AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯ ಪ್ರದೇಶದಲ್ಲಿ 2 ಫೈಟರ್​ ಜೆಟ್​ಗಳ ಡಿಕ್ಕಿ: ಹುತಾತ್ಮರಾಗಿದ್ದು ಬೆಳಗಾವಿ ಮೂಲದ ಯೋಧ

2 IAF ಜೆಟ್​ಗಳ ನಡುವೆ ಡಿಕ್ಕಿಯಾಗಿ ಬೆಳಗಾವಿಯ ಯೋಧ ವಿಂಗ್​ ಕಮಾಂಡರ್​ ಹನುಮಂತರಾವ್ ಆರ್.ಸಾರಥಿ ಹುತಾತ್ಮ ಆಗಿದ್ದಾರೆ. ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಮಧ್ಯ ಪ್ರದೇಶದಲ್ಲಿ 2 ಫೈಟರ್​ ಜೆಟ್​ಗಳ ಡಿಕ್ಕಿ: ಹುತಾತ್ಮರಾಗಿದ್ದು ಬೆಳಗಾವಿ ಮೂಲದ ಯೋಧ
ವಿಂಗ್ ಕಮಾಂಡರ್​ ಹನುಮಂತರಾವ್ ಆರ್.ಸಾರಥಿ
TV9 Web
| Edited By: |

Updated on:Jan 28, 2023 | 11:08 PM

Share

ಬೆಳಗಾವಿ: ಸೇನೆಯ ವಾಯು ವಿಮಾನಗಳಾದ ಸುಖೋಯ್-30 (Sukhoi-30) ಮತ್ತು ಮಿರಾಜ್ 2000 (Mirage 2000) ಮಧ್ಯೆ ಡಿಕ್ಕಿ ಹೊಡೆದು ವಿಮಾನಗಳು ಮಧ್ಯಪ್ರದೇಶದ ಮೊರೆನಾ ಬಳಿ ಇಂದು(ಜ. 28) ಬೆಳಿಗ್ಗೆ 5:30ಕ್ಕೆ ಪತನಗೊಂಡಿವೆ. ಘಟನೆಯಲ್ಲಿ ಇಬ್ಬರು ಪೈಲಟ್​ ಪೈಕಿ ಒಬ್ಬ ಪೈಲಟ್ ಹುತಾತ್ಮ ಆಗಿದ್ದಾರೆ. ಆ ಹುತಾತ್ಮ ಯೋಧ ಮೂಲತಃ ಬೆಳಗಾವಿಯ ಗಣೇಶಪುರದ ನಿವಾಸಿ ವಿಂಗ್​ ಕಮಾಂಡರ್​ ಹನುಮಂತರಾವ್ ಆರ್.ಸಾರಥಿ. ತಂದೆ, ತಾಯಿ, ಪತ್ನಿ, ಇಬ್ಬರು ಮಕ್ಕಳನ್ನು ಯೋಧ ಹನುಮಂತರಾವ್ ಅಗಲಿದ್ದಾರೆ. ಹನುಮಂತರಾವ್ ನಿವಾಸಕ್ಕೆ ವಾಯುಸೇನೆ​ ತರಬೇತಿ ಅಧಿಕಾರಿಗಳ ಭೇಟಿ ನೀಡಿದ್ದಾರೆ.

ಇನ್ನು ಬೆಳಗಾವಿ ಗ್ರಾಮೀಣ ಕ್ಷೇತ್ರ ವ್ಯಾಪ್ತಿಯ ಗಣೇಶಪುರದ ಸಂಭಾಜೀ ನಗರದ ಹುತಾತ್ಮ ವಿಂಗ್ ಕಮಾಂಡರ್​ ಹನುಮಂತರಾವ್ ಸಾರಥಿ ನಿವಾಸಕ್ಕೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ವಿಂಗ್ ಕಮಾಂಡರ್ ಮನೆಯಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: IAF Planes Crash: ಮಧ್ಯಪ್ರದೇಶದ ಆಗಸದಲ್ಲಿ ಸುಖೋಯ್-ಮಿರಾಜ್ ಯುದ್ಧವಿಮಾನಗಳು ಡಿಕ್ಕಿ; ಒಬ್ಬ ಪೈಲಟ್​ ಸಾವು

