ಬೆಳಗಾವಿ: ಮದುವೆ ಊಟ ಮಾಡಿ 100ಕ್ಕೂ ಹೆಚ್ಚು ಜನ ಅಸ್ವಸ್ಥ: ದೃಷ್ಟಿ ಕಳೆದುಕೊಂಡ ಓರ್ವ ವ್ಯಕ್ತಿ

ಸೋಮವಾರ ಊಟ ಮಾಡಿ ಮನೆಗೆ ವಾಪಾಸ್ ಆದ ಬಳಿಕ ವಾಂತಿ ಭೇದಿ ಕಾಣಿಸಿಕೊಂಡಿತ್ತು. ನಂತರ ಏಕಾಏಕಿ ದೃಷ್ಟಿಯೇ ಕಾಣದೆ ಕಂಗಾಲಾದ ಬಾಬಾಸಾಹೇಬ ಅವರನ್ನು ಆರಂಭದಲ್ಲಿ ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಇಂದು(ಆ.30) ಹೆಚ್ಚಿನ ಚಿಕಿತ್ಸೆಗೆ ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ಬಾಬಾಸಾಹೇಬ್ ಅವರನ್ನು ಶಿಪ್ಟ್ ಮಾಡಿ ಚಿಕಿತ್ಸೆ ಮುಂದುವರೆಸಲಾಗಿದೆ.

ಬೆಳಗಾವಿ: ಮದುವೆ ಊಟ ಮಾಡಿ 100ಕ್ಕೂ ಹೆಚ್ಚು ಜನ ಅಸ್ವಸ್ಥ: ದೃಷ್ಟಿ ಕಳೆದುಕೊಂಡ ಓರ್ವ ವ್ಯಕ್ತಿ
ದೃಷ್ಟಿ ಕಳೆದುಕೊಂಡ ವ್ಯಕ್ತಿ
Follow us
Sahadev Mane
| Updated By: ಕಿರಣ್ ಹನುಮಂತ್​ ಮಾದಾರ್

Updated on:Aug 30, 2023 | 6:51 PM

ಬೆಳಗಾವಿ, ಆ.30: ಜಿಲ್ಲೆಯ ಚಿಕ್ಕೋಡಿ(Chikkodi) ತಾಲೂಕಿನ ಹಿರೆಕೋಡಿ ಗ್ರಾಮದಲ್ಲಿ ನಡೆದಿದ್ದ ಮದುವೆ ಮನೆಯಲ್ಲಿ ಊಟ ಮಾಡಿ ನೂರಕ್ಕೂ ಹೆಚ್ಚು ಜನ ಅಸ್ವಸ್ಥರಾಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಓರ್ವ ವ್ಯಕ್ತಿ ದೃಷ್ಟಿ ಕಳೆದುಕೊಂಡಿದ್ದಾರೆ. ಬಾಬಾ ಸಾಹೇಬ್ ಬೇಗ್(37) ದೃಷ್ಟಿ ಕಳೆದುಕೊಂಡವರು. ಹೌದು, ಸೋಮವಾರ ಊಟ ಮಾಡಿ ಮನೆಗೆ ವಾಪಾಸ್ ಆದ ಬಳಿಕ ವಾಂತಿ ಭೇದಿ (Food Poison) ಕಾಣಿಸಿಕೊಂಡಿತ್ತು. ನಂತರ ಏಕಾಏಕಿ ದೃಷ್ಟಿಯೇ ಕಾಣದೆ ಕಂಗಾಲಾದ ಬಾಬಾಸಾಹೇಬ ಅವರನ್ನು ಆರಂಭದಲ್ಲಿ ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಇಂದು(ಆ.30) ಹೆಚ್ಚಿನ ಚಿಕಿತ್ಸೆಗೆ ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ಬಾಬಾಸಾಹೇಬ್ ಅವರನ್ನು ಶಿಪ್ಟ್ ಮಾಡಿ ಚಿಕಿತ್ಸೆ ಮುಂದುವರೆಸಲಾಗಿದೆ.

