ಬೆಳಗಾವಿ: ಸಿಬಿಐ ದಾಳಿಯಾದ ಕೆಲವೇ ದಿನಗಳಲ್ಲಿ ಕಂಟೋನ್ಮೆಂಟ್ ಬೋರ್ಡ್ ಸಿಇಒ ಅನುಮಾನಾಸ್ಪದ ಸಾವು

2019ರ ಉದ್ಯೋಗಿಗಳ ನೇಮಕಾತಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಕಂಟೋನ್ಮೆಂಟ್ ಬೋರ್ಡ್ ಕಚೇರಿ ಮೇಲೆ ಸಿಬಿಐ ಇತ್ತೀಚೆಗೆ ದಾಳಿ ನಡೆಸಿತ್ತು. ಇದಾದ ಕೆಲವೇ ದಿನಗಳಲ್ಲಿ ಕಂಟೋನ್ಮೆಂಟ್ ಬೋರ್ಡ್ ಸಿಇಒ ಅವರ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ.

ಬೆಳಗಾವಿ: ಸಿಬಿಐ ದಾಳಿಯಾದ ಕೆಲವೇ ದಿನಗಳಲ್ಲಿ ಕಂಟೋನ್ಮೆಂಟ್ ಬೋರ್ಡ್ ಸಿಇಒ ಅನುಮಾನಾಸ್ಪದ ಸಾವು
ಸಾಂದರ್ಭಿಕ ಚಿತ್ರ
Edited By:

Updated on: Nov 25, 2023 | 6:26 PM

ಬೆಳಗಾವಿ, ನವೆಂಬರ್ 25: ಬೆಳಗಾವಿ ದಂಡು ಮಂಡಳಿಯ (Belagavi Cantonment Board) ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಕೆ ಆನಂದ್ (K Anand) ಅವರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಅವರ ಮೃತದೇಹ ಶನಿವಾರ ಬೆಳಗ್ಗೆ ದಂಡು ಮಂಡಳಿಯ ಕ್ಯಾಂಪಸ್​​ನಲ್ಲಿರುವ ಅಧಿಕೃತ ಕ್ವಾರ್ಟರ್ಸ್​ನಲ್ಲಿ ಪತ್ತೆಯಾಗಿದೆ. ಚೆನ್ನೈ ಮೂಲದ ಐಡಿಇಎಸ್ ಶ್ರೇಣಿಯ ಅಧಿಕಾರಿ ಆನಂದ್ ಅವರು (40) ಸುಮಾರು ಒಂದೂವರೆ ವರ್ಷದ ಹಿಂದೆ ನೇಮಕಗೊಂಡಿದ್ದರು. ಅವರು ಒಂಟಿಯಾಗಿ ವಾಸವಾಗಿದ್ದರು.

ಶನಿವಾರ ಬೆಳಗ್ಗೆ ನಿತ್ಯ ಕೆಲಸ ನಿಮಿತ್ತ ಸಿಬ್ಬಂದಿ ಕ್ವಾರ್ಟರ್ಸ್‌ಗೆ ಬಂದಾಗ ಆನಂದ್ ಶವವಾಗಿ ಪತ್ತೆಯಾಗಿದ್ದಾರೆ. ಅವರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

2019ರ ಉದ್ಯೋಗಿಗಳ ನೇಮಕಾತಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಕಂಟೋನ್ಮೆಂಟ್ ಬೋರ್ಡ್ ಕಚೇರಿ ಮೇಲೆ ಸಿಬಿಐ ಇತ್ತೀಚೆಗೆ ದಾಳಿ ನಡೆಸಿತ್ತು.

ಇದನ್ನೂ ಓದಿ: ನೇಮಕಾತಿ ಅಕ್ರಮ ಆರೋಪ: ಬೆಳಗಾವಿ ಕಂಟೋನ್ಮೆಂಟ್ ಬೋರ್ಡ್ ಕಚೇರಿ ಮೇಲೆ ಸಿಬಿಐ ದಾಳಿ

ನೇಮಕಾತಿ ಅಕ್ರಮ ವಿಚಾರ ಇತ್ತೀಚೆಗೆ ಗಂಭೀರ ಸ್ವರೂಪ ಪಡೆದುಕೊಂಡಿದ್ದು, ತನಿಖೆಗೆ ಖುದ್ದು ಸಿಬಿಐ ಅಧಿಕಾರಿಗಳೇ ಬಂದಿದ್ದರು. ಸ್ಥಳೀಯ ಮಟ್ಟದ ಅಧಿಕಾರಿಗಳನ್ನೂ ಸಿಬಿಐ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದರು. ದಂಡು ಮಂಡಳಿಯ ವಿರುದ್ಧ, ಕ್ಲರ್ಕ್ ಹಾಗೂ ಸ್ಟೇನೋಗ್ರಾಫರ್ ಪರೀಕ್ಷೆಯಲ್ಲೂ ಸಹ ಅಕ್ರಮದ ಆರೋಪ ಕೇಳಿಬಂದಿತ್ತು. ಅದರ ಬೆನ್ನಲ್ಲೇ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದು ಮಹತ್ವದ ದಾಖಲೆಗಳನ್ನೂ ಪರಿಶೀಲನೆ ನಡೆಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:03 pm, Sat, 25 November 23

ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More
Loading...
Unable to load recommendations.
Follow Us