ಘಟನೆ ಹಿನ್ನೆಲೆ 

ಗ್ವಾಲಿಯರ್ ವಾಯುನೆಲೆಯಿಂದ ಯುದ್ಧವಿಮಾನಗಳು ಟೇಕಾಫ್ ಆಗಿದ್ದವು, ವಿಮಾನ ಹಾರಾಟ ಆರಂಭಿಸಿದ 10 ನಿಮಿಷಗಳಲ್ಲಿ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಸುಖೋಯ್ ಸು -30 ಮತ್ತು ಮಿರಾಜ್ 2000 ಮಧ್ಯಪ್ರದೇಶದ ಗ್ವಾಲಿಯರ್ ಬಳಿ ಪತನಗೊಂಡ ನಂತರ ಭಾರತೀಯ ವಾಯುಪಡೆಯ ಪೈಲಟ್ ಸಾವನ್ನಪ್ಪಿದ್ದಾರೆ. Su-30 ನಲ್ಲಿದ್ದ ಇಬ್ಬರು ಪೈಲಟ್‌ಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಮಿರಾಜ್‌ನಲ್ಲಿನ ಪೈಲಟ್ ಅಪಘಾತದಲ್ಲಿ ಮಾರಣಾಂತಿಕವಾಗಿ ಗಾಯಗೊಂಡ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಪತನಗೊಂಡ ವಿಮಾನದ ಅವಶೇಷಗಳು ರಾಜಸ್ಥಾನದ ಭರತ್‌ಪುರ ಮತ್ತು ಮಧ್ಯಪ್ರದೇಶದ ಮೊರೆನಾದಲ್ಲಿ ಪತ್ತೆಯಾಗಿವೆ.

ಇದನ್ನೂ ಓದಿ: System Glitch: ತಾಂತ್ರಿಕ ದೋಷದಿಂದಾಗಿ ತ್ರಿಭುವನ್ ವಿಮಾನ ನಿಲ್ದಾಣದಿಂದ ವಿಮಾನಗಳ ಹಾರಾಟ ಸ್ಥಗಿತ

ಎರಡು ವಿಮಾನಗಳು ತಾಲೀಮು

ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ. ಈ ಎರಡು ಯುದ್ಧ ವಿಮಾನಗಳ ನಡುವೆ  ವಾಯು ಘರ್ಷಣೆ ಸಂಭವಿಸಿದೆಯೇ ಅಥವಾ ಇಲ್ಲವೇ ಎಂಬುದನ್ನು ಪತ್ತೆ ಮಾಡಲು ಐಎಎಫ್ ತನಿಖಾ ನ್ಯಾಯಾಲಯಕ್ಕೆ ಆದೇಶಿಸಿದೆ. ಭವಿಷ್ಯದಲ್ಲಿ ಯಾವುದೇ ರೀತಿಯ ತಾಂತ್ರಿಕ ದೋಷಗಳ ಉಂಟಾಗಬಾರದು ಎಂದು ಎರಡು ವಿಮಾನಗಳು ತಾಲೀಮು ನಡೆಸಿದೆ ಎಂದು ಹೇಳಿದೆ. ಆದರೆ ಇದೀಗ ತಾಂತ್ರಿಕ ದೋಷ ಕಂಡು ಬಂದಿರಬಹುದು ಎಂದು ಹೇಳಲಾಗಿದೆ. ಸುಖೋಯ್-30 ಯುದ್ಧವಿಮಾನದ ಪೈಲಟ್​​ನ್ನು ವಿಶೇಷ ಹೆಲಿಕಾಪ್ಟರ್ ಮೂಲಕ ಆಸ್ಪತ್ರೆ ಸಾಗಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:07 pm, Sat, 28 January 23

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು