AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರಿದಾಗುತ್ತಿದೆ ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳ ಜೀವನಾಡಿ ಹಿಡಕಲ್ ಜಲಾಶಯ

ರಾಜ್ಯದಲ್ಲಿ ಮುಂಗಾರು ಮತ್ತು ಹಿಂಗಾರು ಮಳೆ ಕೈ ಕೊಟ್ಟಿದೆ. ಇದರಿಂದ ಕುಡಿಯುವ ನೀರಿಗೂ ಪರದಾಡುವಂತ ಪರಿಸ್ಥಿತಿ ಎದುರಾಗಿದೆ. ಮಳೆ ಇಲ್ಲದೆ ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳಿಗೆ ಜೀವನಾಡಿಯಾಗಿರುವ ಹಿಡಕಲ್ ಜಲಾಶಯ ಬರಿದಾಗುತ್ತಿದೆ. ಇದರಿಂದ ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಯ ಜನರು ಕುಡಿಯುವ ನೀರಿಗಾಗಿ ಪರಿತಪ್ಪಿಸುತ್ತಿದ್ದಾರೆ.

ಬರಿದಾಗುತ್ತಿದೆ ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳ ಜೀವನಾಡಿ ಹಿಡಕಲ್ ಜಲಾಶಯ
ಹಿಡಕಲ್​​ ಡ್ಯಾಂ
ವಿವೇಕ ಬಿರಾದಾರ
|

Updated on:Mar 03, 2024 | 8:01 AM

Share

ಬೆಳಗಾವಿ, ಮಾರ್ಚ್​​ 03: ಭೀಕರ ಬರಗಾಲದಿಂದ (Drought) ರಾಜ್ಯದ ಜಲಾಶಯಗಳು ಭಣಗುಡುತ್ತಿವೆ. ಅಂತರ್ಜಲ ಪಾತಾಳಕ್ಕೆ ಕುಸಿದಿದೆ. ಬೇಸಿಗೆ ಆರಂಭದಲ್ಲೇ ಜಲಕ್ಷಾಮದ ಬಿಸಿ ರಾಜ್ಯಕ್ಕೆ ತಟ್ಟಿದೆ. ಹನಿ ನೀರಿಗೂ ಪರದಾಡುವಂತೆ ಪರಿಸ್ಥಿತಿ ಎದುರಾಗಿದೆ. ಇನ್ನು ಬೆಳಗಾವಿ (Belagavi) ಮತ್ತು ಬಾಗಲಕೋಟೆ (Bagalkote) ಜಿಲ್ಲೆಗಳಿಗೆ ಜೀವನಾಡಿಯಾಗಿರುವ ಹುಕ್ಕೇರಿ ತಾಲೂಕಿನ ಹಿಡಕಲ್ ಜಲಾಶಯ (Hidkal Dam) ಬರಿದಾಗುತ್ತಿದೆ. ಬೆಳಗಾವಿ ಜಿಲ್ಲೆಯಲ್ಲಿ ಕುಡಿಯುವ ನೀರಿಗಾಗಿ ಜನ ಪರಿತಪ್ಪಿಸುತ್ತಿದ್ದಾರೆ. ಬೆಳಗಾವಿಯ ಮತ್ತು ಬಾಗಲಕೋಟೆ ಜಿಲ್ಲೆ ಜೀವನಾಡಿ ಆಗಿರುವ ಹಿಡಕಲ್ ಜಲಾಶಯದಲ್ಲಿ ಅರ್ಧದಷ್ಟು ನೀರು ಖಾಲಿಯಾಗಿದ್ದು, ಜಲಕ್ಷಾಮದ ಆತಂಕ ತಲೆದೋರಿದೆ.

ಒಟ್ಟು 51 ಟಿಎಂಸಿ ಸಾಮರ್ಥ್ಯದ ಹಿಡಕಲ್ ಡ್ಯಾಂನಲ್ಲಿ, 25 ಟಿಎಂಸಿ ಮಾತ್ರ ನೀರಿದೆ. ನೀರಿಗೆ ಅಭಾವ ತಲೆದೋರುವ ಮುನ್ಸೂಚನೆ ಸಿಗುತ್ತಿದ್ದಂತೆ, ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ತುರ್ತು ಸಭೆ ನಡೆಸಿದರು. ನೀರು ಮತ್ತು ಮೇವಿನ ಸ್ಥಿತಿ ಬಗ್ಗೆ ಮಾಹಿತಿ ಪಡೆದರು. ಜನರಿಗೆ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

