ಬೆಳಗಾವಿ: ಮತಾಂತರಕ್ಕೊಂದು ಚೌಕಟ್ಟು ನಿಗದಿ ಮಾಡುವ ಬಗ್ಗೆ ಚರ್ಚೆ; ಸಿಎಂ ಬಸವರಾಜ ಬೊಮ್ಮಾಯಿ ಸಭೆ

ಮತಾಂತರವಾಗುವ 30 ದಿನಗಳ ಮೊದಲು ಡಿಸಿಗೆ ಅರ್ಜಿ ಸಲ್ಲಿಸಿ, ಡಿಸಿಯಿಂದ ಅರ್ಜಿ ವಿಚಾರಣೆ, ಬಳಿಕ ಮತಾಂತರ ನಿರ್ಧಾರ ಮಾಡುವ ಬಗ್ಗೆ ತಿಳಿದುಬಂದಿದೆ. ದಂಡ, ಜೈಲು ಶಿಕ್ಷೆ ಬಗ್ಗೆಯೂ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆದಿದೆ ಎಂದು ಮಾಹಿತಿ ದೊರಕಿದೆ.

ಬೆಳಗಾವಿ: ಮತಾಂತರಕ್ಕೊಂದು ಚೌಕಟ್ಟು ನಿಗದಿ ಮಾಡುವ ಬಗ್ಗೆ ಚರ್ಚೆ; ಸಿಎಂ ಬಸವರಾಜ ಬೊಮ್ಮಾಯಿ ಸಭೆ
ಸಿಎಂ ಬಸವರಾಜ ಬೊಮ್ಮಾಯಿ
Follow us
TV9 Web
| Updated By: ganapathi bhat

Updated on:Dec 15, 2021 | 3:43 PM

ಬೆಳಗಾವಿ: ಮತಾಂತರ ನಿಷೇಧ ವಿಧೇಯಕ ವಿಚಾರವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ ನಡೆಸಿದ್ದಾರೆ. ಸುವರ್ಣಸೌಧದಲ್ಲಿ ಸಿಎಂ ಸಭೆಗೆ ಗೃಹ ಸಚಿವರ ಆಗಮಿಸಿದ್ದಾರೆ. ತಿದ್ದುಪಡಿ ವಿಧೇಯಕ ಮಂಡನೆಗೆ ಅಂತಿಮ‌ ಹಂತದ ಸಿದ್ಧತೆ ನಡೆಸಲಾಗಿದೆ. ಸೋಮವಾರ ಸದನದಲ್ಲಿ ವಿಧೇಯಕ ಮಂಡಿಸುವ ಸಾಧ್ಯತೆ ಇದೆ ಎಂದು ಮಾಹಿತಿ ಲಭ್ಯವಾಗಿದೆ.

ಅಧಿವೇಶನದಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡನೆ ವಿಚಾರವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜತೆ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಚರ್ಚೆ ನಡೆಸಿದ್ದಾರೆ. ವಿಧೇಯಕ ಯಾವಾಗ ಸದನಕ್ಕೆ ತರಬೇಕು ಎಂಬ ಬಗ್ಗೆ ಚರ್ಚೆ ಮಾಡಲಾಗಿದೆ. ವಿಧೇಯಕದ ಯಾವುದೇ ಅಂಶಗಳು ಇನ್ನೂ ಅಂತಿಮವಾಗಿಲ್ಲ. ಮತಾಂತರಕ್ಕೊಂದು ಚೌಕಟ್ಟು ನಿಗದಿ ಮಾಡುವ ಬಗ್ಗೆ ಚರ್ಚೆ ಮಾಡಲಾಗಿದೆ ಎಂದು ಹೇಳಲಾಗಿದೆ.

ಮತಾಂತರವಾಗುವ 30 ದಿನಗಳ ಮೊದಲು ಡಿಸಿಗೆ ಅರ್ಜಿ ಸಲ್ಲಿಸಿ, ಡಿಸಿಯಿಂದ ಅರ್ಜಿ ವಿಚಾರಣೆ, ಬಳಿಕ ಮತಾಂತರ ನಿರ್ಧಾರ ಮಾಡುವ ಬಗ್ಗೆ ತಿಳಿದುಬಂದಿದೆ. ದಂಡ, ಜೈಲು ಶಿಕ್ಷೆ ಬಗ್ಗೆಯೂ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆದಿದೆ ಎಂದು ಮಾಹಿತಿ ದೊರಕಿದೆ.

ವಿಧೇಯಕ ಅಂತಿಮಗೊಳಿಸಲು ಅನೇಕ ಚರ್ಚೆ ಆಗಿದೆ. ಕರಡು ಪ್ರತಿ ಇನ್ನು ಅಂತಿಮಗೊಳಿಸ ಬೇಕಿದೆ. ಇದು ಐತಿಹಾಸಿಕ ಆಗಿರುವುದರಿಂದ ಬಹಳ ಚರ್ಚೆ ಮಾಡಬೇಕಿದೆ. ಪ್ರತಿ ಶಬ್ದವನ್ನ ಕೂಡ ಯೋಚಿಸಿ ಅಳವಡಿಸಬೇಕು. ನಾವು ಇಲ್ಲಿ ಚರ್ಚೆ ಮಾಡಿದ್ದೇವೆ. ಇಂದು ನಡೆಯುವ ಶಾಸಕಾಂಗ ಪಕ್ಷದ ಸಭೆಯಲ್ಲೂ ಚರ್ಚೆ ಮಾಡುತ್ತೇವೆ. ಆ ಬಳಿಕ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ ತೀರ್ಮಾನ ಮಾಡ್ತಿವಿ. ಸೋಮವಾರ ಸದನಕ್ಕ ಮತಾಂತರ ನಿಷೇಧ ವಿಧೇಯಕ‌ ಮಂಡಿಸುತ್ತೇವೆ ಎಂದು ಟಿವಿ9ಗೆ ಗೃಹ ಸಚಿವ ಅರಗ ಜ್ಙಾನೇಂದ್ರ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ನಮ್ಮ ಧರ್ಮ ಉಳಿಸುವುದಕ್ಕಾಗಿ ಮತಾಂತರ ಕಾಯ್ದೆ ಜಾರಿ ಅನಿವಾರ್ಯ; ಸಚಿವ ಕೆಎಸ್ ಈಶ್ವರಪ್ಪ

ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆ ಜಾರಿಗೆ ಭಾರತೀಯ ಕ್ರೈಸ್ತ ಒಕ್ಕೂಟ ವಿರೋಧ; ಒಕ್ಕೂಟದಿಂದ ಉಪವಾಸ ಸತ್ಯಾಗ್ರಹ

Published On - 3:38 pm, Wed, 15 December 21

ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