AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲಿ 6,975 ಕೋಟಿ ರೂ. ಮೌಲ್ಯದ ಕಾಮಗಾರಿಗೆ ಚಾಲನೆ: ನಿತಿನ್ ಗಡ್ಕರಿಯನ್ನು ಕೊಂಡಾಡಿದ ಸತೀಶ್ ಜಾರಕಿಹೊಳಿ

ಬೆಳಗಾವಿ, ವಿಜಯಪುರ, ಬಾಗಲಕೋಟೆ, ಉತ್ತರ ಕನ್ನಡ, ಕೊಪ್ಪಳ, ರಾಯಚೂರು, ಕಲಬುರಗಿ, ಬೀದರ್ ಸೇರಿದಂತೆ 8 ಜಿಲ್ಲೆಗಳಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಈ ವೇಳೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ನಿತೇನ್ ಗಡ್ಕರಿ ಅವರು ರಸ್ತೆ ಅಭಿವೃದ್ಧಿ ವಿಚಾರದಲ್ಲಿ ಇತಿಹಾಸ ನಿರ್ಮಿಸಿದ್ದಾರೆ. ನಿತಿನ್ ಗಡ್ಕರಿ ಅಂದರೆ ‘ಸಡಕ್ ಕೆ ಭಾಷಾ’ ಎಂದು ಕೊಂಡಾಡಿದ್ದಾರೆ. 

ಬೆಳಗಾವಿಯಲ್ಲಿ 6,975 ಕೋಟಿ ರೂ. ಮೌಲ್ಯದ ಕಾಮಗಾರಿಗೆ ಚಾಲನೆ: ನಿತಿನ್ ಗಡ್ಕರಿಯನ್ನು ಕೊಂಡಾಡಿದ ಸತೀಶ್ ಜಾರಕಿಹೊಳಿ
ಸಚಿವ ಸತೀಶ್ ಜಾರಕಿಹೊಳಿ‌, ಸಚಿವ ನಿತಿನ್ ಗಡ್ಕರಿ
Sahadev Mane
| Updated By: ಗಂಗಾಧರ​ ಬ. ಸಾಬೋಜಿ|

Updated on:Feb 22, 2024 | 3:27 PM

Share

ಬೆಳಗಾವಿ, ಫೆಬ್ರವರಿ 22: 6,975 ಕೋಟಿ ರೂ. ಮೌಲ್ಯದ 400 ಕಿ.ಮೀ. ರಸ್ತೆ ಕಾಮಗಾರಿ ಸೇರಿದಂತೆ ರಾಷ್ಟ್ರೀಯ ಹೆದ್ದಾರಿಯ ವಿವಿಧ ಯೋಜನೆಗಳಿಗೆ ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಬೆಳಗಾವಿ ಸೇರಿ ಉತ್ತರ ಕರ್ನಾಟಕದ ಹಲವು ಯೋಜನೆಗಳಿಗೆ ಚಾಲನೆ ನೀಡಲಾಗಿದೆ. ಈ ವೇಳೆ ಮಾತನಾಡಿದ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ (Satish Jarkiholi), ಕೇಂದ್ರ ಸಚಿವ ನಿತೇನ್ ಗಡ್ಕರಿ ಅವರು ರಸ್ತೆ ಅಭಿವೃದ್ಧಿ ವಿಚಾರದಲ್ಲಿ ಇತಿಹಾಸ ನಿರ್ಮಿಸಿದ್ದಾರೆ. ಅವರನ್ನು ನೋಡಿದರೆ ಹೆಮ್ಮೆ ಆಗುತ್ತದೆ. ನಿತಿನ್ ಗಡ್ಕರಿ ಅಂದರೆ ಸಡಕ್ ಕೆ ಭಾಷಾ ಎಂದು ಕೊಂಡಾಡಿದ್ದಾರೆ.

ಪಕ್ಷಕ್ಕಿಂತ ರಸ್ತೆ ಅಭಿವೃದ್ಧಿ ಕಾರ್ಯ ಮುಖ್ಯ

ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಕೆಲಸ ಮಾಡುತ್ತಾರೆ. ಕಳೆದ 9 ತಿಂಗಳಲ್ಲಿ 5 ಬಾರಿ ಗಡ್ಕರಿ ಅವರನ್ನ ಭೇಟಿ ಮಾಡಿರುವೆ. ರಾಜ್ಯದಲ್ಲಿ ನೆನೆಗುದ್ದಿಗೆ ಬಿದ್ದಿರುವ ಯೋಜನೆಗಳನ್ನ ಕಾರ್ಯರೂಪಕ್ಕೆ ತರಲು ಸೂಚಿಸಿದ್ದಾರೆ. ಅದರಲ್ಲಿ ಕೆಲವೊಂದಿಷ್ಟು ಕಾಮಗಾರಿ ಆರಂಭ ಮಾಡಿದ್ದೇವೆ ಎಂದು ತಿಳಿಸಿದರು.

