ಹೊಸ ವರ್ಷಾಚರಣೆಗೆ ರಾಜ್ಯ ಸರ್ಕಾರದಿಂದ ಬಿಗಿ ಕ್ರಮ; ಪಬ್, ಹೋಟೆಲ್​ಗಳಲ್ಲಿ ಶೇಕಡಾ 50ರಷ್ಟು ಜನರಿಗೆ ಅವಕಾಶ

ಹೊಸ ವರ್ಷಾಚರಣೆಗೆ ರಾಜ್ಯ ಸರ್ಕಾರದಿಂದ ಬಿಗಿ ಕ್ರಮ ಕೈಗೊಳ್ಳಲಾಗಿದೆ. ಪಬ್, ಹೋಟೆಲ್​ಗಳಲ್ಲಿ ಶೇಕಡಾ 50 ರಷ್ಟು ಜನರಿಗೆ ಮಾತ್ರ ಅವಕಾಶ ನೀಡಲಾಗುವುದು. ಪೊಲೀಸರು, ಹೋಟೆಲ್​ ಮಾಲೀಕರಿಗೆ ಗೊಂದಲ ಬೇಡ ಎಂದು ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.

ಹೊಸ ವರ್ಷಾಚರಣೆಗೆ ರಾಜ್ಯ ಸರ್ಕಾರದಿಂದ ಬಿಗಿ ಕ್ರಮ; ಪಬ್, ಹೋಟೆಲ್​ಗಳಲ್ಲಿ ಶೇಕಡಾ 50ರಷ್ಟು ಜನರಿಗೆ ಅವಕಾಶ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)
Follow us
TV9 Web
| Updated By: ganapathi bhat

Updated on:Dec 24, 2021 | 5:57 PM

ಬೆಳಗಾವಿ: ಹೊಸ ವರ್ಷಾಚರಣೆಗೆ ರಾಜ್ಯ ಸರ್ಕಾರದಿಂದ ಬಿಗಿ ಕ್ರಮ ಕೈಗೊಳ್ಳಲಾಗಿದೆ. ಪಬ್, ಹೋಟೆಲ್​ಗಳಲ್ಲಿ ಶೇಕಡಾ 50 ರಷ್ಟು ಜನರಿಗೆ ಮಾತ್ರ ಅವಕಾಶ ನೀಡಲಾಗುವುದು. ಪಬ್​, ಕ್ಲಬ್​, ಹೋಟೆಲ್​ಗಳಲ್ಲಿ 50:50 ನಿಯಮ ಅನ್ವಯ ಆಗಲಿದೆ. ಪೊಲೀಸರು, ಹೋಟೆಲ್​ ಮಾಲೀಕರಿಗೆ ಗೊಂದಲ ಬೇಡ ಎಂದು ಸುವರ್ಣಸೌಧದಲ್ಲಿ ಟಿವಿ9ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಬಿಗಿ ನಿಲುವು ಕೈಗೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಬಿಗಿ ಕ್ರಮಕೈಗೊಳ್ಳುತ್ತೇವೆ ಎಂದು ಸುವರ್ಣಸೌಧದಲ್ಲಿ ಟಿವಿ9ಗೆ ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಕೊರೊನಾ ಆತಂಕದ ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆ ವೇಳೆ (New Year Celebration) ಜನರು ಗುಂಪುಗೂಡದಂತೆ ನಿರ್ಬಂಧದ ಆದೇಶ ಜಾರಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುವರ್ಣ ಸೌಧದಲ್ಲಿ ಹೇಳಿಕೆ ನೀಡಿದ್ದರು. ಹೊಸವರ್ಷದ ಸಂಭ್ರಮಾಚರಣೆಗೆ ಮಾತ್ರ ಈ ನಿಯಮಗಳು ಅನ್ವಯವಾಗುತ್ತವೆ. ಆದರೆ ಕ್ರಿಸ್​ಮಸ್​ ಹಬ್ಬದಲ್ಲಿ  (Christmas Festival) ಚರ್ಚುಗಳಲ್ಲಿ ಪ್ರಾರ್ಥನೆ ನಡೆಸಲು ಯಾವುದೇ ನಿರ್ಬಂಧಗಳು ಇರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದರು.

ಹೊಸ ವರ್ಷಾಚರಣೆ ವೇಳೆ ಜನ ಗುಂಪುಗೂಡದಂತೆ ನಿರ್ಬಂಧ ವಿಧಿಸಲಾಗುವುದು ಎಂದು ಸುವರ್ಣಸೌಧದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದರು. ಎಂಜಿ ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ಗುಂಪುಗೂಡದಂತೆ ನಿಯಮ ವಿಧಿಸಲಾಗುವುದು. ಡಿ 30ರಿಂದ ಜ 2ರವರೆಗೆ ಸಾಮೂಹಿಕ ಸಮಾರಂಭಗಳಿಗೆ ನಿರ್ಬಂಧ ಇರುತ್ತದೆ. ಗುಂಪುಗೂಡಿ ಹೊಸ ವರ್ಷಾಚರಣೆ ಮಾಡಲು ಅವಕಾಶವಿಲ್ಲ. ಪಬ್, ಬಾರ್ ಮತ್ತು ರೆಸ್ಟೋರೆಂಟ್, ಹೋಟೆಲ್​ಗಲ್ಲಿ ಅರ್ಧದಷ್ಟು ಜನರಿಗೆ ಸೇವೆ ಒದಗಿಸಬಹುದು. ಎಲ್ಲಾ ಸಿಬ್ಬಂದಿಗೆ 2 ಡೋಸ್​ ಕೊರೊನಾ ಲಸಿಕೆ ಹಾಕಿಸಿರಬೇಕು. ಆರ್​ಟಿಪಿಸಿಆರ್​ ಟೆಸ್ಟ್​ ಮಾಡಿಸಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗುವುದು. ಈ ಸಂಬಂಧ ನಡೆದ ವಿಡಿಯೊ ಕಾನ್ಫರೆನ್ಸ್​ನಲ್ಲಿ ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಪಾಲ್ಗೊಂಡಿದ್ದರು ಎಂದು ಮುಖ್ಯಮಂತ್ರಿ ತಿಳಿಸಿದ್ದರು.

ಇದನ್ನೂ ಓದಿ: New Year 2022 Guidelines: ಹೊಸ ವರ್ಷಾಚರಣೆ, ಕ್ರಿಸ್​ಮಸ್​ ಆಚರಣೆಗೆ ಸರ್ಕಾರದ ಮಾರ್ಗಸೂಚಿ ಪ್ರಕಟ

ಇದನ್ನೂ ಓದಿ: Nandi Hills: ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ನಿಷೇಧ ಹೇರಿದ ಜಿಲ್ಲಾಡಳಿತ

Published On - 5:48 pm, Fri, 24 December 21

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್