AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಗನವಾಡಿ ಸಹಾಯಕಿ ಮೇಲೆ ಹಲ್ಲೆ ಪ್ರಕರಣ; ಆರೋಪಿ ಅರೆಸ್ಟ್​

ಅಂಗನವಾಡಿ ಸಹಾಯಕಿ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕಾಕತಿ ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಕಲ್ಲಪ್ಪ ಅಲಿಯಾಸ್ ಕಲ್ಯಾಣಿ ಮೋರೆ(44) ಬಂಧಿತ ಆರೋಪಿ. ಬೆಳಗಾವಿ ತಾಲೂಕಿನ ಬಸುರ್ತೆ ಗ್ರಾಮದಲ್ಲಿ ಜ.1ರಂದು ಮಕ್ಕಳು ಆರೋಪಿ ಮನೆ ಮುಂದಿರುವ ಹೂ ಕಿತ್ತಿದ್ದಕ್ಕೆ ಅಂಗನವಾಡಿ ಸಹಾಯಕಿ ಮೇಲೆ ಹಲ್ಲೆ ಮಾಡಲಾಗಿತ್ತು.

ಅಂಗನವಾಡಿ ಸಹಾಯಕಿ ಮೇಲೆ ಹಲ್ಲೆ ಪ್ರಕರಣ; ಆರೋಪಿ ಅರೆಸ್ಟ್​
ಬಂಧಿತ ಆರೋಪಿ
ಸಹದೇವ್​ ಮಾನೆ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jan 04, 2024 | 9:59 PM

Share

ಬೆಳಗಾವಿ, ಜ.04: ಅಂಗನವಾಡಿ ಸಹಾಯಕಿ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕಾಕತಿ ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಕಲ್ಲಪ್ಪ ಅಲಿಯಾಸ್ ಕಲ್ಯಾಣಿ ಮೋರೆ(44) ಬಂಧಿತ ಆರೋಪಿ. ಬೆಳಗಾವಿ ತಾಲೂಕಿನ ಬಸುರ್ತೆ ಗ್ರಾಮದಲ್ಲಿ ಜ.1ರಂದು ಮಕ್ಕಳು ಆರೋಪಿ ಮನೆ ಮುಂದಿರುವ ಹೂ ಕಿತ್ತಿದ್ದಕ್ಕೆ ಅಂಗನವಾಡಿ ಸಹಾಯಕಿ ಸುಗಂಧಾ ಎಂಬುವವರ ಮೇಲೆ ಹಲ್ಲೆ ಮಾಡಿ ಅವಾಚ್ಯವಾಗಿ ಬೈದು, ಮೂಗು ಕಟ್ ಮಾಡಿದ್ದ. ಸಧ್ಯ ಗಾಯಗೊಂಡಿದ್ದ ಸುಗಂಧಾ ಮೋರೆ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆ ವಿವರ 

ಬೆಳಗಾವಿ ತಾಲೂಕಿನ ಬಸುರ್ತೆ ಗ್ರಾಮದಲ್ಲಿ ಸುಗಂಧಾ ಮೋರೆ(50) ಎಂಬ ಅಂಗನವಾಡಿ ಸಹಾಯಕಿ ಮೇಲೆ ಹಲ್ಲೆ ನಡೆದಿತ್ತು. ಅಂಗನವಾಡಿ ಮಕ್ಕಳು ಪಕ್ಕದ ಮನೆಯ ಆವರಣದಲ್ಲಿ ಬೆಳೆಯಲಾಗಿದ್ದ ಹೂ ಕಿತ್ತಿದ್ದಾರೆ. ಈ ಕಾರಣಕ್ಕೆ ಅಂಗನವಾಡಿ ಸಹಾಯಕಿಗೆ ಅವಾಚ್ಯವಾಗಿ ನಿಂದಿಸಿ, ಕುಡಗೋಲಿನಿಂದ ಮಾರಣಾಂತಿಕ ಹಲ್ಲೆ ಮಾಡಲಾಗಿತ್ತು. ಮನೆ ಮಾಲೀಕ ಕಲ್ಯಾಣಿ ಮೋರೆ ಎಂಬಾತ ಅಂಗನವಾಡಿ ಸಹಾಯಕಿಯ ಮೂಗನ್ನೇ ಕಟ್ ಮಾಡಿ ಅಟ್ಟಹಾಸ ಮೆರೆದಿದ್ದ.

ಇದನ್ನೂ ಓದಿ: ಬೆಳಗಾವಿ: ಮಗು ಹೂ ಕಿತ್ತಿದ್ದಕ್ಕೆ ಅಂಗನವಾಡಿ ಕಾರ್ಯಕರ್ತೆಯ ಮೇಲೆ ಮನೆ ಮಾಲೀಕನ ಮಾರಣಾಂತಿಕ ಹಲ್ಲೆ!

ಇನ್ನು ಮೂಗು ಕತ್ತರಿಸಿರುವ ಪರಿಣಾಮ ಶ್ವಾಸಕೋಶದಲ್ಲಿ ರಕ್ತ ಹೋಗಿ ಮಹಿಳೆ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ಮಕ್ಕಳು ಮಾಡಿದ ತಪ್ಪಿಗೆ ಸಹಾಯಕಿಗೆ ಮಹಿಳೆಗೆ ಹಲ್ಲೆ ಮಾಡಲಾಗಿದೆ. ಜ.1ರಂದು ಅಂಗನವಾಡಿ ಕೇಂದ್ರದ ಮುಂದೆ ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೂಗ ಗಂಡನೊಂದಿಗೆ ಅಂಗನವಾಡಿ ಸಹಾಯಕಿಯಾಗಿ ಜೀವನ ಕಟ್ಟಿಕೊಳ್ತಿದ್ದ ಮಹಿಳೆ ಈಗ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಈ ಕುರಿತು ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಹದೇವ್​ ಮಾನೆ
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು