Bannanje Raja: ಭೂಗತ ಪಾತಕಿ ಬನ್ನಂಜೆ ರಾಜ ಸೇರಿ ನಾಲ್ವರಿಗೆ ಜೀವಾವಧಿ ಶಿಕ್ಷೆ ಪ್ರಕಟ

Bannanje Raja: ಭೂಗತ ಪಾತಕಿ ಬನ್ನಂಜೆ ರಾಜ ಸೇರಿ ನಾಲ್ವರಿಗೆ ಜೀವಾವಧಿ ಶಿಕ್ಷೆ ಪ್ರಕಟ
ಬನ್ನಂಜೆ ರಾಜ

3 ಕೋಟಿ ಹಫ್ತಾ ನೀಡದಿದ್ದಕ್ಕೆ ಆರ್.ಎನ್. ನಾಯಕ್ ಹತ್ಯೆ ಮಾಡಲಾಗಿತ್ತು. 2013ರ ಡಿಸೆಂಬರ್ 21 ರಂದು ಉದ್ಯಮಿ ನಾಯಕ್ ಕೊಲೆಯಾಗಿತ್ತು. ಸುಪಾರಿ ನೀಡಿ ಕೊಲೆ ಮಾಡಿಸಿದ ಆರೋಪ ಸಾಬೀತಾಗಿತ್ತು. ಈ ಹಿನ್ನೆಲೆ, ಬನ್ನಂಜೆ ರಾಜ ಸೇರಿ ನಾಲ್ಕು ಮಂದಿಗೆ ಜೀವಾವಧಿ ಶಿಕ್ಷೆ ಪ್ರಕಟವಾಗಿದೆ.

TV9kannada Web Team

| Edited By: ganapathi bhat

Apr 04, 2022 | 12:31 PM

ಬೆಳಗಾವಿ: ಭೂಗತ ಪಾತಕಿ ಬನ್ನಂಜೆ ರಾಜ ಸೇರಿ ನಾಲ್ವರಿಗೆ ಜೀವಾವಧಿ ಶಿಕ್ಷೆ ಪ್ರಕಟ ಮಾಡಲಾಗಿದೆ. ಬೆಳಗಾವಿಯ ಕೋಕಾ ನ್ಯಾಯಾಲಯದಿಂದ ಇಂದು (ಏಪ್ರಿಲ್ 4, ಸೋಮವಾರ) ತೀರ್ಪು ಪ್ರಕಟ ಆಗಿದೆ. ಉದ್ಯಮಿ ಆರ್.ಎನ್. ನಾಯಕ್ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಪ್ರಕಟಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆ ಅಂಕೋಲಾದಲ್ಲಿ ನಾಯಕ್ ಹತ್ಯೆಯಾಗಿತ್ತು. 3 ಕೋಟಿ ಹಫ್ತಾ ನೀಡದಿದ್ದಕ್ಕೆ ಆರ್.ಎನ್. ನಾಯಕ್ ಹತ್ಯೆ ಮಾಡಲಾಗಿತ್ತು. 2013ರ ಡಿಸೆಂಬರ್ 21 ರಂದು ಉದ್ಯಮಿ ನಾಯಕ್ ಕೊಲೆಯಾಗಿತ್ತು. ಸುಪಾರಿ ನೀಡಿ ಕೊಲೆ ಮಾಡಿಸಿದ ಆರೋಪ ಸಾಬೀತಾಗಿತ್ತು. ಈ ಹಿನ್ನೆಲೆ, ಬನ್ನಂಜೆ ರಾಜ ಸೇರಿ ನಾಲ್ಕು ಮಂದಿಗೆ ಜೀವಾವಧಿ ಶಿಕ್ಷೆ ಪ್ರಕಟವಾಗಿದೆ.

ನಾಲ್ಕು ಮಂದಿಯ ಹೆಸರು ಈ ರೀತಿ ಇದೆ: A-2 ಉತ್ತರ ಪ್ರದೇಶ ಮೂಲದ ಜಗದೀಶ್ ಪಟೇಲ್ A-3 ಬೆಂಗಳೂರಿನ ಅಭಿ ಬಂಡಗಾರ್, A-4 ಉಡುಪಿಯ ಗಣೇಶ್ ಭಜಂತ್ರಿ A-9 ಉಡುಪಿಯ ಬನ್ನಂಜೆ ರಾಜಾಗೆ ಜೀವಾವಧಿ ಶಿಕ್ಷೆ ಪ್ರಕಟ

ಅಂಕೋಲಾ ಉದ್ಯಮಿ, ಬಿಜೆಪಿ ನಾಯಕ ಆರ್.ಎನ್. ನಾಯಕ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬನ್ನಂಜೆ ರಾಜ ವಿರುದ್ಧ ಕೋಕಾ ಕಾಯ್ದೆಯಡಿ ಕರ್ನಾಟಕ ಪಶ್ಚಿಮ ವಲಯದ ಪೊಲೀಸರು ಪ್ರಕರಣ ದಾಖಲಿಸಿದ್ದರು. 2015ರ ಫೆಬ್ರವರಿ 12 ರಂದು ಮೊರಕ್ಕೊದಲ್ಲಿ ಬನ್ನಂಜೆ ರಾಜ ಬಂಧನವಾಗಿತ್ತು. ನಕಲಿ ಪಾಸ್‌ಪೋರ್ಟ್ ಹೊಂದಿದ ಆರೋಪದಡಿ ಮೊರಕ್ಕೊದಲ್ಲಿ ಬಂಧಿಸಲಾಗಿತ್ತು. ಬಳಿಕ ಭಾರತಕ್ಕೆ ಭೂಗತ ಪಾತಕಿ ಬನ್ನಂಜೆ ರಾಜ ಹಸ್ತಾಂತರಿಸಲಾಗಿತ್ತು.

2015ರ ಆಗಸ್ಟ್ 14ರಂದು ಭಾರತಕ್ಕೆ ಬನ್ನಂಜೆ ರಾಜ ಕರೆತರಲಾಗಿತ್ತು. 7 ವರ್ಷಗಳ ಸುದೀರ್ಘ ವಿಚಾರಣೆ ಬಳಿಕ ಬೆಳಗಾವಿ ಕೋಕಾ ವಿಶೇಷ ನ್ಯಾಯಾಲಯ ಇಂದು ಅಂತಿಮ ತೀರ್ಪು ಪ್ರಕಟಿಸಿದೆ. ಭೂಗತ ಪಾತಕಿ ಬನ್ನಂಜೆ ರಾಜ ಸೇರಿ ಮೂವರು ಆರೋಪಿಗಳ ಭವಿಷ್ಯ ಇಂದು ನಿರ್ಧಾರ ಆಗಿದೆ. ಹಿರಿಯ ವಕೀಲ ಕೆ.ಜಿ. ಪುರಾಣಿಕಮಠ ಸರ್ಕಾರದ ಪರ ವಕಾಲತ್ತು ವಹಿಸಿದ್ದರು.

ಬನ್ನಂಜೆ ರಾಜ ಯಾರು?

ಬನ್ನಂಜೆ ರಾಜ ಮೂಲತಃ ಉಡುಪಿಯ ಮಲ್ಪೆಯವನಾಗಿದ್ದು ಪದವಿ ಶಿಕ್ಷಣ ಪೂರ್ತಿಗೊಳಿಸಿದ್ದಾನೆ. ಸುಮಾರು 1991 ರಲ್ಲೇ ಉಡುಪಿಯಲ್ಲಿ ಗ್ಯಾಂಗ್ ಕಟ್ಟಿಕೊಂಡು ಅಪರಾಧಿ ಚಟುವಟಿಕೆಗಳನ್ನು ನಡೆಸುತ್ತಿದ್ದ ರಾಜ ಒಂದು ವಿದ್ಯಾರ್ಥಿಯ ಅತ್ಯಾಚಾರ ಪ್ರಕರಣದಲ್ಲಿ ಕೂಡ ಸಿಲುಕಿದ್ದ. ಅಲ್ಲದೆ, ತನ್ನ ಸಹಚರರೊಂದಿಗೆ ಸೇರಿ ಕುಶಾಲ್ ಶೆಟ್ಟಿ ಎಂಬಾತನನ್ನು ಕೂಡ ಕೊಲೆ ಮಾಡಿದ್ದ. ಆ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಬಳಿಕ ಬೆಂಗಳೂರಿಗೆ ಸ್ಥಳಾಂತರಗೊಂಡ ರಾಜ, ಬಿಆರ್ ಕಂಪೆನಿ (ಬನ್ನಂಜೆ ರಾಜ ಕಂಪೆನಿ) ರಚಿಸಿ ಆ ಮೂಲಕ ಭೂಗತ ಅಪರಾಧ ಕೃತ್ಯಗಳನ್ನು ನಡೆಸುತ್ತಿದ್ದ. 1995 ರಲ್ಲಿ ಜೆಜೆ ನಗರ ಪೊಲೀಸರಿಂದ ಆರ್ಮ್ಸ್ ಆಕ್ಟ್ ಅಡಿಯಲ್ಲಿ ಬಂಧಿಸಲ್ಪಟ್ಟಿದ್ದ. ನಂತರ, 2009 ರಲ್ಲಿ ದುಬೈನಲ್ಲಿ ಆತನನ್ನು ಬಂಧಿಸಲಾಗಿತ್ತು ಆದರೂ ಆತನ ಭಾರತಕ್ಕೆ ಹಸ್ತಾಂತರ ಆಗುವಲ್ಲಿ ವಿಫಲವಾಗಿತ್ತು. ಆದರೆ, 2015ರ ಫೆಬ್ರವರಿ 12 ರಂದು ಮೊರಕ್ಕೊದಲ್ಲಿ ಬನ್ನಂಜೆ ರಾಜ ಬಂಧನವಾಗಿತ್ತು. ನಕಲಿ ಪಾಸ್‌ಪೋರ್ಟ್ ಹೊಂದಿದ ಆರೋಪದಡಿ ಮೊರಕ್ಕೊದಲ್ಲಿ ಬಂಧಿಸಲಾಗಿತ್ತು. ಬಳಿಕ ಭಾರತಕ್ಕೆ ಭೂಗತ ಪಾತಕಿ ಬನ್ನಂಜೆ ರಾಜ ಹಸ್ತಾಂತರಿಸಲಾಗಿತ್ತು.

ಇದನ್ನೂ ಓದಿ: Crime News: ಪ್ರೇಮ ಪ್ರಕರಣ ಹಿನ್ನೆಲೆ; ಯುವತಿ ಮನೆಯವರಿಂದ ಪ್ರಿಯಕರನ ಅಣ್ಣನ ಕೊಲೆ

ಇದನ್ನೂ ಓದಿ: Crime News: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ; ಬಳಿಕ ಮನೆ ಬಳಿ ಶವ ಎಸೆದು ಪರಾರಿ

Follow us on

Related Stories

Most Read Stories

Click on your DTH Provider to Add TV9 Kannada