Karnataka Budget 2022: ಎಲ್ಲಾ ಇಲಾಖೆಗಳ ಬೇಡಿಕೆ ಗಮನಿಸಿ ಬಜೆಟ್​ ಸಿದ್ದಪಡಿಸಲಾಗುವುದು: ಬಸವರಾಜ ಬೊಮ್ಮಾಯಿ

ಕೇಂದ್ರ, ರಾಜ್ಯದ ಯೋಜನೆ ಗಮನಿಸಿ ಬಜೆಟ್​ ಸಿದ್ಧಪಡಿಸುತ್ತೇನೆ. ಬಜೆಟ್​ನಲ್ಲಿ ಏನಾಗುತ್ತೆ ಎಂದು ಮೊದಲೇ ಹೇಳಲು ಆಗುವುದಿಲ್ಲ ಎಂದು ಬೆಳಗಾವಿ ಸಾಂಬ್ರಾ ಏರ್​ಪೋರ್ಟ್​ನಲ್ಲಿ ಶನಿವಾರ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.

Karnataka Budget 2022: ಎಲ್ಲಾ ಇಲಾಖೆಗಳ ಬೇಡಿಕೆ ಗಮನಿಸಿ ಬಜೆಟ್​ ಸಿದ್ದಪಡಿಸಲಾಗುವುದು: ಬಸವರಾಜ ಬೊಮ್ಮಾಯಿ
ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)
Follow us
TV9 Web
| Updated By: ganapathi bhat

Updated on:Feb 12, 2022 | 5:03 PM

ಬೆಳಗಾವಿ: ಬಜೆಟ್ ಪ್ರಕ್ರಿಯೆ ಶುರುವಾಗಿದ್ದು ಇಲಾಖಾವಾರು ಸಭೆ ನಡೆಸಿದ್ದೇನೆ. ಸೋಮವಾರ, ಮಂಗಳವಾರವೂ ಸಭೆಗಳನ್ನು ಮುಂದುವರಿಸುವೆ. ಫೆಬ್ರವರಿ 25ರ ನಂತರ ಎಲ್ಲಾ ಇಲಾಖೆಗಳ ಬೇಡಿಕೆ ಗಮನಿಸಿ ಬಜೆಟ್ (Karnataka Budget)​ ಸಿದ್ದಪಡಿಸಲಾಗುವುದು. ಕೇಂದ್ರ, ರಾಜ್ಯದ ಯೋಜನೆ ಗಮನಿಸಿ ಬಜೆಟ್​ ಸಿದ್ಧಪಡಿಸುತ್ತೇನೆ. ಬಜೆಟ್​ನಲ್ಲಿ ಏನಾಗುತ್ತೆ ಎಂದು ಮೊದಲೇ ಹೇಳಲು ಆಗುವುದಿಲ್ಲ ಎಂದು ಬೆಳಗಾವಿ ಸಾಂಬ್ರಾ ಏರ್​ಪೋರ್ಟ್​ನಲ್ಲಿ ಶನಿವಾರ ಸಿಎಂ ಬಸವರಾಜ ಬೊಮ್ಮಾಯಿ (CM Basavaraj Bommai) ಹೇಳಿಕೆ ನೀಡಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ಹಿಜಾಬ್, ಕೇಸರಿ ಶಾಲು ಸಂಘರ್ಷ ವಿಚಾರವಾಗಿ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಕರಣ ಕೋರ್ಟ್​ನಲ್ಲಿ, ವಾದ ಪ್ರತಿವಾದ ನಡೆಯುತ್ತಿದೆ. ಹೈಕೋರ್ಟ್​ ಈಗಾಗಲೇ ಮಧ್ಯಂತರ ಆದೇಶ ನೀಡಿದೆ. ರಾಜ್ಯದಲ್ಲಿ ಶಾಂತಿ ನೆಲೆಸುವಂತೆ ಸರ್ಕಾರ ಕ್ರಮವಹಿಸಲಿದೆ. ಮಕ್ಕಳಲ್ಲಿ ಭಿನ್ನಾಭಿಪ್ರಾಯ ಮೂಡದಂತೆ ಶಾಲೆ ಆರಂಭಿಸಬೇಕು. ರಾಜ್ಯದಲ್ಲಿ ಶಾಲೆಗಳ ಪುನಾರಂಭಕ್ಕೆ ಮೊದಲ ಆದ್ಯತೆ ನೀಡುತ್ತೇವೆ ಎಂದು ಬೊಮ್ಮಾಯಿ ಹೇಳಿದ್ದಾರೆ.

ರಕ್ಷಣಾ ಇಲಾಖೆ ಸಚಿವ ರಾಜನಾಥ್ ಸಿಂಗ್ ಭೇಟಿ ವಿಚಾರವಾಗಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. 750 ಎಕರೆ ರಕ್ಷಣಾ ಇಲಾಖೆ ಜಾಗದ ಬಗ್ಗೆ ಮಾತಾಡಿದ್ದೇನೆ. ಬೆಳಗಾವಿಯಲ್ಲಿ‌ನ 750 ಎಕರೆ ರಕ್ಷಣಾ ಇಲಾಖೆಯ ಜಾಗದ ಬಗ್ಗೆ ಮಾತನಾಡಲಾಗಿದೆ. ಮಾಹಿತಿ ತರಿಸಿ ಶೀಘ್ರ ನಿರ್ಣಯಿಸುವುದಾಗಿ ಹೇಳಿದ್ದಾರೆ. ಮಿಲಿಟರಿ ಶಾಲೆ ರಕ್ಷಣಾ ಇಲಾಖೆ ಸುಪರ್ದಿಗೆ ಮನವಿ ಮಾಡಿದ್ದೇವೆ. ಸಂಗೊಳ್ಳಿ ಗ್ರಾಮದ ಸಂಗೊಳ್ಳಿ ರಾಯಣ್ಣ ಮಿಲಿಟರಿ ಶಾಲೆ, ಶಾಲೆ ಪರ ಆದಷ್ಟು ಬೇಗ ನಿರ್ಣಯ ಕೈಗೊಳ್ಳುತ್ತೇವೆ ಎಂದು ಬೆಳಗಾವಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್​ಗೆ ಸಿದ್ಧತೆ ಆರಂಭಿಸಿದ್ದಾರೆ. ಬಜೆಟ್​ಗೆ ಪೂರ್ವಭಾವಿಯಾಗಿ ಫೆ.25ರವರೆಗೂ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸಮಾಜದ ವಿವಿಧ ವರ್ಗಗಳ ಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ಫೆ.9 ರಂದು ಕಂದಾಯ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ, ಉನ್ನತ ಶಿಕ್ಷಣ, ಲೋಕೋಪಯೋಗಿ ಇಲಾಖೆ, ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಇಂಧನ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆಗೆ ಸಮಾಲೋಚನೆ ನಡೆಸಿದ್ದರು.

ಇದನ್ನೂ ಓದಿ: Karnataka Budget 2022: ಕರ್ನಾಟಕ ಬಜೆಟ್ ಪೂರ್ವಭಾವಿ ಸಭೆ ನಡೆಸಿದ ಸಿಎಂ ಬಸವರಾಜ ಬೊಮ್ಮಾಯಿ: ಕಂದಾಯ ಸಚಿವ ಆರ್ ಅಶೋಕ್ ಜೊತೆ ಸಭೆ

ಇದನ್ನೂ ಓದಿ: ಹಿಜಾಬ್ V/S ಕೇಸರಿ ಶಾಲು ಸಂಘರ್ಷ! ಹೊರಗಡೆಯವರು ಪ್ರಚೋದನೆ ನೀಡುತ್ತಿದ್ದಾರೆ; ಸಿಎಂ ಬೊಮ್ಮಾಯಿ

Published On - 4:44 pm, Sat, 12 February 22

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