ಬೆಳಗಾವಿಯಲ್ಲಿ ಎರಡು ಬೈಕ್​ಗಳ ನಡುವೆ ಡಿಕ್ಕಿ, ಮೂವರು ಸ್ಪಾಟ್ ಡೆತ್

ಹುಬ್ಬಳ್ಳಿ ಸಮೀಪದ ತಡಸ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತ ನಡೆದಿದ್ದು, ಗಾಯಾಳುಗಳ ರಕ್ಷಣೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಧಾವಿಸಿದರು. ಇನ್ನೊಂದೆಡೆ ಬೆಳಗಾವಿಯಲ್ಲಿ ಬೈಕ್ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ.

ಬೆಳಗಾವಿಯಲ್ಲಿ ಎರಡು ಬೈಕ್​ಗಳ ನಡುವೆ ಡಿಕ್ಕಿ, ಮೂವರು ಸ್ಪಾಟ್ ಡೆತ್
ಸಾಂದರ್ಭಿಕ ಚಿತ್ರ
Follow us
TV9 Web
| Updated By: Rakesh Nayak Manchi

Updated on:Jan 28, 2023 | 7:50 PM

ಬೆಳಗಾವಿ: ಎರಡು ಬೈಕ್​ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ (Bike Accident In Belagavi) ಮೂವರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ರಾಯಬಾಗ ತಾಲೂಕಿನ ನಿಡಗುಂದಿ ಬಳಿ ನಡೆದಿದೆ. ಎರಡು ಬೈಕ್‌ಗಳಲ್ಲಿ ಒಟ್ಟು ನಾಲ್ಕು ಜನ ಪ್ರಯಾಣ ಮಾಡುತ್ತಿದ್ದರು. ಈ ವೇಳೆ ರಾಯಬಾಗ ಹಾರೂಗೇರಿ ಮುಖ್ಯರಸ್ತೆಯಲ್ಲಿ ಬೈಕ್​ಗಳ ನಡುವೆ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಮತ್ತೋರ್ವ ಬೈಕ್ ಸವಾರನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದು, ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ.

ಹುಬ್ಬಳ್ಳಿಯಲ್ಲಿ ರಸ್ತೆ ಅಪಘಾತ, ಗಾಯಾಳುಗಳ ನೆರವಿಗೆ ಧಾವಿಸಿದ ಗೃಹಸಚಿವರು

ಹುಬ್ಬಳ್ಳಿ: ಭೀಕರ ರಸ್ತೆ ಅಪಘಾತದಲ್ಲಿ (Road Accident In Hubballi) ಆರು ಮಂದಿ ಗಾಯಗೊಂಡ ಘಟನೆ ಹುಬ್ಬಳ್ಳಿ ಸಮೀಪದ ತಡಸ್ ಬಳಿ ಸಂಭವಿಸಿದೆ. ಇದೇ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಗಾಯಾಳುಗಳ ರಕ್ಷಣೆಗೆ ಧಾವಿಸಿದ್ದಾರೆ. ರಸ್ತೆ ಅಪಘಾತದಲ್ಲಿ ಗಾಯಗೊಂಡ ಆರು ಜನರನ್ನು ಪ್ರಾಥಮಿಕ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲು ಗೃಹ ಸಚಿವರು ತಮ್ಮ ಬೆಂಗಾವಲು ವಾಹನದಲ್ಲಿ ಕಳುಹಿಸಿದರು. ಆ ಮೂಲಕ ಜನಪ್ರತಿನಿಧಿಯಾಗಿ ಜನರ ಕಷ್ಟಕ್ಕೆ ಸ್ಪಂಧಿಸಿ ಮಾನವೀಯತೆ ಮೆರೆದರು.

ಇದನ್ನೂ ಓದಿ: ರಸ್ತೆ ಅಪಘಾತ ಜಾಸ್ತಿಯಾಗುವುದಕ್ಕೆ ಉತ್ತಮ ರಸ್ತೆಗಳೇ ಕಾರಣ: ಮಧ್ಯಪ್ರದೇಶದ ಬಿಜೆಪಿ ಶಾಸಕ

ಮಾಜಿ ಶಾಸಕ ವಿ.ಎಸ್.ಪಾಟೀಲ್ ಕಾರಿಗೆ ಟ್ರ್ಯಾಕ್ಟರ್​ ಡಿಕ್ಕಿ

ಕಾರವಾರ: ಮಾಜಿ ಶಾಸಕ ವಿ.ಎಸ್.ಪಾಟೀಲ್ ಕಾರಿಗೆ ಟ್ರ್ಯಾಕ್ಟರ್​ ಡಿಕ್ಕಿ ಹೊಡೆದ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿ‌ನ ಬನ್ನಿಕಟ್ಟಿ ಗ್ರಾಮದ ಬಳಿ ನಡೆದಿದೆ. ಘಟನೆಯಲ್ಲಿ ಪಾಟೀಲ್ ಕಾರು ಹಿಂಭಾಗ ಸಂಪೂರ್ಣ ಜಖಂಗೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕಾರು ಸಂಚರಿಸುತ್ತಿದ್ದಾಗ ಹಿಂಬದಿಯಿಂದ ಕಬ್ಬು ತುಂಬಿಕೊಂಡು ಬಂದ ಟ್ರಾಕ್ಟರ್ ಡಿಕ್ಕಿ ಹೊಡೆದಿದೆ. ವಿ.ಎಸ್.ಪಾಟೀಲ್ ಅವರು ಯಲ್ಲಾಪುರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಸಂಭವನೀಯ ಅಭ್ಯರ್ಥಿಯಾಗಿದ್ದಾರೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:41 pm, Sat, 28 January 23

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?