ಇದನ್ನೂ ಓದಿ: ಉತ್ತರ ಕರ್ನಾಟಕ ಭಾಗದ 8 ಜಿಲ್ಲೆಗಳಿಗೆ ಕೇಂದ್ರದಿಂದ ಭರ್ಜರಿ ಗಿಫ್ಟ್; 376 ಕಿ.ಮೀ. ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ನಿತಿನ್ ಗಡ್ಕರಿ ಶಂಕು ಸ್ಥಾಪನೆ

ಕೇಂದ್ರ ರಾಜ್ಯದಲ್ಲಿ ಬೇರೆ ಬೇರೆ ಪಕ್ಷಗಳ ಸರ್ಕಾರ ಇದ್ದಾಗ ದ್ವೇಷದ ಭಾವನೆ ಇರುತ್ತದೆ. ಆದರೆ ನಿತಿನ್ ಗಡ್ಕರಿ ಅವರ ಸಚಿವಾಲಯದಲ್ಲಿ ಹಾಗಾಗಿಲ್ಲ. ಅದು ನಮಗೆ ನಮ್ಮದೇ ಸರ್ಕಾರ ಎನ್ನುವ ಭಾವನೆ ಬರುತ್ತದೆ. ಪಕ್ಷಕ್ಕಿಂತ ರಸ್ತೆ ಅಭಿವೃದ್ಧಿ ಕಾರ್ಯ ಮುಖ್ಯ. ಇದೇ ಕಾರಣಕ್ಕೆ ಲೋಕೋಪಯೋಗಿ ಇಲಾಖೆಯಿಂದ ಬಿಜೆಪಿ, ಕಾಂಗ್ರೆಸ್ ಶಾಸಕರಿಗೆ ಸಮಾನ ಅನುದಾನ ನೀಡಿದ್ದೇವೆ ಎಂದು ಹೇಳಿದ್ದಾರೆ.

ವಿಶೇಷವಾಗಿ ಬೆಳಗಾವಿ ಜಿಲ್ಲೆಯ ಅಭಿವೃದ್ಧಿ ಬಗ್ಗೆ ನಾವು ಚರ್ಚೆ ಮಾಡಿದ್ದೇವೆ. ಗೋಕಾಕ ಫಾಲ್ಸ್, ಬೆಳಗಾವಿ ನಗರದ ಅಭಿವೃದ್ಧಿಗೆ ಸಹ ಕೊಡುತ್ತೇವೆ. ಕೇಂದ್ರ ಸಾರಿಗೆ ಸಚಿವಾಲಯದಿಂದ ರಾಜ್ಯದ ರಸ್ತೆಗಳು ಸುಧಾರಣೆ ಆಗಬೇಕು. ಈ ರಸ್ತೆಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಆಗಬೇಕು. ಇದರಿಂದ ಅನೇಕ ಉದ್ಯಮಿಗಳು ಬರಬೇಕೆಂದು ಕೇಂದ್ರ ಸರ್ಕಾರ ಕನಸಿದೆ ಎಂದಿದ್ದಾರೆ.

ಇದನ್ನೂ ಓದಿ: Pralhad Joshi: ಕರ್ನಾಟಕ ಸೇರಿದಂತೆ ದೇಶದ ವಿವಿಗಳಿಗೆ ಕೇಂದ್ರದಿಂದ 3600 ಕೋಟಿ ರೂ. ಅನುದಾನ ಬಿಡುಗಡೆ: ಪ್ರಲ್ಹಾದ್ ಜೋಶಿ

ಬೆಳಗಾವಿ, ವಿಜಯಪುರ, ಬಾಗಲಕೋಟೆ, ಉತ್ತರ ಕನ್ನಡ, ಕೊಪ್ಪಳ, ರಾಯಚೂರು, ಕಲಬುರಗಿ, ಬೀದರ್ ಸೇರಿದಂತೆ 8 ಜಿಲ್ಲೆಗಳಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಈ ಎಲ್ಲ ಜಿಲ್ಲೆಗಳ‌ 376 ಕಿ.ಮೀ ಉದ್ದದ ರಸ್ತೆಗಳಿಗೆ 6975 ಕೋಟಿ ರೂ.ಗಳ ಪ್ಯಾಕೇಜ್ ಬಿಡುಗಡೆ ಮಾಡಲಾಗಿದೆ.

ಕಾರ್ಯಕ್ರಮದಲ್ಲಿ ಸಂಸದರಾದ ಅಣ್ಣಾಸಾಹೇಬ್ ಜೊಲ್ಲೆ, ಈರಣ್ಣ ಕಡಾಡಿ, ಮಂಗಳಾ ಅಂಗಡಿ ಅಮರೇಶ ನಾಯಕ್, ಕರಡಿ ಸಂಗಣ್ಣ, ಪಿ.ಸಿ.ಗದ್ದಿಗೌಡರ್ ಉಪಸ್ಥಿತರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:22 pm, Thu, 22 February 24

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