Belagavi: ಬೆಳಗಾವಿಯನ್ನ ಕೇಂದ್ರಾಡಳಿತ ಪ್ರದೇಶ ಮಾಡಿ; ಮರಾಠಿ ಸಾಹಿತ್ಯ ಸಮ್ಮೇಳನದಲ್ಲಿ ಒತ್ತಾಯ
ಬೆಳಗಾವಿ ತಾಲೂಕಿನ ಬೆಳಗುಂದಿಯಲ್ಲಿ ರವಳನಾಥ ಪಂಚಕ್ರೋಶಿ ಸಾಹಿತ್ಯ ಅಕಾಡೆಮಿ ವತಿಯಿಂದ ಮರಾಠಿ ಸಾಹಿತ್ಯ ಸಮ್ಮೇಳನ ನಡೆಸಿ, ಬೆಳಗಾವಿಯನ್ನ ಕೇಂದ್ರಾಡಳಿತ ಪ್ರದೇಶ ಮಾಡಿ, ಇಲ್ಲ ಮರಾಠಿಯಲ್ಲಿ ದಾಖಲೆ ನೀಡಿ ಎಂದಿದ್ದಾರೆ.
ಬೆಳಗಾವಿ: ತಾಲೂಕಿನ ಬೆಳಗುಂದಿಯಲ್ಲಿ ರವಳನಾಥ ಪಂಚಕ್ರೋಶಿ ಸಾಹಿತ್ಯ ಅಕಾಡೆಮಿ ವತಿಯಿಂದ ಮರಾಠಿ ಸಾಹಿತ್ಯ ಸಮ್ಮೇಳನ ನಡೆಸುವ ಮೂಲಕ ಬೆಳಗಾವಿಯನ್ನ ಕೇಂದ್ರಾಡಳಿತ ಪ್ರದೇಶ ಮಾಡಿ, ಇಲ್ಲ ಮರಾಠಿ ಭಾಷೆಯಲ್ಲಿ ದಾಖಲೆ ನೀಡಿ ಎಂದು ಮರಾಠಿ ಸಾಹಿತ್ಯ ಸಮ್ಮೇಳನದಲ್ಲಿ ನಾಡದ್ರೋಹಿ ನಿರ್ಣಯ ಅಂಗೀಕಾರ ಮಾಡಿದ್ದಾರೆ.
ಇನ್ನು ಮರಾಠಿ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ನೀಡಿದ್ದ ಎಂಇಎಸ್ ಮುಖಂಡ ಶಿವಾಜಿ ಸುಂಟಕರ್ ಮಾತನಾಡಿ ಕರ್ನಾಟಕ ಮಹಾರಾಷ್ಟ್ರ ಗಡಿವಿವಾದ ಇತ್ಯರ್ಥವಾಗುವವರೆಗೂ ಗಡಿಭಾಗವನ್ನ ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಲಿ.ಇಲ್ಲವೇ ಗಡಿಭಾಗದಲ್ಲಿ ಮರಾಠಿ ಭಾಷಿಕರಿಗೆ ಮರಾಠಿ ಭಾಷೆಯಲ್ಲಿ ಸರ್ಕಾರಿ ದಾಖಲಾತಿ ನೀಡಲಿ. ಈ ಕುರಿತು ಕೇಂದ್ರ ಸರ್ಕಾರ ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಲಿ ಎಂದು ಹೇಳಿದ್ದಾರೆ.
ಅಷ್ಟೇ ಅಲ್ಲದೇ ಮಹಾರಾಷ್ಟ್ರ ಸರ್ಕಾರ ಮರಾಠಿ ಸಾಹಿತ್ಯ ಸಮ್ಮೇಳನಕ್ಕೆ ಅನುದಾನ ನೀಡಬೇಕು ಎಂದು ಆಗ್ರಹ ಮಾಡಿದ್ದಾರೆ. ಇನ್ನು ಮರಾಠಿ ಸಾಹಿತ್ಯ ಸಮ್ಮೇಳನದ ನಿರ್ಣಯಕ್ಕೆ ಕನ್ನಡಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸುವ ಮೂಲಕ ಮರಾಠಿ ಸಾಹಿತ್ಯ ಸಮ್ಮೇಳನ ಆಯೋಜಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹ ಮಾಡಿದ್ದಾರೆ.
ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:00 am, Mon, 12 December 22