ಬೆಳಗಾವಿಯ ಸುವರ್ಣ ಸೌಧದಲ್ಲೇ ಚಳಿಗಾಲದ ಅಧಿವೇಶನ: ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ

ಉತ್ತರ ಕರ್ನಾಟಕದ ಸಮಸ್ಯೆಗಳ ಮೇಲೆ ಬೆಳಗಾವಿ ಅಧಿವೇಶನ ಹೆಚ್ಚು ಕೇಂದ್ರೀಕರಿಸಲಿದೆ. ಯಾವುದೇ ಕಾರಣಕ್ಕೂ ಗಲಾಟೆಗಳು ಆಗದಂತೆ ನೋಡಿಕೊಳ್ಳಲಿದೆ. ಉತ್ತರ ಕರ್ನಾಟಕದ ಬಗ್ಗೆ ಹೆಚ್ಚು ಚರ್ಚೆ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದರು.

ಬೆಳಗಾವಿಯ ಸುವರ್ಣ ಸೌಧದಲ್ಲೇ ಚಳಿಗಾಲದ ಅಧಿವೇಶನ: ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ
ಬೆಳಗಾವಿಯ ಸುವರ್ಣಸೌಧ

ಹುಬ್ಬಳ್ಳಿ: ಈಬಾರಿ ಬೆಳಗಾವಿಯ ಸುವರ್ಣ ಸೌಧದಲ್ಲೇ ಚಳಿಗಾಲದ ಅಧಿವೇಶನ ನಡೆಯಲಿದೆ ಎಂದು ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸಭಾಪತಿ ಹೊರಟ್ಟಿ ತಿಳಿಸಿದರು. ಡಿಸೆಂಬರ್ 2ನೇ ವಾರದಲ್ಲಿ ಅಧಿವೇಶನ ನಡೆಯುವ ಸಾಧ್ಯತೆಯಿದ್ದು ಈಕುರಿತು ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜತೆಗೆ ಚರ್ಚಿಸಿದ್ದೇನೆ. 3 ವರ್ಷಗಳಿಂದ ಬೆಳಗಾವಿಯಲ್ಲಿ ಅಧಿವೇಶನ ನಡೆದಿಲ್ಲ. ಹಿಗಾಗಿ ಈಬಾರಿ 2 ವಾರಗಳ ಕಾಲ ಬೆಳಗಾವಿಯಲ್ಲಿ ಅಧಿವೇಶನ ನಡೆಸಲಿದ್ದೇವೆ ಎಂದು ಅವರು ಸ್ಪಷ್ಟಪಡಿಸಿದರು.

ಉತ್ತರ ಕರ್ನಾಟಕದ ಸಮಸ್ಯೆಗಳ ಮೇಲೆ ಬೆಳಗಾವಿ ಅಧಿವೇಶನ ಹೆಚ್ಚು ಕೇಂದ್ರೀಕರಿಸಲಿದೆ. ಯಾವುದೇ ಕಾರಣಕ್ಕೂ ಗಲಾಟೆಗಳು ಆಗದಂತೆ ನೋಡಿಕೊಳ್ಳಲಿದೆ. ಉತ್ತರ ಕರ್ನಾಟಕದ ಬಗ್ಗೆ ಹೆಚ್ಚು ಚರ್ಚೆ ನಡೆಯಲಿದೆ. ಕಲಾಪ ಸುಸೂತ್ರವಾಗಿ ನಡೆಯಲು ವಿರೋಧ ಪಕ್ಷದ ನಾಯಕರ ಜತೆಯೂ ಮಾತನಾಡಲಿದ್ದೇವೆ ಎಂದು ಅವರು ಮಾಹಿತಿ ನೀಡಿದರು.

ಇದನ್ನೂ ಓದಿ: 

ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸಲು ಸೂಚನೆ; ಸಿಎಂಗೆ ಪತ್ರ ಬರೆದ ಬಸವರಾಜ ಹೊರಟ್ಟಿ

ವಿಧಾನಪರಿಷತ್ ಸದಸ್ಯರ ಚಿಕಿತ್ಸೆ ವೆಚ್ಚ ದುಬಾರಿ; 2021 ರಲ್ಲಿ 69,04,024 ರೂಪಾಯಿ ವೈದ್ಯಕೀಯ ವೆಚ್ಚ

Read Full Article

Click on your DTH Provider to Add TV9 Kannada