AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ಬೈಲಹೊಂಗಲದಲ್ಲಿ ರಾಜ್ಯಪಾಲರ ಹೆಸರಿನಲ್ಲಿದ್ದ ಐದೂವರೆ ಎಕರೆ ಜಮೀನೇ ಮಂಗಮಾಯ!

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನಲ್ಲಿ ರಾಜ್ಯಪಾಲರ ಹೆಸರಿನ 5.5 ಎಕರೆ ಜಮೀನು ಅಕ್ರಮವಾಗಿ ವರ್ಗಾವಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಬಡವರಿಗೆ ನಿವೇಶನ ಹಂಚಲು ಖರೀದಿಸಿದ್ದ ಈ ಜಮೀನನ್ನು ಖಾಸಗಿ ವ್ಯಕ್ತಿಗಳಿಗೆ ವರ್ಗಾಯಿಸಲಾಗಿದೆ ಎಂದು ಆರ್‌ಟಿಐ ಕಾರ್ಯಕರ್ತರೊಬ್ಬರು ಆರೋಪಿಸಿದ್ದಾರೆ. ಜಿಲ್ಲಾಧಿಕಾರಿ ಮತ್ತು ತಹಶೀಲ್ದಾರರ ಪಾತ್ರದ ಬಗ್ಗೆಯೂ ಅನುಮಾನ ವ್ಯಕ್ತವಾಗಿದೆ.

ಬೆಳಗಾವಿ: ಬೈಲಹೊಂಗಲದಲ್ಲಿ ರಾಜ್ಯಪಾಲರ ಹೆಸರಿನಲ್ಲಿದ್ದ ಐದೂವರೆ ಎಕರೆ ಜಮೀನೇ ಮಂಗಮಾಯ!
ಬೆಳಗಾವಿಯಲ್ಲಿ ಭೂ ಅವ್ಯವಹಾರ
Sahadev Mane
| Edited By: |

Updated on: Apr 04, 2025 | 10:08 AM

Share

ಬೆಳಗಾವಿ, ಏಪ್ರಿಲ್ 4: ಕರ್ನಾಟಕ ರಾಜ್ಯಪಾಲರ (Karnataka Governor) ಹೆಸರಿನಲ್ಲಿರುವ ಐದೂವರೆ ಎಕರೆ ಜಮೀನು ಭೂಗಳ್ಳರ ಪಾಲಾಗಿರುವ ಗಂಭೀರ ಪ್ರಕರಣ ಬೆಳಗಾವಿ (Belagavi) ಜಿಲ್ಲೆಯ ಬೈಲಹೊಂಗಲ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ಬಡ ಜನರಿಗೆ ನಿವೇಶನ ಹಂಚಲು ಸರ್ಕಾರವು ಖರೀದಿಸಿದ್ದ ಜಮೀನನ್ನು ಇತ್ತೀಚೆಗೆ ಖಾಸಗಿ ವ್ಯಕ್ತಿಗಳ ಹೆಸರಿಗೆ ಮಾಡಿಕೊಂಡು ತಿದ್ದುಪಡಿ ಮಾಡುವ ಮೂಲಕ ವಂಚನೆ ಎಸಗಲಾಗಿದೆ. ಮಲ್ಲಮ್ಮನ ಬೆಳವಡಿಯಲ್ಲಿರುವ ಸರ್ವೇ ನಂ.221/1ಬ 19 ಎಕರೆ 30 ಗುಂಟೆ ಸಾಗುವಳಿ ಜಮೀನಿನ ಪೈಕಿ 6 ಎಕರೆ ಜಮೀನನ್ನು 2002ರಲ್ಲಿ ಖರೀದಿಸಿ, ರಾಜ್ಯಪಾಲರ ಹೆಸರಿನಲ್ಲಿ ನೋಂದಣಿ ಮಾಡಲಾಗಿತ್ತು. ಜಮೀನನ್ನು ಬಡ ಜನರಿಗೆ ಹಂಚುವ ಉದ್ದೇಶದಲ್ಲಿ ಸರ್ಕಾರ ಈ ಕ್ರಮ ಕೈಗೊಂಡಿತ್ತು.

ಆದರೆ, ಕೆಲವು ವರ್ಷಗಳ ಹಿಂದೆ ಇದೇ ಸರ್ವೇ ನಂಬರ್​​ನ ಜಮೀನಿನ ಪಹಣಿ ಪತ್ರ ಸರಿಪಡಿಸುವ ನೆಪದಲ್ಲಿ ಗೋಲ್​ಮಾಲ್ ಎಸಗಲಾಗಿದೆ. ಜೊತೆಗೆ, ಜಮೀನಿನಲ್ಲಿ ಯಾವುದೇ ಅನುಮತಿ ಇಲ್ಲದೆ ಖಾಸಗಿ ವ್ಯಕ್ತಿಗಳ ಹೆಸರು ಸೇರ್ಪಡೆ ಮಾಡಲಾಗಿದೆ ಎಂದು ಆರ್​​ಟಿಐ ಕಾರ್ಯಕರ್ತ ಭೀಮಪ್ಪ ಗಡಾದ್ ಗಂಭೀರ ಆರೋಪ ಮಾಡಿದ್ದಾರೆ.

