ತಿಯಿಂದ ಪುಣೆಗೆ ತೆರಳುತ್ತಿದ್ದ ವೇಳೆ ಚಾಲಕನಿಗೆ(Bus Driver) ತೀವ್ರ ಹೃದಯಾಘಾತವಾಗಿದೆ. ಬೆಳಗಾವಿ(Belagavi) ಜಿಲ್ಲೆಯ ಬೈಲಹೊಂಗಲ ತಾಲೂಕಿನ ದೊಡವಾಡ ಗ್ರಾಮದ ಬಸ್ ಚಾಲಕ ಸವದತ್ತಿಯಿಂದ ಪುಣೆಗೆ ತೆರಳುತ್ತಿದ್ದ ಸಮಯದಲ್ಲಿ ಕರ್ತವ್ಯದಲ್ಲಿದ್ದಾಗ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. ಆದ್ರೆ, ತಾನು ಸಾಯುವ ಮುನ್ನ ಬಸ್‌ನಲ್ಲಿದ್ದ ಪ್ರಯಾಣಿಕರ ಜೀವ ಉಳಿಸಿದ್ದಾನೆ. ಹೌದು.. ಎದೆ ನೋವು ಕಾಣಿಸಿಕೊಳ್ಳುತ್ತಿದ್ದಂತೆ ಬಸ್ ಅನ್ನು ರಸ್ತೆ ಬದಿ ಬಸ್ ನಿಲ್ಲಿಸಿ ಬಳಿಕ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ, ದೊಡವಾಡ ಗ್ರಾಮದ ಮೂಗಪ್ಪ ಶಿವಪುತ್ರಪ್ಪ ಸಂಗೊಳ್ಳಿ (41) ಮೃತ ಚಾಲಕ.
ದೊಡವಾಡ ಗ್ರಾಮದ ಮೂಗಪ್ಪ ಶಿವಪುತ್ರಪ್ಪ ಸಂಗೊಳ್ಳಿ (41) ಮೃತ ಚಾಲಕ. ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಸವದತ್ತಿ ಘಟಕಕ್ಕೆ ಸೇರಿದ ಬಸ್ ಪುಣೆಯಿಂದ ಸವದತ್ತಿಗೆ ಬರುವ ವೇಳೆ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪಕ್ಕದ ಮಹಾರಾಷ್ಟ್ರದ ಖೇಡಶಿವಾಪುರ ಗ್ರಾಮದ ಬಳಿ ಶನಿವಾರ ರಾತ್ರಿ ತೀವ್ರ ಹೃದಯಾಘಾತವಾಗಿದ್ದು, ತೀವ್ರ ಎದೆ ನೋವು ಕಾಣಿಸಿಕೊಳ್ಳುತ್ತಿದ್ದಂತೆ ರಸ್ತೆ ಬದಿ ಬಸ್ ನಿಲ್ಲಿಸಿ ಪ್ರಯಾಣಿಕರ ಪ್ರಾಣ ಉಳಿಸಿದ್ದಾರೆ.
ಇದನ್ನೂ ಓದಿ: ಹಿರಿಯ ನೌಕರರಿಗೆ ಸಿಹಿಸುದ್ದಿ ನೀಡಿದ ಕೆಎಸ್ಆರ್ಟಿಸಿ; ಏನು ಗೊತ್ತಾ?
ಎದೆ ನೋವಿನಿಂದ ನರಳುತ್ತಿದ್ದ ಮೂಗಪ್ಪರನ್ನು ಬಸ್‌ನಲ್ಲಿದ್ದ ಪ್ರಯಾಣಿಕರು ಕೂಡಲೇ ಆಂಬ್ಯುಲೆನ್ಸ್ಗೆ ಕರೆ ಮಾಡಿ ರಸ್ತೆ ಪಕ್ಕದ ಹೊಟೇಲ್ ಗೆ ಎತ್ತಿಕೊಂಡು ಹೋಗಿ ಉಪಚಾರ ಮಾಡಿದ್ದಾರೆ. ಬಳಿ ಬಂದ ಆಂಬುಲೆನ್ಸ್ ಮೂಲಕ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಆಸ್ಪತ್ರೆ ತಲುಪುವಷ್ಟರಲ್ಲಿ ಚಾಲಕ ಮೂಗಪ್ಪ ಶಿವಪುತ್ರಪ್ಪ ಕೊನೆಯುಸಿರು ಎಳೆದಿದ್ದಾರೆ.
ಒಟ್ಟಿನಲ್ಲಿ ಚಾಲಕ ಮೂಗಪ್ಪ ಶಿವಪುತ್ರಪ್ಪ ಅವರು ಬಸ್ನಲ್ಲಿ ಹಲವು ಪ್ರಯಾಣಿಕರ ಜೀವ ಉಳಿಸಿ ತಾವು ಪ್ರಾಣತೆತ್ತಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:39 am, Tue, 7 November 23