Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ಸಂಬಳ ನೀಡದಿದ್ದಕ್ಕೆ ಬೇಸತ್ತು ಆ್ಯಂಬುಲೆನ್ಸ್ ಚಾಲಕ ಆತ್ಮಹತ್ಯೆ

ಬೆಳಗಾವಿಯ ಖಾಸಗಿ ಆಸ್ಪತ್ರೆಯ ಆ್ಯಂಬುಲೆನ್ಸ್ ಚಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಾಲಕನಿಗೆ ಆಸ್ಪತ್ರೆ ಆಡಳಿತ ಮಂಡಳಿ ಕಳೆದ ನಾಲ್ಕು ತಿಂಗಳಿನಿಂದ ಸಂಬಳ ನೀಡಿಲ್ಲ. ಹೀಗಾಗಿ, ಸಂಬಳಕ್ಕಾಗಿ ಎಷ್ಟೇ ಮನವಿ ಮಾಡಿಕೊಂಡರೂ ಪ್ರಯೋಜನವಾಗದ ಕಾರಣ, ಚಾಲಕ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್​ದಾರೆ. ಕುಟುಂಬಸ್ಥರು ಮತ್ತು ಚಾಲಕರ ಸಂಘ ಆಸ್ಪತ್ರೆ ಆಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಳಗಾವಿ: ಸಂಬಳ ನೀಡದಿದ್ದಕ್ಕೆ ಬೇಸತ್ತು ಆ್ಯಂಬುಲೆನ್ಸ್ ಚಾಲಕ ಆತ್ಮಹತ್ಯೆ
ಆ್ಯಂಬುಲೆನ್ಸ್ ಚಾಲಕ ಓಂಕಾರ
Follow us
Sahadev Mane
| Updated By: ವಿವೇಕ ಬಿರಾದಾರ

Updated on:Apr 13, 2025 | 8:49 PM

ಬೆಳಗಾವಿ, ಏಪ್ರಿಲ್​ 13: ಸಂಬಳ ನೀಡದಿದ್ದಕ್ಕೆ ಬೇಸತ್ತು ಡೆತ್​ನೋಟ್ ಬರೆದಿಟ್ಟು ಆ್ಯಂಬುಲೆನ್ಸ್ (Ambulance) ಚಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಓಂಕಾರ ಪವಾರ್ (25) ಮೃತ ದುರ್ದೈವಿ. ಮೃತ ಓಂಕಾರ ಪವಾರ್ ಅವರು ಬೆಳಗಾವಿ (Belagavi) ನಗರದ ಖಾಸಗಿ ಆಸ್ಪತ್ರೆಯ ಆ್ಯಂಬುಲೆನ್ಸ್​ನ​ ಚಾಲಕನಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಕಳೆದ ನಾಲ್ಕು ತಿಂಗಳ ಸಂಬಳ ನೀಡಿದೇ ಆಸ್ಪತ್ರೆಯವರು ಸತಾಯಿಸುತ್ತಿದ್ದರು. ಸಂಬಳಕ್ಕಾಗಿ ಮನವಿ ಮಾಡಿದ್ರೂ ಸ್ಪಂದಿಸದ ಹಿನ್ನೆಲೆಯಲ್ಲಿ ನೊಂದ ಓಂಕಾರ ಪವಾರ್ ಆಸ್ಪತ್ರೆ ಆಡಳಿತ ಮಂಡಳಿ ವಿರುದ್ಧ ಡೆತ್ ನೋಟ್ ಬರೆದಿಟ್ಟು, ಶಹಾಪುರದ ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನಾಲ್ಕು ವರ್ಷದ ಹಿಂದೆಯಷ್ಟೇ ಮದುವೆಯಾಗಿದ್ದ ಓಂಕಾರ್​ ಅವರಿಗೆ ಒಂದು ಮಗು ಇದೆ. ಇನ್ನು, ಸೇಂಟ್ರಾ ಆಸ್ಪತ್ರೆ ಆಡಳಿತ ಮಂಡಳಿ ವಿರುದ್ಧ ಕುಟುಂಬಸ್ಥರು ಮತ್ತು ಡ್ರೈವರ್ ಸಂಘಟನೆ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಸ್ಪತ್ರೆಯವರೇ ಸಾವಿಗೆ ಕಾರಣ ಅಂತ ಕುಟುಂಬಸ್ಥರು ಆರೋಪಿಸಿದ್ದಾರೆ.

ನಾಲ್ಕನೇ ಮಹಡಿಯಿಂದ ಜಿಗಿದು ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರು: ಅಪಾರ್ಟ್​ಮೆಂಟ್​ನ ನಾಲ್ಕನೇ ಮಹಡಿಯಿಂದ ಜಿಗಿದು ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ದಂತವೈದ್ಯಕೀಯ ವಿದ್ಯಾರ್ಥಿನಿ ಸೌಮ್ಯಾ (19) ಮೃತ ದುರ್ದೈವಿ. ವಿದ್ಯಾರ್ಥಿನಿ ಸೌಮ್ಯಾ ದಂತ ವೈದ್ಯಕೀಯ ಕಾಲೇಜಿನಲ್ಲಿ ಎರಡನೇ ವರ್ಷದಲ್ಲಿ ಓದುತ್ತಿದ್ದಾರೆ. ವಿದ್ಯಾರ್ಥಿನಿ ಸೌಮ್ಯಾ ಪರೀಕ್ಷೆ ವಿಚಾರವಾಗಿ ಭಯಗೊಂಡಿದ್ದರು ಎಂದು ತಿಳಿದು ಬಂದಿದೆ. ವಿದ್ಯಾರ್ಥಿನಿ ಸೌಮ್ಯಾ ಈ ಹಿಂದೆಯೂ ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ತಿಳಿದು ಬಂದಿದೆ. ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ
Image
ಆಗಾಗ ಅಜ್ಜಿ ಮನೆಗೆ ಬರುತ್ತಿದ್ದವ ಯುವತಿಯನ್ನೇ ಪಟಾಯಿಸಿ ಮದ್ವೆಯಾದ!
Image
ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು, ಕಾರಣ ನಿಗೂಢ!
Image
ಬೆಳಗಾವಿಯಲ್ಲೊಂದು ಅಮಾನವೀಯ ಘಟನೆ: ತಂದೆ ಸತ್ತರೂ ಮುಖ ನೋಡಲು ಬಾರದ ಮಗ
Image
ಸೈಬರ್ ವಂಚಕರ ಬಲೆಗೆ ಬಿದ್ದ ವೃದ್ಧ ದಂಪತಿ ದುರಂತ ಸಾವು!

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:45 pm, Sun, 13 April 25

ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​