ಬೆಳಗಾವಿ, ಏಪ್ರಿಲ್ 13: ಸಂಬಳ ನೀಡದಿದ್ದಕ್ಕೆ ಬೇಸತ್ತು ಡೆತ್ನೋಟ್ ಬರೆದಿಟ್ಟು ಆ್ಯಂಬುಲೆನ್ಸ್ (Ambulance) ಚಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಓಂಕಾರ ಪವಾರ್ (25) ಮೃತ ದುರ್ದೈವಿ. ಮೃತ ಓಂಕಾರ ಪವಾರ್ ಅವರು ಬೆಳಗಾವಿ (Belagavi) ನಗರದ ಖಾಸಗಿ ಆಸ್ಪತ್ರೆಯ ಆ್ಯಂಬುಲೆನ್ಸ್ನ ಚಾಲಕನಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಕಳೆದ ನಾಲ್ಕು ತಿಂಗಳ ಸಂಬಳ ನೀಡಿದೇ ಆಸ್ಪತ್ರೆಯವರು ಸತಾಯಿಸುತ್ತಿದ್ದರು. ಸಂಬಳಕ್ಕಾಗಿ ಮನವಿ ಮಾಡಿದ್ರೂ ಸ್ಪಂದಿಸದ ಹಿನ್ನೆಲೆಯಲ್ಲಿ ನೊಂದ ಓಂಕಾರ ಪವಾರ್ ಆಸ್ಪತ್ರೆ ಆಡಳಿತ ಮಂಡಳಿ ವಿರುದ್ಧ ಡೆತ್ ನೋಟ್ ಬರೆದಿಟ್ಟು, ಶಹಾಪುರದ ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಾಲ್ಕು ವರ್ಷದ ಹಿಂದೆಯಷ್ಟೇ ಮದುವೆಯಾಗಿದ್ದ ಓಂಕಾರ್ ಅವರಿಗೆ ಒಂದು ಮಗು ಇದೆ. ಇನ್ನು, ಸೇಂಟ್ರಾ ಆಸ್ಪತ್ರೆ ಆಡಳಿತ ಮಂಡಳಿ ವಿರುದ್ಧ ಕುಟುಂಬಸ್ಥರು ಮತ್ತು ಡ್ರೈವರ್ ಸಂಘಟನೆ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಸ್ಪತ್ರೆಯವರೇ ಸಾವಿಗೆ ಕಾರಣ ಅಂತ ಕುಟುಂಬಸ್ಥರು ಆರೋಪಿಸಿದ್ದಾರೆ.
ಬೆಂಗಳೂರು: ಅಪಾರ್ಟ್ಮೆಂಟ್ನ ನಾಲ್ಕನೇ ಮಹಡಿಯಿಂದ ಜಿಗಿದು ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ದಂತವೈದ್ಯಕೀಯ ವಿದ್ಯಾರ್ಥಿನಿ ಸೌಮ್ಯಾ (19) ಮೃತ ದುರ್ದೈವಿ. ವಿದ್ಯಾರ್ಥಿನಿ ಸೌಮ್ಯಾ ದಂತ ವೈದ್ಯಕೀಯ ಕಾಲೇಜಿನಲ್ಲಿ ಎರಡನೇ ವರ್ಷದಲ್ಲಿ ಓದುತ್ತಿದ್ದಾರೆ. ವಿದ್ಯಾರ್ಥಿನಿ ಸೌಮ್ಯಾ ಪರೀಕ್ಷೆ ವಿಚಾರವಾಗಿ ಭಯಗೊಂಡಿದ್ದರು ಎಂದು ತಿಳಿದು ಬಂದಿದೆ. ವಿದ್ಯಾರ್ಥಿನಿ ಸೌಮ್ಯಾ ಈ ಹಿಂದೆಯೂ ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ತಿಳಿದು ಬಂದಿದೆ. ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Published On - 2:45 pm, Sun, 13 April 25