ಬೆಳಗಾವಿ: ಶ್ರೀಗಂಧದ ತುಂಡು ಸಾಗಿಸ್ತಿದ್ದ ನಕಲಿ ಪತ್ರಕರ್ತನ​ ಬಂಧನ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ದಿನದಿಂದ ದಿನಕ್ಕೆ ನಕಲಿ ಯೂಟ್ಯೂಬ್ ವರದಿಗಾರರ ಹಾವಳಿ ಹೆಚ್ಚಾಗುತ್ತಿದ್ದು, ಇದೀಗ ಹುಕ್ಕೇರಿ ಅರಣ್ಯ ಇಲಾಖೆ(Hukkeri Forest Department)ಯ ಅರಣ್ಯಾಧಿಕಾರಿ ಪ್ರಸನ್ನ ಬೆಲ್ಲದ ನೇತೃತ್ವದಲ್ಲಿ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ​ ಪತ್ರಕರ್ತರ ಸೋಗಿನಲ್ಲಿ‌ ಶ್ರೀಗಂಧದ ಮರದ ತುಂಡುಗಳನ್ನ ಸಾಗಿಸುತ್ತಿದ್ದ ಓರ್ವ ನಕಲಿ ಪತ್ರಕರ್ತನನ್ನು ಬಂಧಿಸಿದ್ದಾರೆ.

ಬೆಳಗಾವಿ: ಶ್ರೀಗಂಧದ ತುಂಡು ಸಾಗಿಸ್ತಿದ್ದ ನಕಲಿ ಪತ್ರಕರ್ತನ​ ಬಂಧನ
ಹುಕ್ಕೇರಿ ಅರಣ್ಯಾಧಿಕಾರಿಗಳ ದಾಳಿ; ಶ್ರೀಗಂಧದ ತುಂಡು ಸಾಗಿಸುತ್ತಿದ್ದ ನಕಲಿ ಪತ್ರಕರ್ತನ ಬಂಧನ
Follow us
Sahadev Mane
| Updated By: ಕಿರಣ್ ಹನುಮಂತ್​ ಮಾದಾರ್

Updated on:Mar 20, 2024 | 2:58 PM

ಬೆಳಗಾವಿ, ಮಾ.20: ಪತ್ರಕರ್ತರ ಸೋಗಿನಲ್ಲಿ‌ ಶ್ರೀಗಂಧದ ಮರದ ತುಂಡುಗಳನ್ನ ಸಾಗಿಸುತ್ತಿದ್ದ ಓರ್ವ ನಕಲಿ ಪತ್ರಕರ್ತನನ್ನು ಹುಕ್ಕೇರಿ ಅರಣ್ಯ ಇಲಾಖೆ(Hukkeri Forest Department)ಯ ಅರಣ್ಯಾಧಿಕಾರಿ ಪ್ರಸನ್ನ ಬೆಲ್ಲದ ನೇತೃತ್ವದಲ್ಲಿ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ​ ಬಂಧಿಸಿದ್ದಾರೆ. ಕಾರಿನ ಮೇಲೆ ಮೀಡಿಯಾ ಎಂದು ಬರೆಯಿಸಿ ಸ್ಮಗ್ಲಿಂಗ್ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಗುಡಸ ಗ್ರಾಮದ ಬಳಿ ದಾಳಿ ನಡೆಸಿ 40 ಕೆಜಿ ಶ್ರೀಗಂಧ ಹಾಗೂ ಕಳ್ಳ ಸಾಗಾಟಕ್ಕೆ ಬಳಸಿದ್ದ ಕಾರನ್ನು ಜಪ್ತಿ ಮಾಡಿ, ಆರೋಪಿ ಪುಂಡಲೀಕ ಭಜಂತ್ರಿಯನ್ನು ವಶಕ್ಕೆ ಪಡೆಯಲಾಗಿದೆ.

