AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲಿ ಮತ್ತೊಂದು ದುರಂತ: ಸವದತ್ತಿ ಹೊರವಲಯದಲ್ಲಿ ಬಸ್ ಡಿಕ್ಕಿಯಾಗಿ ಬೈಕ್​ನಲ್ಲಿ ತೆರಳುತ್ತಿದ್ದ ಮೂವರ ಸಾವು

ಗಣೇಶ ಮೆರವಣಿಗೆ ನೋಡಿ ಬೈಕ್‌ನಲ್ಲಿ ಹಿಂದಿರುಗುತ್ತಿದ್ದ ಮೂವರು ಯುವಕರು ಬೆಳಗಾವಿಯ ಸವದತ್ತಿ ಹೊರವಲಯದಲ್ಲಿ ಕೆಎಸ್ಆರ್‌ಟಿಸಿ ಬಸ್ ಡಿಕ್ಕಿಯಾಗಿ ಬಲಿಯಾಗಿದ್ದಾರೆ. ಇದರೊಂದಿಗೆ, ಬೆಳಗಾವಿಯ ಚಾವ್ಹಾಣ್ ಗಲ್ಲಿಯಲ್ಲಿ ಒಂದೇ ಕುಟುಂಬದ ನಾಲ್ವರು ಸಜೀವ ದಹನವಾದ ಬೆನ್ನಲ್ಲೇ ಜಿಲ್ಲೆಯಲ್ಲೇ ಮತ್ತೊಂದು ದುರಂತ ಸಂಭವಿಸಿದಂತಾಗಿದ್ದು, ಜಿಲ್ಲೆಯಲ್ಲಿ ಹಬ್ಬದ ಬೆನ್ನಲ್ಲೇ ಸೂತಕದ ಛಾಯೆ ಆವರಿಸಿದೆ.

ಬೆಳಗಾವಿಯಲ್ಲಿ ಮತ್ತೊಂದು ದುರಂತ: ಸವದತ್ತಿ ಹೊರವಲಯದಲ್ಲಿ ಬಸ್ ಡಿಕ್ಕಿಯಾಗಿ ಬೈಕ್​ನಲ್ಲಿ ತೆರಳುತ್ತಿದ್ದ ಮೂವರ ಸಾವು
ಸಾಂದರ್ಭಿಕ ಚಿತ್ರImage Credit source: tv9
ಸಹದೇವ್​ ಮಾನೆ
| Edited By: |

Updated on:Sep 15, 2026 | 9:45 AM

Share

ಬೆಳಗಾವಿ, ಸೆಪ್ಟೆಂಬರ್ 15: ಬೆಳಗಾವಿಯ ಚಾವ್ಹಾಣ್ ಗಲ್ಲಿಯಲ್ಲಿ ಅಗ್ನಿ ಅವಘಡ ಸಂಭವಿಸಿ ಒಂದೇ ಕುಟುಂಬದ ನಾಲ್ವರು ಸಜೀವ ದಹನವಾದ ಬೆನ್ನಲ್ಲೇ ಜಿಲ್ಲೆಯಲ್ಲೇ ಮತ್ತೊಂದು ದುರಂತ ಸಂಭವಿಸಿದೆ. ಗಣೇಶ ಮೆರವಣಿಗೆ ನೋಡಿ ಬೈಕ್‌ನಲ್ಲಿ ಮನೆಗೆ ಹಿಂದಿರುಗುತ್ತಿದ್ದ ಮೂವರು ಯುವಕರು ಕೆಎಸ್ಆರ್‌ಟಿಸಿ ಬಸ್ ಡಿಕ್ಕಿಯಾಗಿ ಅಸುನೀಗಿದ್ದಾರೆ. ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಹೊರವಲಯದಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಸವದತ್ತಿಯಿಂದ ಧಾರವಾಡದತ್ತ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್, ಧಾರವಾಡದಿಂದ ಸವದತ್ತಿ ಕಡೆಗೆ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರನ್ನು ಸವದತ್ತಿ ಪಟ್ಟಣದ ನಿವಾಸಿಗಳಾದ ವಿನೋದ್ ಹೊಗೆನ್ನವರ (22), ಆಕಾಶ್ ಜಾಧವ್ (20) ಹಾಗೂ ರವಿ ಕುರುಬರ (22) ಎಂದು ಗುರುತಿಸಲಾಗಿದೆ. ಗಣೇಶ ಮೆರವಣಿಗೆ ವೀಕ್ಷಿಸಿ ಹಿಂದಿರುಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಘಟನಾ ಸ್ಥಳಕ್ಕೆ ಸವದತ್ತಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಕುರಿತು ಹೆಚ್ಚಿನ ಮಾಹಿತಿ ಕಲೆಹಾಕಲಾಗುತ್ತಿದೆ.

