ಬೆಳಗಾವಿ: ಸಾರ್ವಜನಿಕವಾಗಿ ಮಹಿಳೆಯ ಬಟ್ಟೆ ಹರಿದು ಹಾಕಿ ಹಲ್ಲೆ, ಕುಂದಾ ನಗರಿಯಲ್ಲಿ ಮತ್ತೊಂದು ಅಮಾನವೀಯ ಘಟನೆ

ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡಿದ ನೀಚ ಕೃತ್ಯಕ್ಕೆ ವರ್ಷವಾಗುವ ಮುನ್ನವೇ ಮಹಿಳೆಯೊಬ್ಬರನ್ನು ಹಲ್ಲೆ ಮಾಡಿ, ಸಾರ್ವಜನಿಕವಾಗಿ ಆಕೆಯ ಬಟ್ಟೆಯನ್ನು ಹರಿದುಹಾಕಿದ ಘಟನೆ ವಡ್ಡರವಾಡಿಯಲ್ಲಿ ನಡೆದಿದೆ. ಆರೋಪಿಗಳ ವಿರುದ್ಧ ಮಾಳಮಾರುತಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳಗಾವಿ: ಸಾರ್ವಜನಿಕವಾಗಿ ಮಹಿಳೆಯ ಬಟ್ಟೆ ಹರಿದು ಹಾಕಿ ಹಲ್ಲೆ, ಕುಂದಾ ನಗರಿಯಲ್ಲಿ ಮತ್ತೊಂದು ಅಮಾನವೀಯ ಘಟನೆ
ಬೆಳಗಾವಿ: ಸಾರ್ವಜನಿಕವಾಗಿ ಮಹಿಳೆಯ ಬಟ್ಟೆ ಹರಿದು ಹಾಕಿ ಹಲ್ಲೆ
Follow us
Sahadev Mane
| Updated By: Ganapathi Sharma

Updated on: Nov 16, 2024 | 9:14 AM

ಬೆಳಗಾವಿ, ನವೆಂಬರ್ 16: ಕುಂದಾ ನಗರಿ ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. ಬೆಳಗಾವಿಯ ವಡ್ಡರವಾಡಿಯಲ್ಲಿ ವೇಶ್ಯಾವಾಟಿಕೆಯ ಆರೋಪ ಹೊರಿಸಿ ಮಹಿಳೆಯೊಬ್ಬರ ಮೇಲೆ ಹಲ್ಲೆ ಮಾಡಿದ್ದಲ್ಲದೆ, ಸಾರ್ವಜನಿಕವಾಗಿ ಬಟ್ಟೆ ಹರಿದು ಹಾಕಲಾಗಿದೆ. ನೆರೆ ಮನೆಯವರೇ ಹಲ್ಲೆ ಮಾಡಿದ್ದಾರೆ ಎನ್ನಲಾಗಿದ್ದು, ಕೃತ್ಯದ ವಿಡಿಯೋ ಮೊಬೈಲ್​ ಫೋನ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಆರಂಭದಲ್ಲಿ ದೂರು ದಾಖಲಿಸಲು ಪೊಲೀಸರು ಹಿಂದೇಟು ಹಾಕಿದ್ದರು ಎಂಬ ಆರೋಪವೂ ಕೇಳಿ ಬಂದಿದ್ದು, ಸದ್ಯ ಮಾಳಮಾರುತಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಡ್ಡರವಾಡಿಯಲ್ಲಿ ನಡೆದಿದ್ದೇನು?

ಬೆಳಗಾವಿಯ ವಡ್ಡರವಾಡಿಯ ಮನೆಯೊಂದರಲ್ಲಿ ಬಾಲಕಿಯೊಬ್ಬಳ ಜತೆ ನಾಲ್ವರು ನಾಲ್ಕು ವರ್ಷಗಳಿಂದ ವಾಸವಾಗಿದ್ದಾರೆ. ಅಲ್ಲೇ ಪಕ್ಕದಲ್ಲಿ ವಾಸವಿರುವ ಮತ್ತೊಂದು ಕುಟುಂಬದವರು, ಮಹಿಳೆಯ ವಿರುದ್ಧ ವೇಶ್ಯಾವಾಟಿಕೆಯ ಆರೋಪ ಮಾಡಿದ್ದಾರೆ. ಅಷ್ಟೇ ಅಲ್ಲದೆ, ಮನೆಗೆ ನುಗ್ಗಿ ತಾಯಿ, ಮಗಳನ್ನು ಹೊರಗೆ ಎಳೆದು ತಂದು ಹಲ್ಲೆ ಮಾಡಿ ಅಟ್ಟಹಾಸ ಮೆರೆದಿದ್ದಾರೆ.