 12 ವರ್ಷಗಳ ನಂತರ ದೇವಾಲಯ ಪತ್ತೆ

ಕಳೆದ ವರ್ಷ ಬೇಸಿಗೆಗಾಲದಲ್ಲಿ ಹಿಡಕಲ್ ಅಣೆಕಟ್ಟು ಸಂಪೂರ್ಣ ಬರಿದಾಗಿತ್ತು. ಈ ಸಮಯದಲ್ಲಿ ಅಣೆಕಟ್ಟಿನ ಹಿನ್ನೀರಿನಡಿಯಲ್ಲಿ ಮುಳುಗಡೆಯಾಗಿದ್ದ ಪುರಾತನ ವಿಠಲ ದೇವಸ್ಥಾನವು ಸರಿಯಾಗಿ 12 ವರ್ಷಗಳ ನಂತರ ಪತ್ತೆಯಾಗಿತ್ತು. ಅದು ಕೂಡ ಆಷಾಢ ಏಕಾದಶಿಯ ಶುಭದಿನದಂದು ವಿಠಲ ದೇವಸ್ಥಾನ ಕಾಣಿಸಿಕೊಂಡಿತ್ತು. ಇದರಿಂದ ಹರ್ಷಗೊಂಡಿದ್ದ ಭಕ್ತರು ದರ್ಶನ  ಮತ್ತು ಪ್ರಾರ್ಥನೆ ಸಲ್ಲಿಸಿದ್ದರು.

ಮಾವು ಫಸಲಿಗೂ ಹೊಡೆತ ಕೊಟ್ಟ ಬಿಸಿಲು!

ಇನ್ನು, ತಾಪಮಾನ ಏರಿಕೆಯಿಂದ, ಮಾವಿನ ಹೂವು ಮತ್ತು ಪೀಚು ಉದುರುತ್ತಿದೆ. ಕೋಲಾರ ಜಿಲ್ಲೆಯಲ್ಲಿ ಸುಮಾರು 52 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಮಾವು ಬೆಳೆಯಲಾಗುತ್ತೆ. ಇಷ್ಟೋತ್ತಿಗಾಗಲೆ ಹೂವು ಬಿಟ್ಟು, ಪೀಚು ಕಟ್ಟಬೇಕಿದ್ದ ಮಾವು, ಫೆಬ್ರವರಿ ಕಳೆದರೂ ಸರಿಯಾಗಿ ಹೂವು ಬಿಟ್ಟಿಲ್ಲ.

ಇದನ್ನೂ ಓದಿ: ಭೀಕರ ಬರದಿಂದ ತತ್ತರಿಸುತ್ತಿದೆ ಕೊಪ್ಪಳ: ಬಹುತೇಕ ಕೆರೆಗಳು ಖಾಲಿ ಖಾಲಿ, ಕುಡಿಯುವ ನೀರಿಗೂ ತತ್ವಾರ

ಕಾವೇರಿ ತವರಿನಲ್ಲೇ ಜಲಕ್ಷಾಮದ ಆತಂಕ!

ಹೌದು ಕಾವೇರಿ ಹುಟ್ಟುವ ಕೊಡಗು ಜಿಲ್ಲೆಯಲ್ಲೇ ಜಲಕ್ಷಾಮದ ಆತಂಕ ಶುರುವಾಗಿದೆ. ನಗರಕ್ಕೆ ವರ್ಷವಿಡೀ ನೀರು ಪೂರೈಸುವ ಕೂಟುಹೊಳೆ ಡ್ಯಾಂನಲ್ಲಿ ನೀರು ತಗ್ಗಿದ್ದು, ಮೋಟರ್ ಪೈಪ್​ಗಳಿಗೆ ನಿಲುಕುತ್ತಿಲ್ಲ. ಹೀಗಾಗಿ ಕುಂಡಾ ಮೇಸ್ತ್ರಿ ಕಿರು ಜಲಾಶಯದಿಂದ ಕೊಟುಹೊಳೆ ಜಲಾಶಯಕ್ಕೆ ನೀರನ್ನ ಪಂಪ್ ಮಾಡಲಾಗುತ್ತಿದೆ. ನಗರದ ಎಲ್ಲಾ ಬೋರ್​ವೆಲ್​ಗಳನ್ನ ಸರ್ವಿಸ್ ಮಾಡಲಾಗುತ್ತಿದೆ. ಹೆಚ್ಚುವರಿ 3 ಟ್ಯಾಂಕರ್​ಗಳನ್ನ ಸಿದ್ಧವಾಗಿಟ್ಟುಕೊಳ್ಳಲಾಗಿದೆ.

ಏನೇ ಹೇಳಿ ರಾಜ್ಯದಲ್ಲಿ ಈ ಬಾರಿ ವಾಡಿಕೆ ಮಳೆ ಬರದ ಕಾರಣ ಬೇಸಿಗೆ ಆರಂಭದಲ್ಲೇ ನೀರಿಗೆ ಪರದಾಟ ಶುರುವಾಗಿದೆ. ನೀರಿನ ಸಮಸ್ಯೆ ನಿವಾರಿಸಲು ಸರ್ಕಾರ ತುರ್ತು ಕ್ರಮಗಳನ್ನ ಕೈಗೊಳ್ಳಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:59 am, Sun, 3 March 24

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್