Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ಕನ್ನಡ ಮಾತನಾಡು ಎಂದಿದ್ದಕ್ಕೆ ಹಲ್ಲೆ​: ಸಂತ್ರಸ್ತ ನಿರ್ವಾಹಕನ ವಿರುದ್ಧವೇ ಪೋಕ್ಸೋ ಕೇಸ್

ಕನ್ನಡ ಮಾತನಾಡು ಎಂದಿದ್ದಕ್ಕೆ ಬೆಳಗಾವಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ನಿರ್ವಾಹಕ ಮಹಾದೇವಪ್ಪ ಹುಕ್ಕೇರಿ ಮೇಲೆ ಹಲ್ಲೆ ಮಾಡಲಾಗಿತ್ತು. ಇದೀಗ, ಇದೇ ನಿರ್ವಾಹಕ ಮಹಾದೇವಪ್ಪ ಅವರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಹಲ್ಲೆಯನ್ನು ಖಂಡಿಸಿ ಕನ್ನಡ ಪರ ಹೋರಾಟಗಾರರು ಪ್ರತಿಭಟನೆ ನಡೆಸಿದ್ದಾರೆ. ಭಾಷಾ ವಿವಾದದ ಹಿನ್ನೆಲೆಯಲ್ಲಿ ಗಲಾಟೆ ನಡೆದಿದೆ ಎಂಬ ಮಾಹಿತಿ ಇದೆ ಎಂದು ಬೆಳಗಾವಿ ಪೊಲೀಸ್​ ಆಯುಕ್ತರು ಹೇಳಿದ್ದಾರೆ.

ಬೆಳಗಾವಿ: ಕನ್ನಡ ಮಾತನಾಡು ಎಂದಿದ್ದಕ್ಕೆ ಹಲ್ಲೆ​: ಸಂತ್ರಸ್ತ ನಿರ್ವಾಹಕನ ವಿರುದ್ಧವೇ ಪೋಕ್ಸೋ ಕೇಸ್
ಎಫ್​ಐಆರ್, ನಿರ್ವಾಹಕ
Follow us
Sahadev Mane
| Updated By: ವಿವೇಕ ಬಿರಾದಾರ

Updated on: Feb 22, 2025 | 1:26 PM

ಬೆಳಗಾವಿ, ಫೆಬ್ರವರಿ 22: ಕನ್ನಡ ಮಾತನಾಡು ಎಂದಿದ್ದಕ್ಕೆ ಹಲ್ಲೆಗೊಳಗಾದ ಕೆಎಸ್​ಆರ್​ಟಿಸಿ ಬಸ್ ನಿವಾರ್ಹಕನ (KSRTC Bus Conductor) ವಿರುದ್ಧ ಪೋಕ್ಸೋ ಕೇಸ್ (POCSO Case) ದಾಖಲಾಗಿದೆ. ಹಲ್ಲೆಗೊಳಗಾದ ನಿರ್ವಾಹಕ ಮಹಾದೇವಪ್ಪ ಹುಕ್ಕೇರಿ ವಿರುದ್ಧ ಮಾರಿಹಾಳ ಪೊಲೀಸ್​​ ಠಾಣೆಯಲ್ಲಿ ಪೋಕ್ಸೋ ಕೇಸ್​ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ. ನಿರ್ವಾಹಕ ಮಹಾದೇವಪ್ಪ ಹುಕ್ಕೇರಿ ಬಸ್​ನಲ್ಲಿ ನನ್ನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದರು ಎಂದು ಯುವಕರನ್ನು ಕರೆಸಿ ಹಲ್ಲೆ ಮಾಡಿಸಿದ್ದ ಬಾಲಕಿ ದೂರು ನೀಡಿದ್ದಾಳೆ.

ಪ್ರಕರಣ ಸಂಬಂಧ ಬೆಳಗಾವಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾತನಾಡಿ, ಬಾಳೇಕುಂದ್ರಿಯಲ್ಲಿ ಪ್ರಯಾಣಿಕ ಹಾಗೂ ನಿರ್ವಾಹಕರ ನಡುವೆ ಜಗಳವಾಗಿದೆ. ಇದೇ ವಿಚಾರಕ್ಕೆ ನಿರ್ವಾಹಕರ ಮೇಲೆ ಹಲ್ಲೆಯಾಗಿದ್ದು, ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಹೇಳಿದರು.

ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಮೂರು ತಂಡ ರಚನೆ ಮಾಡಿ ನಾಪತ್ತೆಯಾದವರಿಗೆ ಹುಡುಕಾಟ ನಡೆದಿದೆ. ಭಾಷಾ ವಿಚಾರಕ್ಕೆ ಗಲಾಟೆಯಾಗಿದೆ ಅನ್ನೋ ಮಾಹಿತಿ ಇದೆ ಎಂದು ತಿಳಿಸಿದರು.

ಕನ್ನಡ ಪರ ಹೋರಾಟಗಾರರ ಪ್ರತಿಭಟನೆ

ನಿರ್ವಾಹಕನ ಮೇಲೆ ಹಲ್ಲೆ ನಡೆಸಿರುವುದನ್ನು ಖಂಡಿಸಿ ಪಂಥಬಾಳೇಕುಂದ್ರಿ ಗ್ರಾಮದ ಬಳಿಯ ಬೆಳಗಾವಿ-ಬಾಗಲಕೋಟೆ ರಸ್ತೆ ತಡೆದು ಕರವೇ ಶಿವರಾಮೇಗೌಡ ಬಣ ಪ್ರತಿಭಟನೆ ನಡೆಸಿತು. ಎಂಇಎಸ್ ಪುಂಡರ ವಿರುದ್ಧ ಧಿಕ್ಕಾರ ಕೂಗಿ ಕರವೇ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಮರಾಠಿ ಪುಂಡರು ಈಗ ಕನ್ನಡಿಗರ ಮೇಲೆ ಕೈಮಾಡಿದ್ದು ನೀಚ ಕೃತ್ಯ: ಟಿ.ಎ.ನಾರಾಯಣಗೌಡ

ಕನ್ನಡದಲ್ಲಿ ಮಾತನಾಡಿದ್ದಕ್ಕೆ, ಮರಾಠಿಯಲ್ಲಿ ಮಾತನಾಡಲಿಲ್ಲ ಎಂಬ ಕಾರಣಕ್ಕೆ ಮಹದೇವ ಎಂಬ ಬಸ್ ನಿರ್ವಾಹಕರ ಮೇಲೆ ಮರಾಠಿ ಪುಂಡರು ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ. ಇದನ್ನು ಯಾವುದೇ ಕಾರಣಕ್ಕೂ ಸಹಿಸಿಕೊಳ್ಳಲು ಸಾಧ್ಯವಿಲ್ಲ. ಬೆಳಗಾವಿ ಪೊಲೀಸರು ಮಹದೇವ ಅವರ ಮೇಲೆ ಹಲ್ಲೆ ನಡೆಸಿದ ಪ್ರತಿಯೊಬ್ಬನನ್ನೂ ಬಂಧಿಸಿ ಜೈಲಿಗೆ ಕಳುಹಿಸಬೇಕು. ಇಲ್ಲವಾದಲ್ಲಿ ಇದರ ಪರಿಣಾಮ ಭೀಕರವಾಗುತ್ತದೆ ಕರವೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಎಚ್ಚರಿಸಿದ್ದಾರೆ.

ಕನ್ನಡಿಗರು ಸೌಹಾರ್ದಪ್ರಿಯರು, ಶಾಂತಿಪ್ರಿಯರು. ಹಾಗಂದ ಮಾತ್ರಕ್ಕೆ ನಮ್ಮ ಮೇಲೆ ವಿನಾಕಾರಣ ಹಲ್ಲೆ ನಡೆಸುವ ಭಾಷಾಂಧರನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಬೆಳಗಾವಿಯನ್ನು ಕಿತ್ತುಕೊಳ್ಳಲು ನಡೆಸಿದ ಪ್ರಯತ್ನಗಳೆಲ್ಲ ವಿಫಲವಾದ ಮೇಲೆ ಹತಾಶರಾಗಿರುವ ಭಾಷಾಂಧ ಮರಾಠಿ ಪುಂಡರು ಈಗ ಕನ್ನಡಿಗರ ಮೇಲೆ ಕೈಮಾಡುವ ನೀಚ ಕೃತ್ಯಕ್ಕೆ ಇಳಿದಿದ್ದಾರೆ. ಪೊಲೀಸರು ಇವರ ಮೇಲೆ ಕ್ರಮ ಕೈಗೊಳ್ಳದಿದ್ದರೆ ಕನ್ನಡಿಗರ ಸಿಟ್ಟು ರಟ್ಟೆಗೆ ಬರುತ್ತದೆ. ಅಂಥ‌ ಸಂಘರ್ಷಕ್ಕೆ ಎಡೆ ಮಾಡಿಕೊಡದೇ ಪುಂಡರನ್ನು ಮೊದಲು ಬಂಧಿಸಲಿ ಎಂದು ಒತ್ತಾಯಿಸಿದ್ದಾರೆ.

ಹಲ್ಲೆಗೊಳಗಾದ ಮಹದೇವ ಅವರು ಬೇಗ ಗುಣಮುಖರಾಗಲಿ, ಅವರೊಂದಿಗೆ ಕರ್ನಾಟಕ ರಕ್ಷಣಾ‌ ವೇದಿಕೆ ಇರುತ್ತದೆ. ಈಗಾಗಲೇ ನಮ್ಕ ಕರವೇ ಬೆಳಗಾವಿ ಜಿಲ್ಲಾಧ್ಯಕ್ಷರಾದ ದೀಪಕ್ ಗುಡಗನಟ್ಟಿ ಸೇರಿದಂತೆ ನಮ್ಮ ಪದಾಧಿಕಾರಿಗಳು ಮಹದೇವ ಅವರನ್ನು ಭೇಟಿ ಮಾಡಿ ಸಾಂತ್ವನ‌ ಹೇಳಿದ್ದಾರೆ, ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ. ಕೆಎಸ್ ಆರ್ ಟಿಸಿ ಚಾಲಕರು, ನಿರ್ವಾಹಕರು ಈ ಘಟನೆಯಿಂದ ಧೃತಿಗೆಡುವ ಅವಶ್ಯಕತೆ ಇಲ್ಲ. ಇಂಥ ಹೇಡಿಗಳಿಗೆ ಬೆದರುವ ಅಗತ್ಯವೂ ಇಲ್ಲ ಎಂದರು.

ಇದನ್ನೂ ಓದಿ: ಬೆಳಗಾವಿ ಜಿಲ್ಲೆಯಲ್ಲಿ ಮರಾಠಿ ಭಾಷಿಕರಿಂದ ಮತ್ತೇ ಪುಂಡಾಟ, ಕರ್ತವ್ಯನಿರತ ಕೆಎಸ್ಸಾರ್ಟಿಸಿ ನಿರ್ವಾಹಕ, ಚಾಲಕ ಮೇಲೆ ಹಲ್ಲೆ

ಕರ್ನಾಟಕದ ನೆಲದಲ್ಲಿ ಬದುಕುವವರು ಕನ್ನಡ ಕಲಿತು ಕನ್ನಡಿಗರಾಗಿ ಬಾಳಬೇಕು. ಅದನ್ನು ಹೊರತುಪಡಿಸಿ ತಮ್ಮ ಭಾಷೆ ಕಲಿಯಿರಿ ಎಂದು ತಾಕೀತು ಮಾಡಿ ದೌರ್ಜನ್ಯ ನಡೆಸಲು ಹೊರಟರೆ ಅಂಥವರಿಗೆ ಕರ್ನಾಟಕ ರಕ್ಷಣಾ‌ ವೇದಿಕೆ ತಕ್ಕ ಪಾಠ ಕಲಿಸಲಿದೆ. ಇದು ನನ್ನ ನೇರವಾದ ಎಚ್ಚರಿಕೆ ಎಂದು ಹೇಳಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