ಇದು ಬೇಲಿಯೇ ಎದ್ದು ಹೋಲ ಮೇಯ್ದ ಕತೆ: ಜಪ್ತಿ ಮಾಡಿದ ಸಾರಾಯಿಯನ್ನೇ ಎಗರಿಸಿದ ಖತರ್ನಾಕ್​ ಅಬಕಾರಿ ಅಧಿಕಾರಿಗಳು, ಸಿಬ್ಬಂದಿ

ಜಪ್ತಿ ಮಾಡಿದ್ದ 753 ಸಾರಾಯಿ ಬಾಕ್ಸ್​ಗಳ ಪೈಕಿ 301 ಬಾಕ್ಸ್‌ಗಳನ್ನೇ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕದ್ದಿದ್ದು, ಜಿಲ್ಲೆಯ ಅಬಕಾರಿ ಅಧಿಕಾರಿಗಳ ಕಾರ್ಯಯಕ್ಕೆ ಮೇಲಾಧಿಕಾರಿಗಳೇ ಶಾಕ್ ಆಗಿದ್ದಾರೆ.

ಇದು ಬೇಲಿಯೇ ಎದ್ದು ಹೋಲ ಮೇಯ್ದ ಕತೆ: ಜಪ್ತಿ ಮಾಡಿದ ಸಾರಾಯಿಯನ್ನೇ ಎಗರಿಸಿದ ಖತರ್ನಾಕ್​ ಅಬಕಾರಿ ಅಧಿಕಾರಿಗಳು, ಸಿಬ್ಬಂದಿ
ಜಪ್ತಿ ಮಾಡಿದ್ದ ಮದ್ಯ ಕದ್ದ ಸಿಬ್ಬಂದಿ
Follow us
ಗಂಗಾಧರ​ ಬ. ಸಾಬೋಜಿ
|

Updated on:Mar 17, 2023 | 3:04 PM

ಬೆಳಗಾವಿ: ಜಪ್ತಿ ಮಾಡಿದ್ದ 753 ಸಾರಾಯಿ (liquor) ಬಾಕ್ಸ್​ಗಳ ಪೈಕಿ 301 ಬಾಕ್ಸ್‌ಗಳನ್ನೇ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕದ್ದಿದ್ದು, ಜಿಲ್ಲೆಯ ಅಬಕಾರಿ ಅಧಿಕಾರಿಗಳ ಕಾರ್ಯಯಕ್ಕೆ ಮೇಲಾಧಿಕಾರಿಗಳೇ ಶಾಕ್ ಆಗಿದ್ದಾರೆ. ಇದು ಒಂದು ರೀತಿಯಲ್ಲಿ ಬೇಲಿಯೇ ಎದ್ದು ಹೋಲ ಮೈಯ್ದಂತಿದೆ. ಕೆಲ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಂದಾಗಿ ಇಡೀ ಅಬಕಾರಿ ಇಲಾಖೆಯೇ ತಲೆ ತಗ್ಗಿಸುವಂತಾಗಿದೆ. 301 ಬಾಕ್ಸ್​ನಲ್ಲಿದ್ದ 32 ಲಕ್ಷ ರೂ. ಮೌಲ್ಯದ ಇಂಪಿರಿಯಲ್ ಬ್ಲೂ, ವಿಸ್ಕಿ ಮದ್ಯದ ಬಾಟಲ್ ಕಳ್ಳತನ ಮಾಡಿದ್ದು, ಜಪ್ತಿಯಾದ ಮಾರನೇ ದಿನ ಐದು ಜನ ಸಿಬ್ಬಂದಿ ಮಾಡಿದ ಕರಾಮತ್ತು ಬೆಳಕಿಗೆ ಬಂದಿದೆ. ಪ್ರಕರಣದಲ್ಲಿ ಭಾಗಿಯಾಗಿದ್ದ ಅಬಕಾರಿ ನಿರೀಕ್ಷಕ ದಾವಲಸಾಬ್ ಸಿಂದೋಗಿ, ಸದಾಶಿವ ಕೋರ್ತಿ, ಅಬಕಾರಿ ಉಪ ನಿರೀಕ್ಷಕಿ ಪುಷ್ಪಾ ಗದಾಡಿ ಸೇರಿದಂತೆ ಐವರು ಸಿಬ್ಬಂದಿ ಮೇಲೆ ಎಫ್ಆಯ್ಆರ್​ ದಾಖಲು ಮಾಡಲಾಗಿದೆ. ಜೊತೆಗೆ ಸಿಬ್ಬಂದಿಗಳನ್ನು ಅಮಾನತು ಮಾಡಿ ಅಬಕಾರಿ ಡಿಸಿ ಆದೇಶ ಹೊರಡಿಸಿದ್ದಾರೆ.