ಫುಡ್‌ ಪಾಯಿಸನ್​ಯಿಂದ ದೃಷ್ಟಿ ಕಳೆದುಕೊಂಡ ವ್ಯಕ್ತಿ

ಇನ್ನು ಈ ಕುರಿತು ಮಾತನಾಡಿದ ಬೆಳಗಾವಿಯ ಬಿಮ್ಸ್ ವೈದ್ಯಕೀಯ ಅಧೀಕ್ಷಕ ಎ.ಬಿ.ಪಾಟೀಲ್ ‘ ಇಂದು ಮುಂಜಾನೆ ಬಾಬಾಸಾಹೇಬ್‌ ಎಂಬ ವ್ಯಕ್ತಿ ಅಡ್ಮಿಟ್‌ ಆಗಿದ್ದರು. ಫುಡ್‌ ಪಾಯಿಸನ್ ಆಗಿ ದೃಷ್ಟಿ ಹೋಗಿದೆ ಎಂದು ಹೇಳಿದ್ದಾರೆ. ಕಣ್ಣು ಫಂಡೋಸ್ಕೋಪಿಕ್ ಮಾಡಿ ನೋಡಿದಾಗ ನಾರ್ಮಲ್‌ ಇದೆ. ಯಾವ ಕಾರಣಕ್ಕೆ ದೃಷ್ಟಿ ಹೋಗಿದೆ ಎನ್ನುವುದು ನಿಖರವಾಗಿ ತಿಳಿದಿಲ್ಲ. ನೇತ್ರ ತಜ್ಞರು ಬಾಬಾಸಾಹೇಬ್‌ರನ್ನು ಪರೀಕ್ಷಿಸಿದ್ದಾರೆ. ಬಾಬಾಸಾಹೇಬ್‌ಗೆ ಎಂಆರ್‌ಐ ನಡೆಸುವಂತೆ ಸಲಹೆ ಮಾಡಿದ್ದಾರೆ. ಎಂಆರ್‌ಐ ನಡೆಸಿದ ಬಳಿಕ ನಿಖರ ಕಾರಣ ತಿಳಿದು ಬರಲಿದೆ ಎಂದರು.

ಇದನ್ನೂ ಓದಿ:ಚಿಕ್ಕೋಡಿ: ಮದುವೆ ಊಟ ತಿಂದ 100ಕ್ಕೂ ಹೆಚ್ಚು ಜನರಿಗೆ ವಾಂತಿ-ಭೇದಿ; ಗ್ರಾಮದಲ್ಲೇ ಬೀಡುಬಿಟ್ಟ ಆರೋಗ್ಯ ಇಲಾಖೆ ಸಿಬ್ಬಂದಿ

ಘಟನೆ ವಿವರ

ಆಗಸ್ಟ್​ 28 ರಂದು ಪಟೇಲ್ ಕುಟುಂಬದ ಮದುವೆ ಸಮಾರಂಭದಲ್ಲಿ ಸಸ್ಯಾಹಾರ ಹಾಗೂ ಮಾಂಸಾಹಾರ ಊಟದ ವ್ಯವಸ್ಥೆ ಮಾಡಲಾಗಿತ್ತು. ಬಳಿಕ ಊಟ ಮಾಡಿ ಮನೆಗೆ ವಾಪಾಸ್ ಆಗುತ್ತಿದ್ದಂತೆ ಕೆಲ ಜನರಿಗೆ ವಾಂತಿ-ಭೇದಿಯಾಗಿತ್ತು. ವಿಷಯ ತಿಳಿಯುತ್ತಿದ್ದಂತೆ ಹಿರೇಕೋಡಿ ಗ್ರಾಮಕ್ಕೆ ಆರೋಗ್ಯ ಇಲಾಖೆ ಸಿಬ್ಬಂದಿ ದೌಡಾಯಿಸಿದ್ದು, ಸರ್ಕಾರಿ ಶಾಲೆಯಲ್ಲಿಯೇ ತಪಾಸಣೆ ನಡೆಸುತ್ತಿದ್ದರು. ಜೊತೆಗೆ ಅಷ್ಟೇ ಅಲ್ಲದೇ ಗ್ರಾಮದ ಮನೆ ಮನೆಗೆ ತೆರಳಿ ಜನರ ಆರೋಗ್ಯ ತಪಾಸಣೆಗೆ ನಿರ್ಧರಿಸಿದ್ದರು. ಹಾಗೂ ತೀವ್ರ ಅಸ್ವಸ್ಥಗೊಂಡವರನ್ನು ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿತ್ತು.

ಮದುವೆ ಸಮಾರಂಭಕ್ಕೆ ಆಗಮಿಸಿದ್ದ ಮಹಾರಾಷ್ಟ್ರದ ಮಿರಜ್‌ ಸಂಬಂಧಿಕರು

ಹೌದು, ಮದುವೆ ಸಮಾರಂಭಕ್ಕೆ ಮಹಾರಾಷ್ಟ್ರದ ಮಿರಜ್‌ನಿಂದ ಆಗಮಿಸಿದ್ದರು. ಅವರಿಗೂ ಕೂಡ ವಾಂತಿ ಬೇಧಿ ಕಾಣಿಸಿಕೊಂಡ ಬಗ್ಗೆ ಮಾಹಿತಿ ಸಿಕ್ಕಿದೆ. ಇನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಫಾತಿಮಾ ಎಂಬ ಮಹಿಳೆ ಟಿವಿ9 ಕ್ಯಾಮರಾ ಮುಂದೆ ಕಣ್ಣೀರು ಹಾಕಿದ್ದರು. ಹಿರೇಕೋಡಿಯಲ್ಲಿ ನಿನ್ನೆ ನಡೆದಿದ್ದ ಮದುವೆ ಸಮಾರಂಭದಲ್ಲಿ ಊಟ ಸೇವಿಸಿ ಮನೆಗೆ ವಾಪಸ್ ಆದ ಬಳಿಕ ವಾಂತಿ ಬೇಧಿಯಾಗಿದೆ ಎಂದು ಅಳಲು ತೋಡಿಕೊಂಡಿದ್ದರು.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:45 pm, Wed, 30 August 23

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್