Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ಭೀಕರ ರಸ್ತೆ ಅಪಘಾತ; ಎಎಸ್ಐ ಸಾವು, ಪಿಎಸ್ಐ ಸಸ್ಪೆಂಡ್

ಭೀಕರ ರಸ್ತೆ ಅಪಘಾತದಲ್ಲಿ ಬೈಲಹೊಂಗಲ(Bailhongal) ತಾಲೂಕಿನ ದೊಡವಾಡ ಠಾಣೆಯಲ್ಲಿ ಎಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಎಎಸ್ಐ(ASI) ಯರಗಟ್ಟಿ ಪಟ್ಟಣದ ವಿಜಯಕಾಂತ ಮಿಕಲಿ (51) ಸಾವನ್ನಪ್ಪಿದ್ದಾರೆ. ಬೆಳಗಾವಿ ‌ಎಸ್‌ಪಿ ಡಾ.‌ಭೀಮಾಶಂಕರ್ ಗುಳೇದ್ ಅವರು ಎಲ್ಲ ಪೊಲೀಸರು ಹೆಲ್ಮೆಟ್ ಧರಿಸುವುದು ಕಡ್ಡಾಯಗೊಳಿಸಿದ್ದರು. ಆದರೆ, ಹೆಲ್ಮೆಟ್ ಧರಿಸದೇ ಬೈಕ್ ಚಲಾಯಿಸಿದ್ದಕ್ಕೆ ರಸ್ತೆ ಅಪಘಾತದಲ್ಲಿ ಎಎಸ್ಐ ಮೃತಪಟ್ಟಿದ್ದಾರೆ.

ಬೆಳಗಾವಿ: ಭೀಕರ ರಸ್ತೆ ಅಪಘಾತ; ಎಎಸ್ಐ ಸಾವು, ಪಿಎಸ್ಐ ಸಸ್ಪೆಂಡ್
ಬೆಳಗಾವಿ ರಸ್ತೆ ಅಪಘಾತ ಎಎಸ್​ಐ ಸಾವು
Follow us
Sahadev Mane
| Updated By: ಕಿರಣ್ ಹನುಮಂತ್​ ಮಾದಾರ್

Updated on:Mar 17, 2024 | 3:41 PM

ಬೆಳಗಾವಿ, ಮಾ.17: ಭೀಕರ ರಸ್ತೆ ಅಪಘಾತದಲ್ಲಿ ಬೈಲಹೊಂಗಲ(Bailhongal) ತಾಲೂಕಿನ ದೊಡವಾಡ ಠಾಣೆಯಲ್ಲಿ ಎಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಎಎಸ್ಐ(ASI) ಯರಗಟ್ಟಿ ಪಟ್ಟಣದ ವಿಜಯಕಾಂತ ಮಿಕಲಿ (51) ಸಾವನ್ನಪ್ಪಿದ್ದಾರೆ. ಬೆಳಗಾವಿ ‌ಎಸ್‌ಪಿ ಡಾ.‌ಭೀಮಾಶಂಕರ್ ಗುಳೇದ್ ಅವರು ಎಲ್ಲ ಪೊಲೀಸರು ಹೆಲ್ಮೆಟ್ ಧರಿಸುವುದು ಕಡ್ಡಾಯಗೊಳಿಸಿದ್ದರು. ಆದರೆ, ಹೆಲ್ಮೆಟ್ ಧರಿಸದೇ ಬೈಕ್ ಚಲಾಯಿಸಿದ್ದಕ್ಕೆ ರಸ್ತೆ ಅಪಘಾತದಲ್ಲಿ ಎಎಸ್ಐ ಮೃತಪಟ್ಟಿದ್ದಾರೆ. ಈ ಹಿನ್ನಲೆ ಮೇಲಾಧಿಕಾರಿಗಳ ನಿರ್ದೇಶನ ಸಮರ್ಪಕವಾಗಿ ಅನುಷ್ಠಾನಗೊಳಿಸದೇ ನಿರ್ಲಕ್ಷ್ಯ ಆರೋಪ ಕೇಳಿಬಂದಿದ್ದು, ಈ ಕಾರಣಕ್ಕೆ ‌ದೊಡವಾಡ ಠಾಣೆ ‌ಪಿಎಸ್ಐ ನಂದೀಶ್ ಅಮಾನತು ಮಾಡಿ ಎಸ್ಪಿ ಆದೇಶಿಸಿದ್ದಾರೆ.

ಟಿಪ್ಪರ್​ ಡಿಕ್ಕಿ; ಇಬ್ಬರು ಬೈಕ್​ ಸವಾರರು ಸಾವು

ದಾವಣಗೆರೆ: ಜಿಲ್ಲೆಯ ಹರಿಹರ ತಾಲೂಕಿನ ಹನಗವಾಡಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್​ಗೆ ಹಿಂದಿನಿಂದ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಾಕೇಶ್(22) ಮತ್ತು ಆಕಾಶ್(23) ಮೃತ ರ್ದುದೈವಿಗಳು. ಟಿಪ್ಪರ್ ಲಾರಿ ಚಾಲಕನ ಅಜಾಗರೂಕತೆಯಿಂದ ಈ ದುರ್ಘಟನೆ ನಡೆದಿದ್ದು, ಬಾಳಿ ಬದುಕಬೇಕಾದ ಜೀವಗಳು ಬಲಿಯಾಗಿದೆ. ಮೃತದೇಹವನ್ನು ಹರಿಹರ ತಾಲ್ಲೂಕು ಆಸ್ಪತ್ರೆ ಶವಗಾರಕ್ಕೆ ರವಾನೆ ಮಾಡಲಾಗಿದ್ದು, ಹರಿಹರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:ತುಕಾಲಿ ಸಂತೋಷ್ ಕಾರು ಅಪಘಾತ ಪ್ರಕರಣ; ಚಿಕಿತ್ಸೆ ಫಲಿಸದೆ ಆಟೋ ಚಾಲಕ ಸಾವು

2 ಕಾರುಗಳ ನಡುವೆ ಅಪಘಾತ, ಇಬ್ಬರು ಸ್ಥಳದಲ್ಲೇ ದುರ್ಮರಣ

ಕಲಬುರಗಿ: ಎರಡು ಕಾರುಗಳ ನಡುವೆ ಅಪಘಾತವಾಗಿ ಇಬ್ಬರು ಸ್ಥಳದಲ್ಲೇ ಮೃತರಾದ ಘಟನೆ ಕಲಬುರಗಿ ಜಿಲ್ಲೆಯ ಶಹಬಾದ್ ತಾಲೂಕಿನ ಭಂಕೂರ ಬಳಿ ನಡೆದಿದೆ. ಸ್ವಿಫ್ಟ್ ಕಾರಿನಲ್ಲಿದ್ದ ಜಾಹೀದ್ ಪಠಾಣ್(30), ಶಾಕೀರ್(20) ಮೃತರು. ಓರ್ವನ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಲಬುರಗಿಯಿಂದ ಯಾದಗಿರಿಗೆ ಹೋಗುತ್ತಿದ್ದ ವೇಳೆ ಫ್ಟ್ ಮತ್ತು ಸ್ಕ್ವಾರ್ಪಿಯೋ ಕಾರು ಮಧ್ಯೆ ಅಪಘಾತವಾಗಿದೆ. ಈ ಕುರಿತು ಶಹಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:33 pm, Sun, 17 March 24

Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