ಪರಾರಿಯಾದ ನಕಲಿ ಪತ್ರಕರ್ತರು

ಓರ್ವ ನಕಲಿ  ಪತ್ರಕರ್ತ ಸಿಕ್ಕಿಬಿದ್ದಿದ್ದು, ಇನ್ನುಳಿದ ಪತ್ರಕರ್ತರು ಪರಾರಿಯಾಗಿದ್ದಾರೆ. ಪರಸಪ್ಪ ಭಜಂತ್ರಿ ಎಂಬುವರಿಗೆ ಸೇರಿದ ಕಾರಿನಲ್ಲಿ ಪುಂಡಲೀಕ ಭಜಂತ್ರಿ ಎಂಬುವರ ನಕಲಿ ಯೂಟ್ಯೂಬ್‌ ಐಡಿ ಪತ್ತೆಯಾಗಿದೆ. ಇನ್ನು ಗಡಿ ಜಿಲ್ಲೆ ಬೆಳಗಾವಿಯಲ್ಲಿ ದಿನದಿಂದ ದಿನಕ್ಕೆ ನಕಲಿ ಯೂಟ್ಯೂಬ್ ವರದಿಗಾರರ ಹಾವಳಿ ಹೆಚ್ಚಾಗುತ್ತಿದ್ದು, ಹುಕ್ಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ:ಗಂಧದ ತುಂಡುಗಳನ್ನ ಕದ್ದ ಖತರ್ನಾಕ್ ಕಳ್ಳರನ್ನ ಯಾದಗಿರಿ ಪೊಲೀಸರು ಶಿವಮೊಗ್ಗದಲ್ಲಿ ಬಂಧಿಸಿದರು, ಆದರೆ ಕಳ್ಳರ ಕಹಾನಿ ಕೇಳಿ ಶಾಕ್ ಆಗಿದ್ದಾರೆ!

ಕೊಪ್ಪಳ ನಗರದ ಕೀರ್ತಿ ನಗರದಲ್ಲಿ ಸರಣಿ ಮನೆಗಳ್ಳತನ

ಕೊಪ್ಪಳ: ಕೀರ್ತಿ ನಗರದಲ್ಲಿ ಸರಣಿ ಮನೆಗಳ್ಳತನ ನಡೆದಿದ್ದು, ಮೂರು ಮನೆಗಳನ್ನು ಸೇರಿ 1.20 ಲಕ್ಷ ನಗದು, ನೂರು ಗ್ರಾಮ ಚಿನ್ನಾಭರಣ, ಬೆಳ್ಳಿ ಆಭರಣ ಕಳ್ಳತನ ಮಾಡಲಾಗಿದೆ. ಮಕ್ಕಳ ಸ್ಕೂಲ್ ಪೀಸ್​ಗಾಗಿ ಸಂಗ್ರಹಿಸಿಟ್ಟಿದ್ದ ಹಣ ಸೇರಿದಂತೆ ಸಂಬಂಧಿಗಳ ಮದುವೆಗೆ ಸಂಗ್ರಹಸಿದ್ದ ಹಣವನ್ನೂ ಖದೀಮರು ಎಗರಿಸಿದ್ದಾರೆ. ಝೆರಾಕ್ಸ್ ಸೆಂಟರ್ ನಡೆಸೋ ಆದಿರಾಜ್ ಬಾವಿಕಟ್ಟಿ ಕುಟುಂಬ, ರಾತ್ರಿ ಹಾಲ್​ನಲ್ಲಿ ಮಲಗಿದ್ದರು. ಹಿಂಬಾಗಿಲನ್ನು ಮುರಿದು ಒಳ ಬಂದು ಕಳ್ಳರು, ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದಾರೆ. ಈ ಕುರಿತು ಕೊಪ್ಪಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:50 pm, Wed, 20 March 24

‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
Daily Devotional: ದೇವರ ನಾಮ ಜಪದ ಮಹತ್ವ ಮತ್ತು ಪ್ರಯೋಜನಗಳು ತಿಳಿಯಿರಿ
Daily Devotional: ದೇವರ ನಾಮ ಜಪದ ಮಹತ್ವ ಮತ್ತು ಪ್ರಯೋಜನಗಳು ತಿಳಿಯಿರಿ
Daily Devotional: ಈ ರಾಶಿಯವರು ಇಂದು ಆಸ್ತಿ ಖರೀದಿಸುವರು
Daily Devotional: ಈ ರಾಶಿಯವರು ಇಂದು ಆಸ್ತಿ ಖರೀದಿಸುವರು