ಚುನಾವಣೆ ನಿಮಿತ್ತ ಅಕ್ರಮವಾಗಿ ಸಾಗಿಸುತ್ತಿದ್ದ ಸಾರಾಯಿಯನ್ನು ಅಬಕಾರಿ ಅಧಿಕಾರಿಗಳು ಮಾ. 7ರಂದು ಜಿಲ್ಲೆಯ ಖಾನಾಪುರ ತಾಲೂಕಿನ ಮೋದೆಕೊಪ್ಪ ಗ್ರಾಮದ ಬಳಿ ಜಪ್ತಿ ಮಾಡಲಾಗಿತ್ತು. 12 ಚಕ್ರದ ಕಂಟೇನರ್ ವಾಹನದಲ್ಲಿ ಗೋವಾದಿಂದ ಸಾಗಿಸುತ್ತಿದ್ದಾಗ 753ಬಾಕ್ಸ್ ಅಕ್ರಮ ಮದ್ಯ ಸಿಕ್ಕಿತ್ತು. ಈ ವೇಳೆ 301ಬಾಕ್ಸ್‌ಗಳನ್ನ ಬಚ್ಚಿಟ್ಟು, ಕೇವಲ 452ಬಾಕ್ಸ್ ಜಪ್ತಿ ಮಾಡಿದ್ದೇವೆ ಎಂದು ಅಬಕಾರಿ ಸಿಬ್ಬಂದಿಗಳು ಸುಳ್ಳು ಕೇಸ್ ದಾಖಲಿಸಿದ್ದಾರೆ.

ಇದನ್ನೂ ಓದಿ: ಕಳ್ಳತನಕ್ಕೆ ಪೊಲೀಸ್ ಕಾನ್ಸ್​ಟೇಬಲ್​ನಿಂದ ಸಹಾಯ ಆರೋಪ; ಪೇದೆ ಯಲ್ಲಪ್ಪ ಸಸ್ಪೆಂಡ್

ಪ್ರಯಾಣಿಕನ ಚಪ್ಪಲಿಯಲ್ಲಿ 69. 40 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ

ಬೆಂಗಳೂರು: ಚಪ್ಪಲಿಯಲ್ಲಿ ಸುಮಾರು 69.40 ಲಕ್ಷ ರೂ. ಮೌಲ್ಯದ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಪ್ರಯಾಣಿಕನನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬ್ಯಾಂಕಾಕ್​​ನಿಂದ ಬೆಂಗಳೂರಿಗೆ ಇಂಡಿಗೋ ವಿಮಾನದ ಮೂಲಕ ಆಗಮಿಸಿದ್ದ ಪ್ರಯಾಣಿಕನನ್ನು ಕಸ್ಟಮ್ಸ್ ಅಧಿಕಾರಿಗಳು ಪರಿಶೀಲನೆ ಮಾಡಿದಾಗ 1.2 ಕೆಜಿ ತೂಕದ ಚಿನ್ನ ಪತ್ತೆಯಾಗಿದೆ. ಸದ್ಯ ವ್ಯಕ್ತಿಯನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಇತ್ತೀಚೆಗೆ ವಿಮಾನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ65 ಲಕ್ಷ ಮೌಲ್ಯದ ಚಿನ್ನ ಜಪ್ತಿ ಮಾಡಿರುವಂತಹ ಘಟನೆ ದೇವನಹಳ್ಳಿ ಬಳಿಯ ಏರ್​ಪೋರ್ಟ್​ನಲ್ಲಿ ನಡೆದಿದೆ.​​

ಕಸ್ಟಮ್ಸ್​ ಅಧಿಕಾರಿಗಳ ಕಾರ್ಯಾಚರಣೆ ಮಾಡಿ ಬಹ್ರೇನ್​​ನಿಂದ ಬೆಂಗಳೂರಿಗೆ G280 ವಿಮಾನದಲ್ಲಿ ಬಂದಿದ್ದ ವ್ಯಕ್ತಿಯನ್ನ ವಶಕ್ಕೆ ಪಡೆದಿದ್ದಾರೆ. ಪ್ರಯಾಣಿಕ ವಿದೇಶದಿಂದ ಸೋಪ್ ಮಾದರಿಯಲ್ಲಿ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದ ಕಸ್ಟಮ್ಸ್​ ಅಧಿಕಾರಿಗಳ ತಂಡ 65 ಲಕ್ಷ ಮೌಲ್ಯದ 1 ಕೆಜಿ 171 ಗ್ರಾಂ ಚಿನ್ನ ಸಮೇತ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದಾರೆ.

ಇದನ್ನೂ ಓದಿ: IPS ಅಧಿಕಾರಿ ಅಂತೇಳಿ 2.5 ಕೋಟಿ ರೂ. ವಂಚನೆ, ಪ್ರೊಬೇಷನರಿ SP ಎಂದು ಕೆಲ ಪೊಲೀಸ್ ಠಾಣೆಗಳಿಗೂ ಭೇಟಿ ಕೊಟ್ಟಿದ್ದ ಖದೀಮ

ಅಕ್ರಮವಾಗಿ ಚಿಂಕೆ ಕೊಂಬು ಮಾರಾಟ; ಆರೋಪಿ ಅರೆಸ್ಟ್

ದಾವಣಗೆರೆ: ಅಕ್ರಮವಾಗಿ ಚಿಂಕೆ ಕೊಂಬು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಚನ್ನಗಿರಿ ಪೊಲೀಸ್ ಅರಣ್ಯ ಸಂಚಾರಿ ದಳ ಬಂಧಿಸುವಲ್ಲಿ ಯಶಸ್ವಿಯಾಗಿದೆ. ಕಾರವಾರ ಜಿಲ್ಲೆಯ ಶಿರಸಿ ತಾಲೂಕಿನ ಮುಡಗೋಡು ಮಳಲಿ ಗ್ರಾಮದ ನಿವಾಸಿ ಮಂಜುನಾಥ (32) ಬಂಧಿತ ಆರೋಪಿಯಾಗಿದ್ದು, ಈತನಿಂದ ಚಿಂಕೆಯ ಒಂದು ಕೊಂಬನ್ನು ವಶಕ್ಕೆ ಪಡೆಯಲಾಗಿದೆ. ಜಿಲ್ಲೆಯ ಚನ್ಮಗಿರಿ ಪಟ್ಟಣದಲ್ಲಿ ಜಿಂಕೆ ಕೊಂಬು ಮಾರಾಟ ಮಾಡುವಾಗ ಮಂಜುನಾಥ್ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಕಾರ್ಯಾಚರಣೆ ವೇಳೆ ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ. ಈ ಹಿಂದೆ ಕೂಡಾ ಹಲವಾರು ಪ್ರಕರಣದಲ್ಲಿ ಭಾಗಿ ಆಗಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಬಂಧಿತ ಆರೋಪಿಯನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:03 pm, Fri, 17 March 23

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್