AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: 2023ರಲ್ಲೇ ಮಸೀದಿಯಲ್ಲಿ ಮೌಲ್ವಿಯಿಂದ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಬಂಧನ

2023ರ ಅಕ್ಟೋಬರ್‌ನಲ್ಲಿ ಬೆಳಗಾವಿಯ ಮಸೀದಿಯಲ್ಲಿ ಐದು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಘಟನೆ ಇದೀಗ ತಡವಾಗಿ ಬೆಳಕಿಗೆ ಬಂದಿದೆ. ಘಟನೆಯ ಸಿಸಿಟಿವಿ ದೃಶ್ಯಗಳು ವೈರಲ್ ಬೆನ್ನಲ್ಲೇ ಬಾಲಕಿಯ ಪೋಷಕರ ಮನವೊಲಿಸಿ ಪೊಲೀಸರು ದೂರು ದಾಖಲಿಸಿಕೊಂಡು ಮಹಾಲಿಂಗಪುರದ ಮೌಲ್ವಿ ತುಫೇಲ್ ಅಹ್ಮದ್ ದಾದಾಪೀರ್​ನನ್ನು ಬಂಧಿಸಿದ್ದಾರೆ.

ಬೆಳಗಾವಿ: 2023ರಲ್ಲೇ ಮಸೀದಿಯಲ್ಲಿ ಮೌಲ್ವಿಯಿಂದ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಬಂಧನ
ಮೌಲ್ವಿ ತುಫೇಲ್ ಅಹ್ಮದ್ ದಾದಾಪೀರ್
Sahadev Mane
| Updated By: ಗಂಗಾಧರ​ ಬ. ಸಾಬೋಜಿ|

Updated on:Aug 06, 2025 | 1:49 PM

Share

ಬೆಳಗಾವಿ, ಆಗಸ್ಟ್​ 06: ಮಸೀದಿಯಲ್ಲಿ (mosque) ಮೌಲ್ವಿಯಿಂದ 5 ವರ್ಷದ ಬಾಲಕಿ (girl) ಮೇಲೆ ಅತ್ಯಾಚಾರವೆಸಗಿರುವಂತಹ ಘಟನೆ 2023ರ ಅಕ್ಟೋಬರ್​ನಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಸಿಸಿಟಿವಿ ದೃಶ್ಯ ವೈರಲ್ ಬೆನ್ನಲ್ಲೇ ಬಾಲಕಿ ಪೋಷಕರನ್ನು ಹುಡುಕಿ ಕೇಸ್ ದಾಖಲಿಸಿಲಾಗಿದೆ. ಮಹಾಲಿಂಗಪುರದ ಮೌಲ್ವಿ ತುಫೇಲ್ ಅಹ್ಮದ್ ದಾದಾಪೀರ್​​ (22) ಎಂಬಾತನನ್ನು ಬಂಧಿಸಿದ ಮುರಗೋಡ ಪೊಲೀಸರು ಹಿಂಡಲಗಾ ಜೈಲಿಗಟ್ಟಿದ್ದಾರೆ.

ಬಾಲಕಿ ಮೇಲೆ ಅತ್ಯಾಚಾರ ಎಸಗುವ ಕೃತ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆ ಆಗಿದೆ. ಘಟನೆ ನಡೆದು ಎರಡು ವರ್ಷ ಕಳೆದರೂ ಭಯ ಪಟ್ಟು ಬಾಲಕಿ ಪೋಷಕರು ಕೇಸ್ ನೀಡಿರಲ್ಲಿ. ವಿಡಿಯೋ ಸಿಗುತ್ತಿದ್ದಂತೆ ಪೊಲೀಸರೇ ಬಾಲಕಿ ತಂದೆಯ ಮನವೊಲಿಸಿ ಕೇಸ್ ದಾಖಲಿಸಿದ್ದಾರೆ.

