AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಪರಿಷತ್ ಚುನಾವಣೆಗೆ ದಿನಾಂಕ ಘೋಷಣೆ; ಬೆಳಗಾವಿಯಲ್ಲಿ ಶುರುವಾಯಿತು ಟಿಕೆಟ್ ಲಾಬಿ

ಸಹೋದರ ಚನ್ನರಾಜ ಹಟ್ಟಿಹೊಳಿಗೆ ಟಿಕೆಟ್ ಕೊಡಿಸಲು ಲಕ್ಷ್ಮಿ ಹೆಬ್ಬಾಳ್ಕರ್ ವರಿಷ್ಠರನ್ನ ಭೇಟಿಯಾಗಿದ್ದಾರೆ. ದೆಹಲಿಗೆ ತೆರಳಿ ಕಾಂಗ್ರೆಸ್ ವರಿಷ್ಠರನ್ನು ಭೇಟಿ ಮಾಡಿ ಟಿಕೆಟ್ಗಾಗಿ ಮನವಿ ಮಾಡಿದ್ದಾರೆ.

ವಿಧಾನಪರಿಷತ್ ಚುನಾವಣೆಗೆ ದಿನಾಂಕ ಘೋಷಣೆ; ಬೆಳಗಾವಿಯಲ್ಲಿ ಶುರುವಾಯಿತು ಟಿಕೆಟ್ ಲಾಬಿ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Nov 10, 2021 | 9:19 AM

Share

ಬೆಳಗಾವಿ: ವಿಧಾನಪರಿಷತ್ ಚುನಾವಣೆಗೆ ದಿನಾಂಕ ಘೋಷಣೆ ಆಗುತ್ತಿದ್ದಂತೆ ಬೆಳಗಾವಿಯಲ್ಲಿ ಟಿಕೆಟ್ಗಾಗಿ ಲಾಬಿ ಶುರುವಾಗಿದೆ. ಕೇಂದ್ರ ಚುನಾವಣಾ ಆಯೋಗ ಚುನಾವಣೆ ನಡೆಸಲು ದಿನಾಂಕ ಘೋಷಣೆ ಮಾಡಿದ್ದು, ಡಿಸೆಂಬರ್ 10ಕ್ಕೆ ಮತದಾನ ನಡೆಯಲಿದೆ. ದಿನಾಂಕ ಘೋಷಣೆಯಾದ ಬೆನ್ನಲ್ಲೇ ಜಿಲ್ಲೆಯಲ್ಲಿ ಟಿಕೆಟ್ಗಾಗಿ ಲಾಬಿ ಶುರುವಾಗಿದೆ. ಕಾಂಗ್ರೆಸ್ ಟಿಕೆಟ್ ಬಯಸಿ 7 ಜನ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ತಮ್ಮನಿಗೆ ಟಿಕೆಟ್ ಸಿಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದಾರೆ.

ಸಹೋದರ ಚನ್ನರಾಜ ಹಟ್ಟಿಹೊಳಿಗೆ ಟಿಕೆಟ್ ಕೊಡಿಸಲು ಲಕ್ಷ್ಮಿ ಹೆಬ್ಬಾಳ್ಕರ್ ವರಿಷ್ಠರನ್ನ ಭೇಟಿಯಾಗಿದ್ದಾರೆ. ದೆಹಲಿಗೆ ತೆರಳಿ ಕಾಂಗ್ರೆಸ್ ವರಿಷ್ಠರನ್ನು ಭೇಟಿ ಮಾಡಿ ಟಿಕೆಟ್ಗಾಗಿ ಮನವಿ ಮಾಡಿದ್ದಾರೆ. ಅಲ್ಲದೇ ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಭೇಟಿಯಾಗಿ ಚನ್ನರಾಜ ಹಟ್ಟಿಹೊಳಿ ಮನವಿ ಮಾಡಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಆಪ್ತ ವೀರಕುಮಾರ್ ಪಾಟೀಲ್ ಸಹ ಟಿಕೆಟ್ಗಾಗಿ ಅರ್ಜಿ ಸಲ್ಲಿಸಿದ್ದಾರೆ. ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ಪ್ರಕಾಶ್ ಹುಕ್ಕೇರಿ, ವೀರಕುಮಾರ್ ಪಾಟೀಲ್, ಶಹಜಹಾನ್ ಡೊಂಗರಗಾಂವ್, ಡಾ.ಎನ್.ಎ. ಮಗದುಮ್ಮ, ಸುನಿಲ್ ಹನಮಣ್ಣವರ್, ಕಿರಣ್ ಸಾಧು ಸೇರಿ ಒಟ್ಟು 7 ಜನರು ಕಾಂಗ್ರೆಸ್ ಟಿಕೆಟ್ಗಾಗಿ ಅರ್ಜಿ ಸಲ್ಲಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಎರಡು ಸ್ಥಾನಕ್ಕಾಗಿ ಚುನಾವಣೆ ನಡೆಯಲಿದೆ. ಈ ಪೈಕಿ ಒಂದು ಕ್ಷೇತ್ರದಲ್ಲಿ ಮಾತ್ರ ಸ್ಪರ್ಧಿಸಲು ಕಾಂಗ್ರೆಸ್ ಒಲವು ತೋರಿದೆ.