ಪಹಣಿ ತಿದ್ದುಪಡಿಯ ಸಮಯದಲ್ಲಿ, ರಾಜ್ಯಪಾಲರ ಹೆಸರಿನ 6 ಎಕರೆ ಜಮೀನಿನಲ್ಲಿ 35 ಗುಂಟೆ ಮಾತ್ರ ಉಳಿಸಿಕೊಂಡು ಉಳಿದ ಜಮೀನನ್ನು ಖಾಸಗಿ ವ್ಯಕ್ತಿಗಳ ಹೆಸರಿನಲ್ಲಿ ಸೇರ್ಪಡೆ ಮಾಡಲಾಗಿದೆ ಎಂದು ಭೀಮಪ್ಪ ಗಡಾದ್ ಆರೋಪಿಸಿದ್ದಾರೆ.

ಇದನ್ನೂ ಓದಿ
Image
ಹಾಸನ: ಭಾರಿ ಮಳೆಗೆ ಸೋರುತಿಹುದು ರೈಲ್ವೆ ನಿಲ್ದಾಣ ಮಾಳಿಗಿ!
Image
ಇಂದಿನಿಂದ ಬೆಂಗಳೂರು ಕರಗ: ಯಾವಾಗ ಏನೇನು ಕಾರ್ಯಕ್ರಮ? ಇಲ್ಲಿದೆ ವಿವರ
Image
ರಾಹುಲ್ ಗಾಂಧಿ, ಸಿದ್ದರಾಮಯ್ಯ 30 ನಿಮಿಷ ಮಾತುಕತೆ: ಇಲ್ಲಿದೆ ವಿವರ
Image
ವಕ್ಫ್ ತಿದ್ದುಪಡಿ ಮಸೂದೆಗೆ ರಾಜ್ಯಸಭೆಯಲ್ಲೂ ಅನುಮೋದನೆ

ಆಗಿನ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಮತ್ತು ಬೈಲಹೊಂಗಲ ಎಸಿ ಪ್ರಭಾವತಿಯವರು ತಿದ್ದುಪಡಿ ಕಾರ್ಯದಲ್ಲಿ ಶಾಮೀಲಾಗಿದ್ದಾರೆ ಎಂದು ಹೇಳಲಾಗುತ್ತಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಗಡಾದ್ ಆಗ್ರಹಿಸಿದ್ದಾರೆ.

ಯಾವುದೇ ತಪ್ಪೆಸಗಿಲ್ಲ: ಪ್ರಭಾವತಿ

ಅಕ್ರಮ ಸಂಬಂಧ ಪ್ರತಿಕ್ರಿಯೆ ನೀಡಿರುವ ಪ್ರಭಾವತಿ, ಯಾವುದೇ ತಪ್ಪೆಸಗಿಲ್ಲ ಎಂದಿದ್ದಾರೆ. 2023ರಲ್ಲಿ ಡಿಸಿ ಅವರಿಗೆ ಫೈಲ್ ಕಳುಹಿಸಿದ್ದೇನೆ. ಯಾವುದನ್ನೂ ತಿದ್ದಪಡಿ ಮಾಡಿಲ್ಲ ಎಂದು ಅವರು ಹೇಳಿದ್ದಾರೆ. ಹೀಗಾಗಿ, ರಾಜ್ಯಪಾಲರ ಅನುಮತಿ ಪಡೆಯದೇ ಆಗಿನ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರೇ ಪೋಡಿ ಮಾಡಿದ್ದರಾ ಎಂಬ ಪ್ರಶ್ನೆ ಉದ್ಭವಿಸಿದೆ.

ಇದನ್ನೂ ಓದಿ: ಕೃಷ್ಣಾ, ಭೀಮಾ ನದಿಗೆ ನೀರು ಹರಿಸುವಂತೆ ಮಹಾರಾಷ್ಟ್ರ ಸಿಎಂಗೆ ಸಿದ್ದರಾಮಯ್ಯ ಪತ್ರ

ಆಗಿನ ಡಿಸಿ ನಿತೇಶ್ ಪಾಟೀಲ್ ಅವರೇ ಕಾನೂನು ಬಾಹಿರವಾಗಿ ರಾಜ್ಯಪಾಲರ ಜಮೀನನ್ನೇ ಪೋಡಿ ಮಾಡಿದ್ದಾರೆ ಎಂದು ಭೀಮಪ್ಪ ಗಡಾದ್ ಗಂಭೀರ ಆರೋಪ ಮಾಡಿದ್ದಾರೆ. ಒಟ್ಟಿನಲ್ಲಿ, ರಾಜ್ಯಪಾಲರ ಹೆಸರಿನ ಜಮೀನಿಗೇ ಕನ್ನ ಹಾಕಿರುವ ಈ ಪ್ರಕರಣ ಸಂಚಲನ ಮೂಡಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು