ಚಿಕ್ಕೋಡಿ: ಅಂಗನವಾಡಿಗೆ ನುಗ್ಗಿ ಶಿಕ್ಷಕಿ ಮೇಲೆ ಅತ್ಯಾಚಾರಕ್ಕೆ ಯತ್ನ
ರಾಯಬಾಗ ತಾಲೂಕಿನ ಅಂಗನವಾಡಿ ಕೇಂದ್ರದಲ್ಲಿ ಭಯಾನಕ ಘಟನೆ ನಡೆದಿದೆ. ಅಡುಗೆ ಸಿಬ್ಬಂದಿಗೆ ಶೌಚಾಲಯ ಸ್ವಚ್ಛಗೊಳಿಸಲು ಹೇಳಿದ್ದಕ್ಕೆ ಅಂಗನವಾಡಿ ಕೇಂದ್ರಕ್ಕೆ ನುಗ್ಗಿ ಶಿಕ್ಷಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಲಾಗಿದೆ. ಬ್ರೈನ್ ಟ್ಯೂಮರ್‌ನಿಂದ ಬಳಲುತ್ತಿರುವ ಶಿಕ್ಷಕಿ, ಮಾನಸಿಕ ಕಿರುಕುಳಕ್ಕೆ ಒಳಗಾಗಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಚಿಕ್ಕೋಡಿ, ಜನವರಿ 12: ಅಂಗನವಾಡಿಯಲ್ಲಿ (Anganwadi) ಕೆಲಸ ಮಾಡುವ ಮಹಿಳಾ ಅಡುಗೆ ಸಹಾಯಕಿ ಗಂಡನಿಂದ ಅಂಗನವಾಡಿ ಕೇಂದ್ರಕ್ಕೆ ನುಗ್ಗಿ ಶಿಕ್ಷಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಆರೋಪ ಕೇಳಿಬಂದಿದೆ. ಬೆಳಗಾವಿ ಜಿಲ್ಲೆಯ ರಾಯಬಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ರಾಯಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಅಂಗನವಾಡಿ ಕೇಂದ್ರದಲ್ಲಿರುವ ಅಡುಗೆ ಸಿಬ್ಬಂದಿಗೆ ಶೌಚಾಲಯ ಸ್ವಚ್ಛ ಮಾಡುವಂತೆ ಅಡುಗೆ ಮಾಡುವ ಮಹಿಳೆಗೆ ಶಿಕ್ಷಕಿ ಹೇಳಿದ್ದಾರೆ. ಈ ವಿಚಾರವನ್ನ ತನ್ನ ಗಂಡನಿಗೆ ಅಡುಗೆ ಸಿಬ್ಬಂದಿ ಸಾವಿತ್ರಿ ಕರ್ಲಟ್ಟಿ ಹೋಗಿ ಹೇಳಿದ್ದಾರೆ. ಇದರಿಂದ ಕೋಪಗೊಂಡು ಅಂಗನವಾಡಿಗೆ ಆಗಮಿಸಿದ್ದ ಆರೋಪಿ ಸಿದ್ರಾಯಿ ಕರ್ಲಟ್ಟಿ, ತನ್ನ ಹೆಂಡತಿಗೆ ಶೌಚಾಲಯ ಕ್ಲಿನ್ ಮಾಡಲು ಹಚ್ಚುತ್ತಿಯಾ ಅಂತಾ ಅವಾಚ್ಯವಾಗಿ ನಿಂದಿಸಿದ್ದಾರೆ.
ಇದನ್ನೂ ಓದಿ: ಕೂಲಿಗಾಗಿ ಬೆಂಗಳೂರಿಗೆ ವಲಸೆ ಹೋಗುತ್ತಿದ್ದವರು ನಡು ದಾರಿಯಲ್ಲೇ ದುರಂತ ಸಾವು
ಇದೇ ವೇಳೆ ಶಿಕ್ಷಕಿ ಸೀರೆ ಎಳೆದು ಮಾನಭಂಗ ಪಡಿಸಲು ಯತ್ನಿಸಿರುವುದಾಗಿ ಆರೋಪಿಸಲಾಗಿದೆ. ಇನ್ನು ಶಿಕ್ಷಕಿ ಬ್ರೈನ್ ಟ್ಯೂಮರ್ದಿಂದ ಬಳಲುತ್ತಿದ್ದು, ಮಾನಸಿಕ ಕಿರುಕುಳ ತಾಳಲಾರದೇ ಆತ್ಮಹತ್ಯೆಗೂ ಯತ್ನಿಸಿದ್ದಾರೆ. ಸದ್ಯ ಜೀವ ಭಯ ಇದೆ ರಕ್ಷಣೆ ನೀಡಿ ಅಂತಾ ಶಿಕ್ಷಕಿ ಕುಟುಂಬ ಕಣ್ಣೀರಿಡುತ್ತಿದೆ.
ಕಟ್ಟಿಕೊಂಡ ಹೆಂಡತಿಗೆ ವೈದ್ಯ ಪತಿಯಿಂದ ಟಾರ್ಚರ್
ಚಿಕ್ಕಮಗಳೂರು ನಗರದ ದೋಣಿಕಣ ಸಮೀಪದ ಮನೆಯಲ್ಲಿ ವೈದ್ಯ ತನ್ನ ಪತ್ನಿ ವಿನುತಾ ರಾಣಿಗೆ ಚಿತ್ರಹಿಂಸೆ ನೀಡಿ ಕಿರುಕುಳ ಕೊಡುತ್ತಿದ್ದರೆಂದು, ಅದರಲ್ಲೂ ಹುಚ್ಚಿ ಎಂದು ಬಿಂಬಿಸಿ ಮಾನಸಿಕ ಜೊತೆಯಲ್ಲಿ ದೈಹಿಕ ಕಿರುಕುಳವನ್ನು ನೀಡಿ ಮನಸೋ ಇಚ್ಛೆ ಥಳಿಸಿದ್ದಾರೆ ಎಂದು ಮಹಿಳೆ ಆರೋಪಿಸಿದ್ದರು. ಇನ್ನೂ ವಿಚಾರ ತಿಳಿಯುತ್ತಿದ್ದಂತೆ ಆಕೆಯ ಪತಿ ಡಾ, ರವಿಕುಮಾರ್ ಅಲ್ಲಿಂದ ನಾಪತ್ತೆಯಾಗಿದ್ದ.
ಇದನ್ನೂ ಓದಿ: ಗಂಡ್ಮಕ್ಳು ಮಾತ್ರ ಕೆಟ್ಟವರು, ಹುಡ್ಗಿರು ಏನೇ ಮಾಡಿದ್ರೂ ಲೆಕ್ಕಕ್ಕೆ ಬರಲ್ಲ..ವಿಡಿಯೋ ಮಾಡಿ ಪ್ರಾಣ ಬಿಟ್ಟ ಯುವಕ
ಮಹಿಳೆಯ ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದಾರೆ. ಮಹಿಳೆಯನ್ನು ಚಿಕ್ಕಮಗಳೂರು ಮಲ್ಲೇಗೌಡ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರವಿಕುಮಾರ್ ವೃತ್ತಿಯಲ್ಲಿ ವೈದ್ಯರಾಗಿದ್ದು, ಡಾ. ರವಿಕುಮಾರ್ ಹಾಸನದ ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಎಂದು ಹೇಳಲಾಗಿತ್ತು. 22 ವರ್ಷಗಳ ಹಿಂದೆ ಡಾ.ರವಿಕುಮಾರ್, ವಿನುತಾರಾಣಿ (48) ಅವರನ್ನು ವಿವಾಹವಾಗಿದ್ದ. ನಂತರ ಇಬ್ಬರ ನಡುವೆ ಮನಸ್ತಾಪ ಉಂಟಾಗಿ ಇಬ್ಬರು ಬೇರೆಯಾಗಿದ್ದರು. ಕಳೆದ 1 ವರ್ಷದ ಹಿಂದೆ ವಿನುತಾರಾಣಿ ಅವರಿಗೆ ಡಾ.ರವಿಕುಮಾರ್ ವಿಚ್ಛೇದನ ನೀಡಿದ್ದಾರೆ ಎನ್ನಲಾಗಿತ್ತು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.