ಗಣೇಶ ಹಬ್ಬದ ಸಂಭ್ರಮ ಆಚರಿಸಿ ಮಲಗಿದ್ದವರು ಸಜೀವ ದಹನ

ಚಾವ್ಹಾಣ್ ಗಲ್ಲಿಯಲ್ಲಿ ಗಣೇಶ ಹಬ್ಬ ಆಚರಿಸಿ ರಾತ್ರಿ ಮಲಗಿದ್ದ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ದಾರುಣ ಘಟನೆ ನಡೆದಿದ್ದು, ಅದರ ಬೆನ್ನಲ್ಲೇ ಬೈಕ್ ಅಪಘಾತದ ಸುದ್ದಿಯೂ ಬರಸಿಡಿಲಿನಂತೆ ಬಂದೆರಗಿದೆ. ಚಾವ್ಹಾಣ್ ಗಲ್ಲಿ ಘಟನೆಯಲ್ಲಿ ನಾಲ್ವರು ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: ಬೆಳಗಾವಿ: ಗಣೇಶ ಚತುರ್ಥಿ ದಿನವೇ ಭೀಕರ ಅಗ್ನಿ ಅವಘಡ, ಒಂದೇ ಕುಟುಂಬದ ನಾಲ್ವರು ಸಜೀವ ದಹನ

ಮನೆಯೊಳಗಿನ ಅಡುಗೆಮನೆಯಲ್ಲಿ ಸಂಭವಿಸಿದ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದ್ದು, ನಂತರ ಫ್ರಿಡ್ಜ್ ಸ್ಫೋಟಗೊಂಡಿತ್ತು ಎಂಬುದು ಪ್ರಾಥಮಿಕ ವರದಿಗಳಿಂದ ತಿಳಿದುಬಂದಿದೆ. ಆದರೆ, ಪೊಲೀಸರು ಇನ್ನಷ್ಟೇ ಈ ಬಗ್ಗೆ ಅಧಿಕೃತ ಹೇಳಿಕೆ ನೀಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:45 am, Tue, 15 September 26

Follow Us
ಸಹದೇವ್​ ಮಾನೆ
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ವಿಜಯಪುರದಲ್ಲಿ ಕಚ್ಚಾ ಅಡುಗೆ ಎಣ್ಣೆ ಟ್ಯಾಂಕರ್ ಪಲ್ಟಿ: ಮುಗಿಬಿದ್ದ ಜನ
ವಿಜಯಪುರದಲ್ಲಿ ಕಚ್ಚಾ ಅಡುಗೆ ಎಣ್ಣೆ ಟ್ಯಾಂಕರ್ ಪಲ್ಟಿ: ಮುಗಿಬಿದ್ದ ಜನ
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ಮಂಜುಗೆ ಸುತ್ತಿಕೊಂಡು ಬಂದ ಕರ್ಮ; ಚಿತ್ರಹಿಂಸೆ ಅನುಭವಿಸಿದ ಮಾಡರ್ನ್ ಮಹಾಕವಿ
ಮಂಜುಗೆ ಸುತ್ತಿಕೊಂಡು ಬಂದ ಕರ್ಮ; ಚಿತ್ರಹಿಂಸೆ ಅನುಭವಿಸಿದ ಮಾಡರ್ನ್ ಮಹಾಕವಿ