ಇದನ್ನೂ ಓದಿ: ಬೆಳಗಾವಿ: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ವಿಡಿಯೋ ಮಾಡಿದ್ದ ಆರೋಪಿಗಳು ಅರೆಸ್ಟ್​

ಇದನ್ನೂ ಓದಿ
Image
ಮಹಿಳೆಯೊಂದಿಗೆ ಇರುವಾಗಲೇ ಸಿಕ್ಕಬಿದ್ದ ಸ್ವಾಮೀಜಿ, ಮಠದಿಂದ ಓಡಿಸಿದ ಜನರು
Image
ಬೆಳಗಾವಿ: ಲೋಕೇಶ್ವರ ಸ್ವಾಮೀಜಿ ಮೇಲೆ ಅತ್ಯಾಚಾರ ಕೇಸ್ ಬೆನ್ನಲ್ಲೇ ಮಠ ಧ್ವಂಸ
Image
ಬೆಳಗಾವಿ: 17 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ, ಸ್ವಾಮೀಜಿ ಅರೆಸ್ಟ್​​
Image
ಮತ್ತು ಬರಿಸಿ ಬೆಳಗಾವಿಯ ಮೆಡಿಕಲ್​​ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ

ಪುನೀತ್ ಕೆರೆಹಳ್ಳಿ ಎಂಬ ಎಕ್ಸ್​ ಖಾತೆಯಲ್ಲಿ ವಿಡಿಯೋ ವೈರಲ್​ ಆಗಿತ್ತು. 2023 ಅಕ್ಟೋಬರ್​ 5ರಂದು ಬೆಳಗಾವಿ ಜಿಲ್ಲೆಯ ಯರಗಟ್ಟಿಯ ಮಸೀದಿ ಒಂದರಲ್ಲಿ ಹೆಣ್ಣು ಮಗುವಿನ ಮೇಲೆ ನಡೆದಿರುವ ಈ ಅತ್ಯಾಚಾರಕ್ಕೆ ಆ ಮಗುವಿನ ತಂದೆ ನ್ಯಾಯ ಕೇಳುತ್ತಿದ್ದಾರೆ. ಮಸೀದಿಯವರು ಇವರನ್ನು ಹೆದರಿಸಿ ದೂರು ಕೊಡದಂತೆ ತಡೆದಿದ್ದಾರಂತೆ. ಈಗಳು ಆ ವ್ಯಕ್ತಿ ನ್ಯಾಯಕ್ಕಾಗಿ ಕಾಯುತ್ತಿದ್ದಾರೆ. ದಯವಿಟ್ಟು ಕೂಡಲೇ ತನಿಖೆ ಮಾಡಿ ಕ್ರಮ ಜರುಗಿಸಿ ಆ ಹೆಣ್ಣು ಮಗುವಿಗೆ ನ್ಯಾಯ ಕೊಡಿಸಬೇಕೆಂದು ಕೇಳಿಕೊಳ್ಳುತ್ತಿದ್ದೇನೆ. ತಂದೆಯ ಹೆಸರು ಕುತುಬುದ್ದೀನ್​ ಎಂದು ಪೋಸ್ಟ್ ಮಾಡಲಾಗಿತ್ತು.

17 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ: ಸ್ವಾಮೀಜಿ ಬಂಧನ

ಇನ್ನು ಇತ್ತೀಚೆಗೆ ಸ್ವಾಮೀಜಿಯಿಂದ 17 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ ಕೇಳಿಬಂದಿತ್ತು. ಹಾಗಾಗಿ ಜಿಲ್ಲೆಯ ರಾಯಬಾಗ ತಾಲೂಕಿನ ಮೇಖಳಿಯ ರಾಮಮಂದಿರ ಲೋಕೇಶ್ವರ ಮಹಾರಾಜ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದರು.

ಇದನ್ನೂ ಓದಿ: ಬೆಳಗಾವಿ: ಮಹಿಳೆಯೊಂದಿಗೆ ಇರುವಾಗಲೇ ಸಿಕ್ಕಬಿದ್ದ ಸ್ವಾಮೀಜಿ, ರಾತ್ರೋರಾತ್ರಿ ಮಠದಿಂದ ಓಡಿಸಿದ ಗ್ರಾಮಸ್ಥರು

ಬಾಗಲಕೋಟೆಯ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಹಿಳಾ ಠಾಣೆ ಪೊಲೀಸರು ಮೂಡಲಗಿ ಠಾಣೆಗೆ ಪ್ರಕರಣವನ್ನು ವರ್ಗಾಯಿಸಿದ್ದರು. ಸ್ವಾಮೀಜಿ ವಿರುದ್ಧ ಪೋಕ್ಸೋ ಕೇಸ್ ದಾಖಸಲಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 1:38 pm, Wed, 6 August 25