ದೇವಸ್ಥಾನಕ್ಕೆ ಹೋದವರು ಮಸಣಕ್ಕೆ: ಕಾಪಾಡಲಿಲ್ಲ ಕೊಲ್ಲಾಪುರದ ಮಹಾಲಕ್ಷ್ಮೀ
ಕಲಬುರಗಿ ಮೂಲದ ಮೂವರು ಕೊಲ್ಲಾಪುರದ ಪ್ರಸಿದ್ಧ ಮಹಾಲಕ್ಷ್ಮಿ ದೇವಿ ದರ್ಶನ ಪಡೆದು ಕಾರಿನಲ್ಲಿ ವಾಪಸ್ ತಮ್ಮ ಊರಿಗೆ ಹೋಗುತ್ತಿದ್ದರು. ಆದರೆ, ದಾರಿ ಮಧ್ಯೆ ದುರ್ಘಟನೆಯೊಂದು ಸಂಭವಿಸಿದೆ. ಕಾರಿನಲ್ಲಿ ವಾಪಸ್ ಬರುತ್ತಿದ್ದವರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮುರಗುಂಡಿಯಲ್ಲಿ ಘಟನೆ ನಡೆದಿದೆ.

ಬೆಳಗಾವಿ, ಜು.06: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಅಥಣಿ (Athani) ತಾಲೂಕಿನ ಮುರಗುಂಡಿ ಬಳಿ ನಡೆದಿದೆ. ಕಲಬುರಗಿ ಜಿಲ್ಲೆಯ ಅಫ್ಜಲಪುರ್ ಮೂಲದ ಗಿರೀಶ್ ಬಳ್ಳೋರಗಿ, ರಾಹುಲ್, ಸಂಗು ಅಮರಗೊಂಡ ಮೃತ ದುರ್ದೈವಿಗಳು. ಅಘಾತದಲ್ಲಿ ಗಂಭೀರವಾಗಿ ಗಾಯಗೊಂಡ ರಾಧಿಕಾ ಎಂಬುವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಲ್ಲಾಪುರ ಮಹಾಲಕ್ಷ್ಮಿ ದೇವಿ ದರ್ಶನ ಪಡೆದು ವಾಪಸ್ ಬರುವಾಗ ಅಪಘಾತ ಸಂಭವಿಸಿದೆ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದನ್ನೂ ಓದಿ: ಆಟೋದಲ್ಲೇ ನೇಣುಬಿಗಿದುಕೊಂಡು ಪ್ರೇಮಿಗಳು ಆತ್ಮಹತ್ಯೆ, ಅಚ್ಚರಿ ಎನ್ನಿಸಿದರೂ ಸತ್ಯ
ಬೈಕ್‌ಗಳು ನಡುವೆ ಅಪಘಾತ, ಇಬ್ಬರ ಸಾವು
ಮೈಸೂರು: ಎರಡು ಬೈಕ್‌ಗಳ ನಡುವೆ ಅಪಘಾತ ಸಂಭವಿಸಿ, ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮೈಸೂರಿನ ಬನ್ನಿಮಂಟಪ ಮುಖ್ಯರಸ್ತೆಯ ಬಡಾವಣೆಯಲ್ಲಿ ನಡೆದಿದೆ. ಜೊಮೆಟೊ ಫುಡ್ ಡಿಲಿವರಿ ಬಾಯ್ ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಒಂದು ಬೈಕ್ ಸುಟ್ಟು ಭಸ್ಮವಾಗಿದೆ. ಎನ್.ಆರ್.ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಡ್ಯ: ವಿಸಿ ನಾಲೆಗೆ ಬಿದ್ದ ಬೈಕ್, ಇಬ್ಬರ ಸಾವು
ಮಂಡ್ಯ: ಮದ್ದೂರು ತಾಲೂಕಿನ ಹೊಸಗಾವಿ ಗ್ರಾಮದ ಬಳಿಯ ವಿಸಿ ನಾಲೆಗೆ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಬಿದ್ದಿದ್ದು, ಇಬ್ಬರು ಮೃತಪಟ್ಟಿದ್ದಾರೆ. ತುಮಕೂರು ಮೂಲದ ರಾಮಣ್ಣ (70), ಮದ್ದೂರಿನ ಸೋಮಹಳ್ಳಿ ಗ್ರಾಮದ ಭರತ್ (19) ಮೃತ ದುರ್ದೈವಿಗಳು. ಬೈಕ್ ಚಾಲಕ ನಿಯಂತ್ರಣ ತಪ್ಪಿ ವಿಸಿ ನಾಲೆಯ ತಡೆಗೋಡೆಗೆ ಡಿಕ್ಕಿ ಹೊಡೆದು ಉರುಳಿಬಿದ್ದಿದೆ. ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:56 pm, Sun, 6 July 25