ಚುನಾವಣೆ ಎದುರಿಸಲು ಬಿಜೆಪಿ ಸಕಲ ಸಿದ್ಧತೆ ಹಾನಗಲ್‌ ಉಪಚುನಾವಣೆಯಲ್ಲಿ ಸೋಲು ಕಂಡ ಬಳಿಕ ಬಿಜೆಪಿ ಎಚ್ಚೆತ್ತುಕೊಂಡಿದೆ. ಸರಣಿ ಚುನಾವಣೆ ಎದುರಿಸಲು ಬಿಜೆಪಿ ಸಕಲ ಸಿದ್ಧತೆ ನಡೆಸುತ್ತಿದೆ. 25 ವಿಧಾನ ಪರಿಷತ್ ಸ್ಥಾನಗಳಿಗೆ ಸ್ಥಳೀಯ ಸಂಸ್ಥೆಗಳ ಮೂಲಕ ಚುನಾವಣೆ ನಡೆಯಲಿದೆ. ಚುನಾವಣೆ ಎದುರಿಸಲು ಬಿಜೆಪಿ ಮುಖಂಡರು ಸಕಲ ಸಿದ್ಧತೆ ನಡೆಸುತ್ತಿದ್ದಾರೆ. ನವೆಂಬರ್ 18 ರಿಂದ ಮೂರ್ನಾಲ್ಕು ದಿನಗಳ ಕಾಲ ಬಿಜೆಪಿ ನಾಯಕರು ಏಕಕಾಲಕ್ಕೆ ಪ್ರವಾಸ ಕೈಗೊಂಡಿದ್ದಾರೆ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಮಾಜಿ ಸಿಎಂ ಜಗದೀಶ್ ಶೆಟ್ಟರ್  ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸಚಿವ ಕೆಎಸ್ ಈಶ್ವರಪ್ಪ ನೇತೃತ್ವದಲ್ಲಿ ನಾಲ್ಕು ತಂಡಗಳಾಗಿ ರಚಿಸಿ ರಾಜ್ಯ ಪ್ರವಾಸ ಮಾಡಲಿದ್ದಾರೆ.

ಮಾಜಿ ಸಿಎಂ ಯಡಿಯೂರಪ್ಪ ನೇತೃತ್ವದ ತಂಡದಲ್ಲಿ ತೇಜಸ್ವಿನಿ ಅನಂತ್ ಕುಮಾರ್, ಶ್ರೀರಾಮುಲು, ಗೋವಿಂದ ಕಾರಜೋಳ, ಎಂ ಬಿ ನಂದೀಶ್ ಇರಲಿದ್ದಾರೆ. ಉತ್ತರ ಕನ್ನಡ, ಹಾವೇರಿ, ಧಾರವಾಡ, ಗದಗ, ಬಾಗಲಕೋಟೆ, ವಿಜಯಪುರ, ಚಿಕ್ಕೋಡಿ, ಬೆಳಗಾವಿಗೆ ತೆರಳಿ ಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ.

ಸಚಿವ ಕೆ ಎಸ್ ಈಶ್ವರಪ್ಪ ನೇತೃತ್ವದ ತಂಡದಲ್ಲಿ ಆರ್ ಅಶೋಕ್, ಶೋಭಾ ಕರಂದ್ಲಾಜೆ, ಎಸ್ ಟಿ ಸೋಮಶೇಖರ್, ಹಾಲಪ್ಪ ಆಚಾರ್, ಎಸ್ ಅಂಗಾರ, ಅರವಿಂದ ಲಿಂಬಾವಳಿ, ಎಂ ಶಂಕರಪ್ಪ ಇರಲಿದ್ದಾರೆ. ಮುಖಂಡರು ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ಮಂಗಳೂರು, ಕೊಡಗು, ಮಂಡ್ಯ, ಚಾಮರಾಜನಗರ, ಹಾಸನಕ್ಕೆ ತೆರಳಿ ಯಾತ್ರೆಯಲ್ಲಿ ಭಾಗವಹಿಸುತ್ತಾರೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದ ತಂಡದ ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರಗಿ, ಬೀದರ್​ಗೆ ತೆರಳಿದರೆ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ನೇತೃತ್ವದ ತಂಡ ದಾವಣಗೆರೆ, ತುಮಕೂರು, ಚಿತ್ರದುರ್ಗ, ರಾಮನಗರ, ಕೋಲಾರ,  ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರಕ್ಕೆ ತೆರಳಿ ಯಾತ್ರೆಯಲ್ಲಿ ಭಾಗಿಯಾಗುತ್ತಾರೆ.

ಇದನ್ನೂ ಓದಿ

Chikkaballapur Earthquake: ಮಿಟ್ಟಹಳ್ಳಿ ಗ್ರಾಮದ ಸುತ್ತಮುತ್ತ ಲಘು ಭೂಕಂಪನ; ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿಗಳಿಂದ ಪರಿಶೀಲನೆ

Chikmagalur Naxals Arrested: ಕರ್ನಾಟಕ ಮೂಲದ ಇಬ್ಬರು ನಕ್ಸಲರು ಕೇರಳದಲ್ಲಿ ಅರೆಸ್ಟ್

Published On - 8:58 am, Wed, 10 November 21