ಹಲ್ಲೆಕೋರರ ಆರೋಪವೇನು?

ಸಂಬಂಧ ಇಲ್ಲದವರೆಲ್ಲಾ ಆ ಮಹಿಳೆಯರ ಮನೆಗೆ ಬಂದು ಹೋಗುತ್ತಾರೆ. ಮಹಿಳೆಯರು ವೇಶ್ಯಾವಾಟಿಕೆ ದಂಧೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ ನೆರೆ ಮನೆಯವರು ತಾಯಿ-ಮಗಳನ್ನ ಮನೆ ಬಿಡಿಸಲು ಜಗಳ ತೆಗೆದಿದ್ದಾರೆ. ಜಗಳ ವಿಕೋಪಕ್ಕೆ ತಿರುಗಿದ್ದು, ಸಾರ್ವಜನಿಕವಾಗಿ ಮಹಿಳೆಯ ಬಟ್ಟೆ ಹರಿದು ಹಾಕಿ ಹಲ್ಲೆ ಮಾಡಲಾಗಿದೆ. ಘಟನೆಯ ದೃಶ್ಯ ಮೊಬೈಲ್ ಫೋನ್​ನಲ್ಲಿ ರೆಕಾರ್ಡ್ ಆಗಿದೆ.

ಹಲ್ಲೆಗೊಳಗಾದ ಬಳಿಕ ಮಹಿಳೆಯು ದೂರು ನೀಡಲು ಸಮೀಪದ ಮಾಳಮಾರುತಿ ಪೊಲೀಸ್ ಠಾಣೆಗೆ ತೆರಳಿದ್ದರು. ಆದರೆ, 2 ದಿನ ಪೊಲೀಸ್ ಠಾಣೆಗೆ ಅಲೆದರೂ ದೂರು ಸ್ವೀಕರಿಸಲು ನಿರಾಕರಿಸಲಾಗಿತ್ತು ಎಂಬ ಆರೋಪ ಕೇಳಿಬಂದಿದೆ. ಹೀಗಾಗಿ ಮಹಿಳೆ, ‘ಜೀವ ಭಯ ಇದೆ, ರಕ್ಷಣೆ ಕೊಡಿ’ ಎಂದು ಮನವಿ ಬೆಳಗಾವಿ ಕಮಿಷನರ್​ಗೆ ದೂರು ನೀಡಿದ್ದರು. ನಂತರ ಇದೀಗ ಕಮಿಷನರ್​ ಸೂಚನೆ ಮೇರೆಗೆ ಶುಕ್ರವಾರ ರಾತ್ರಿ ಮೂವರ ವಿರುದ್ಧ ಎಫ್​ಐಆರ್ ದಾಖಲಿಸಲಾಗಿದೆ.

ಇದನ್ನೂ ಓದಿ: IPS ಅಧಿಕಾರಿಗಳ ಹೆಸರಿನಲ್ಲಿ ಫೇಸ್‌ಬುಕ್ ನಕಲಿ ಖಾತೆ ಸೃಷ್ಟಿಸಿದ್ದ ಆರೋಪಿಯ ಬಂಧನ

ಬಿಎನ್​ಎಸ್ ಕಾಯ್ದೆಯ ಸೆಕ್ಷನ್ 115(2), 3(5), 331, 352 ಹಾಗೂ 74 ರ ಅಡಿ ಪ್ರಕರಣ ದಾಖಲಿಸಿರುವ ಪೊಲೀಸರು, ತನಿಖೆ ಆರಂಭಿಸಿದ್ದಾರೆ.

ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನ ಬೆತ್ತಲೆಗೊಳಿಸಿ ಹಲ್ಲೆ ಮಾಡಿದ ಘಟನೆ ಕಳೆದ ವರ್ಷ ದೇಶದಾದ್ಯಂತ ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಜಿಲ್ಲೆಯಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು